ಅಮೆರಿಕ ಜತೆ ಕಿಮ್ ಮಾತುಕತೆಗೆ ಒಪ್ಪಿಗೆ
Team Udayavani, Mar 7, 2018, 9:30 AM IST
ಸಿಯೋಲ್: ಅಮೆರಿಕವನ್ನು ವಿಶ್ವದ ಭೂಪಟದಿಂದಲೇ ಅಳಿಸಿ ಹಾಕುವೆ ಎಂದು ಎಚ್ಚರಿಸಿ ಸುದ್ದಿಯಾಗಿದ್ದ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿ ಕೈಬಿಡಲು ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲ, ಇದೇ ಮೊದಲ ಬಾರಿಗೆ ಅಮೆರಿಕದ ಜತೆಗೆ ಮಾತುಕತೆ ನಡೆಸುವ ಉತ್ಸಾಹ ತೋರಿದ್ದಾರೆ. ಜತೆಗೆ ದಕ್ಷಿಣ ಕೊರಿಯಾ ಜತೆಗೆ ಮುಂದಿನ ತಿಂಗಳು ಮಾತುಕತೆ ನಡೆಸುವ ಇರಾದೆಯನ್ನೂ ವ್ಯಕ್ತಪಡಿಸಿದ್ದಾರೆ.
ಉತ್ತರ ಕೊರಿಯಾಕ್ಕೆ ಇರುವ ಭದ್ರತೆಯ ಬೆದರಿಕೆಯ ಬಗ್ಗೆ ವಿವರಣೆ ನೀಡಿದಲ್ಲಿ ಪರಮಾಣು ಶಸ್ತ್ರಾಸ್ತ್ರಗಳ ಅಭಿವೃದ್ಧಿ ನಡೆಸುವ ಅಗತ್ಯವೇ ಬರುವುದಿಲ್ಲ ಎಂದು ಅಲ್ಲಿನ ಸರ್ಕಾರ ಪ್ರತಿಪಾದಿಸಿದೆ. ಇತ್ತೀಚೆಗಷ್ಟೇ ಮುಕ್ತಾಯವಾದ ಚಳಿಗಾಲದ ಒಲಿಂಪಿಕ್ಸ್ ವೇಳೆ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೆ ಇನ್ ಈ ಬಗ್ಗೆ ಮುತುವರ್ಜಿ ವಹಿಸಿ ಮಾತುಕತೆ ನಡೆಸಬೇಕು ಎಂದು ಉತ್ತರ ಕೊರಿಯಾಕ್ಕೆ ಮನವರಿಕೆ ಮಾಡಿದ್ದರು. ಎಪ್ರಿಲ್‌ನಲ್ಲಿ ಅವರಿಬ್ಬರೂ ಭೇಟಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Missile Strike: ಉಕ್ರೇನ್ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Israel; ಪ್ರಧಾನಿ ನಿವಾಸಕ್ಕೆ ಬಾಂಬ್ ದಾಳಿ: 3 ಮಂದಿ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.