Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?
Team Udayavani, May 19, 2024, 6:45 AM IST
ಹೊಸದಿಲ್ಲಿ: ಸ್ಥಳೀಯರು ಮತ್ತು ವಿದೇಶಿ ವಿದ್ಯಾರ್ಥಿಗಳ ನಡುವಿನ ಸಂಘರ್ಷ ದಿಂದಾಗಿ ಕಿರ್ಗಿಸ್ಥಾನದ ರಾಜಧಾನಿ ಬಿಶ್ಕೆಕ್ನಲ್ಲಿ 2 ದಿನಗಳಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತ, ಪಾಕಿಸ್ಥಾನ ಮತ್ತು ಬಾಂಗ್ಲಾದೇಶದ ವಿದ್ಯಾ ರ್ಥಿಗಳು ಹಾಗೂ ಸ್ಥಳೀಯರ ನಡುವಿನ ಜಗಳದಲ್ಲಿ ಮೂವರು ಪಾಕಿ ಸ್ಥಾನಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮನೆ ಯಲ್ಲೇ ಇರುವಂತೆ ಭಾರತೀಯ ವಿದೇ ಶಾಂಗ ಸಚಿವಾಲಯವು ಸೂಚಿಸಿದೆ.
ಕಿರ್ಗಿಸ್ಥಾನ ಮತ್ತು ಈಜಿಪ್ಟ್ ವಿದ್ಯಾರ್ಥಿಗಳ ನಡುವಿನ ಜಗಳದ ವೀಡಿಯೋ ಮೇ 13ರಂದು ವೈರಲ್ ಆಗುತ್ತಿದ್ದಂತೆ ಸಂಘರ್ಷ ತೀವ್ರಗೊಂಡಿದೆ. ಸ್ಥಳೀಯರ ಗುಂಪುಗಳು ಬಿಶ್ಕೆಕ್ನಲ್ಲಿರುವ ವಿಶ್ವವಿದ್ಯಾನಿಲಯಗಳ ಹಾಸ್ಟೆಲ್ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸು ತ್ತಿವೆ. ಇಲ್ಲಿನ ವಿಶ್ವವಿದ್ಯಾನಿಲಯಗಳಲ್ಲಿ ಭಾರತ, ಪಾಕಿಸ್ಥಾನ ಮತ್ತು ಬಾಂಗ್ಲಾ ದೇಶದ ಹೆಚ್ಚಿನ ವಿದ್ಯಾರ್ಥಿಗಳಿದ್ದಾರೆ.
ವರದಿಯ ಪ್ರಕಾರ ಸಂಘರ್ಷದಲ್ಲಿ ಯಾವುದೇ ಭಾರತೀಯ ವಿದ್ಯಾರ್ಥಿಗೆ ಹಾನಿಯಾಗಿಲ್ಲ. ಈ ಮಧ್ಯೆ, ಸ್ಥಳೀಯ ಪೊಲೀಸರು ವಿದೇಶಿ ವಿದ್ಯಾರ್ಥಿಗಳ ನೆರವಿಗೆ ಬರುತ್ತಿಲ್ಲ ಎಂಬ ಆರೋಪವಿದೆ. ಕಿರ್ಗಿಸ್ಥಾನದಲ್ಲಿ ಅಂದಾಜು 15,000 ಭಾರತೀಯ ವಿದ್ಯಾರ್ಥಿಗಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.