ಕಿರಿದಾಗುತ್ತಿದೆ ಓಜೋನ್‌ ರಂಧ್ರ

Team Udayavani, Apr 8, 2017, 6:47 AM IST

08-NATIONAL-2.jpg

ವಾಷಿಂಗ್ಟನ್‌: ಓಜೋನ್‌ ಪದರದಲ್ಲಿನ ರಂಧ್ರ ಚಿಕ್ಕದಾಗುತ್ತಿದೆ! ಇಂಥದೊಂದು ಸಿಹಿ ಸುದ್ದಿಯನ್ನು ಅಂತಾರಾಷ್ಟ್ರೀಯ ನಿಯತಕಾಲಿಕೆ “ಸೈನ್ಸ್‌’ ವರದಿ ಮಾಡಿದೆ. ರಂಧ್ರ ಕಿರಿದಾಗಿರು­ವುದನ್ನು ದೃಢಪಡಿಸುವಂತಹ ಬಲವಾದ ಸಾಕ್ಷ್ಯ ದೊರೆತಿರುವುದಾಗಿ ಪತ್ರಿಕೆ ತಿಳಿಸಿದೆ. 

ಕ್ಲೋರೋಫ್ಲೋರೋ ಕಾರ್ಬನ್‌ನ (ಸಿಎಫ್ಸಿ) ದುಷ್ಪರಿಣಾಮದಿಂದ ಓಜೋನ್‌ ಪದರದಲ್ಲಿ ರಂಧ್ರಗಳಾಗುತ್ತಿವೆ ಎಂದು ದಶಕಗಳ ಹಿಂದೆಯೇ ತಿಳಿದುಬಂದಿತ್ತು. ಅನಂತರ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಅತಿಯಾ ಗಿದ್ದ ಸಿಎಫ್ಸಿ ರೀತಿಯ ಪರಿಸರ ಹಾಗೂ ಓಜೋನ್‌ ಪದರಕ್ಕೆ ಹಾನಿಮಾಡುವ ರಾಸಾಯನಿಕಗಳ ಬಳಕೆಯನ್ನು 1987ರಲ್ಲಿ ನಿಷೇಧಿಸಲಾಗಿತ್ತು. ಪರಿಣಾಮ 2000ದಿಂದ ಈಚೆಗೆ ಓಜೋನ್‌ ಪದರದ ರಂಧ್ರ 1.5 ದಶಲಕ್ಷ ಚದರ ಮೈಲಿಯಷ್ಟು ಚಿಕ್ಕದಾಗಿದೆ. 21ನೇ ಶತಮಾನದ ಮಧ್ಯ ಭಾಗದ ವೇಳೆಗೆ ರಂಧ್ರ ಸಂಪೂರ್ಣ ಮುಚ್ಚಿಕೊಳ್ಳಲಿದೆ ಎಂದು ಸಂಶೋಧಕರು ಅಭಿಪ್ರಾಯ­ಪಟ್ಟಿದ್ದಾರೆ.

ರಂಧ್ರದ ಸ್ಥಿತಿ ಹಾಗೂ ವಾತಾವರಣದಲ್ಲಿ ಸಿಎಫ್ಸಿ ಪ್ರಮಾಣ ತಿಳಿಯುವ ಉದ್ದೇಶ­ದಿಂದ ಅಂಟಾರ್ಟಿಕಾದಲ್ಲಿ ಬಿಡಲಾಗಿದ್ದ ವೆದರ್‌ ಬಲೂನ್‌ಗಳು ಹಾಗೂ ಉಪಗ್ರಹ­ಗಳಿಂದ, ಎಂಐಟಿಯ ಸುಸಾನ್‌ ಸೋಲೊಮೊನ್‌ ನೇತೃತ್ವದ ಸಂಶೋಧಕರ ತಂಡ ಮಾಹಿತಿ ಸಂಗ್ರಹಿಸಿದೆ. ಅದರಂತೆ, ಸಿಎಫ್ಸಿ ಪ್ರಮಾಣ ನಿಯಂತ್ರಣಕ್ಕೆ ಬಂದಿದ್ದು, ರಂಧ್ರಗಳು ಗಣನೀಯವಾಗಿ ಕ್ಷೀಣಿಸುತ್ತಿವೆ. ಓಜೋನ್‌ ಪದರ 1980ರ ಹಿಂದಿನ ಸುಸ್ಥಿತಿಗೆ ಮರಳುತ್ತಿರುವ ಬಗ್ಗೆ ಸಂಶೋಧಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಸೂರ್ಯನ ಅತಿನೇರಳೆ ಕಿರಣಗಳು ನೇರ ವಾಗಿ ಭೂಮಿಗೆ ಬರುವುದರಿಂದ ನಮ್ಮ ಕಣ್ಣು ಮತ್ತು ಚರ್ಮಕ್ಕೆ ಹಾನಿಯುಂಟುಮಾಡುತ್ತವೆ. ಇಂತಹ ಅಪಾಯಕಾರಿ ಕಿರಣಗಳನ್ನು ತಡೆಯುವ ಮೂಲಕ ಮನುಕುಲವನ್ನು ರಕ್ಷಿಸುತ್ತಿರುವ ಓಜೋನ್‌ ಪದರದಲ್ಲಿ ಅಮೆರಿಕದ ಭೂ ವಿಸ್ತೀರ್ಣದಷ್ಟು ದೊಡ್ಡ ರಂಧ್ರ ಸೃಷ್ಟಿಯಾಗಿತ್ತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.