ಚೀನಕ್ಕೆ ಮತ್ತೆ ಲಾಕ್‌ಡೌನ್‌ ; ಬೀಜಿಂಗ್‌ನ ಹಲವು ಪ್ರದೇಶಗಳಲ್ಲಿ ಸಾಮೂಹಿಕ ಸೋಂಕು ಟೆಸ್ಟ್‌


Team Udayavani, Jun 16, 2020, 8:47 AM IST

ಚೀನಕ್ಕೆ ಮತ್ತೆ ಲಾಕ್‌ಡೌನ್‌

ಚೀನ ರಾಜಧಾನಿ ಬೀಜಿಂಗ್‌ನಲ್ಲಿ ಮಹಿಳೆ ಮಗುವನ್ನು ಎತ್ತಿಕೊಂಡು ಸೋಂಕು ಪರೀಕ್ಷೆಗಾಗಿ ಕಾದು ನಿಂತಿರುವುದು.

ಬೀಜಿಂಗ್‌: ವೈರಸ್‌ನ ಸವಾಲು ಗೆದ್ದ ಖುಷಿಯಲ್ಲಿದ್ದ ಚೀನದಲ್ಲಿ ಕೋವಿಡ್ ಮಹಾಮಾರಿ ಮತ್ತೆ ಹಾವಳಿಯಿಟ್ಟಿದೆ. ಪರಿಣಾಮ ಹೊಸ ಕೇಸುಗಳು ಕಾಣಿಸಿಕೊಂಡ ಬೀಜಿಂಗ್‌ನ ಹಲವು ಭಾಗಗಳಲ್ಲಿ ಸೋಮವಾರ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ. ಚೀನದಲ್ಲಿ ಕೋವಿಡ್ ದ ಎರಡನೇ ಅಲೆ ಆರಂಭವಾಗಿದೆ ಎಂದು ತಜ್ಞರು ಅನುಮಾನ ವ್ಯಕ್ತಪಡಿಸಿದ ಬೆನ್ನಲ್ಲೇ ರಾಜಧಾನಿ ಬೀಜಿಂಗ್‌ನಲ್ಲಿ 79 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ನಗರದಲ್ಲಿನ ಎಲ್ಲ ಒಳಾಂಗಣ ಕ್ರೀಡೆಗಳು ಮತ್ತು ಮನೋರಂಜನ ಕೇಂದ್ರಗಳಿಗೆ ಸೋಮವಾರ ಬೀಗ ಹಾಕಲಾಗಿದೆ. ನಗರದ ಅತಿ ದೊಡ್ಡ ವ್ಯಾಪಾರ ಕೇಂದ್ರವಾ ಗಿರುವ ಕ್ಸಿನ್‌ಫಾಡಿ ಮಾರುಕಟ್ಟೆಯಲ್ಲಿ ಕೆಲ ದಿನಗಳ ಹಿಂದೆ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇಡೀ ಮಾರುಕಟ್ಟೆ ಯನ್ನು ಸೀಲ್‌ಡೌನ್‌ ಮಾಡಲಾಗಿದೆ. ಮಾರುಕಟ್ಟೆಗೆ ಹೊಂದಿ ಕೊಂಡಿರುವ 21 ಬಡಾವಣೆಗಳು ಹಾಗೂ ಅಲ್ಲಿಗೆ ಭೇಟಿ ನೀಡಿದ್ದ ಜನರು ವಾಸವಿರುವ ಹತ್ತು ಪ್ರದೇಶ ಗಳನ್ನು ಲಾಕ್‌ಡೌನ್‌ ಮಾಡಲಾಗಿದೆ. ಈ ಪ್ರದೇಶಗಳಲ್ಲಿ ಸುಮಾರು 90,000 ಜನ ವಾಸವಿದ್ದಾರೆ ಎಂದು ಬೀಜಿಂಗ್‌ನ ಆರೋಗ್ಯ ಆಯೋಗದ ವಕ್ತಾರ ಗಾವೋ ಕ್ಸಿಯಾಜುನ್‌ ಮಾಹಿತಿ ನೀಡಿದ್ದಾರೆ.

ಮಾಸ್‌ ಟೆಸ್ಟ್‌: ಕೋವಿಡ್ ವೈರಸ್‌ ಸೋಂಕಿನ ಜನ್ಮಸ್ಥಾನ ಎಂದೇ ನಂಬಲಾಗಿರುವ ಚೀನದ ವುಹಾನ್‌ ನಗರದ ಬಳಿಕ ರಾಜಧಾನಿ ಬೀಜಿಂಗ್‌ನಲ್ಲಿ ಚೀನ ಸಮೂಹ ಪರೀಕ್ಷೆ ಪ್ರಕ್ರಿಯೆ ಆರಂಭಿಸಿದೆ. ಬೀಜಿಂಗ್‌ನಲ್ಲಿ 79 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾದ ಕಾರಣ ಸರಕಾರ ಈ ಕ್ರಮ ಕೈಗೊಂಡಿದೆ. ಸೋಂಕನ್ನು ನಿಯಂತ್ರಣಕ್ಕೆ ತಂದ ಬಹುತೇಕ ಎರಡು ತಿಂಗಳ ಬಳಿಕ ಕ್ಸಿನ್‌ಫಾಡಿ ಮಾರುಕಟ್ಟೆ ಯಲ್ಲಿ ವೈರಸ್‌ ಕಾಣಿಸಿಕೊಂಡಿತ್ತು. ಹೀಗಾಗಿ ಮಾರುಕಟ್ಟೆಗೆ ಭೇಟಿ ನೀಡಿದ್ದ 29,386 ಜನರನ್ನು ನ್ಯೂಕ್ಲಿಕ್‌ ಆಮ್ಲ ಪರೀಕ್ಷೆಗೆ ಒಳಪಡಿಸಲಾಗಿದೆ. ಮೇ 30ರಿಂದ ಮಾರುಕಟ್ಟೆಗೆ 2 ಲಕ್ಷಕ್ಕೂ ಅಧಿಕ ಗ್ರಾಹಕರು ಭೇಟಿ ನೀಡಿದ್ದು, ಅವರೆಲ್ಲರನ್ನೂ ಪರೀಕ್ಷೆಗೆ ಒಳಪಡಿಸುವ ಅಗತ್ಯವಿದೆ ಎಂದು ಗಾವೋ ಮಾಹಿತಿ ನೀಡಿದ್ದಾರೆ.

24 ಗಂಟೆಗಳಲ್ಲಿ 11502 ಕೇಸ್‌
ಸತತ 3ನೇ ದಿನವೂ ಭಾರತದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ 11 ಸಾವಿರ ದಾಟಿದೆ. ಭಾನುವಾರ ಬೆಳಗ್ಗೆ 8ರಿಂದ ಸೋಮವಾರ ಬೆಳಗ್ಗೆ 8ರವರೆಗಿನ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 325 ಮಂದಿ ಮೃತಪಟ್ಟು, 11,502 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟಾರೆ ಸಾವಿನ ಸಂಖ್ಯೆ 10 ಸಾವಿರದ ಸಮೀಪಕ್ಕೆ ಬಂದಿದೆ. ಈವರೆಗೆ 1,69,797 ಸೋಂಕಿತರು ಗುಣ ಮುಖರಾಗಿ ಮನೆಗೆ ಮರಳಿದ್ದು, ಗುಣಮುಖ ಪ್ರಮಾಣ ಶೇ.51.07ಕ್ಕೇರಿದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

6 ದಿನ, 10 ಸಾವಿರ ಪ್ರಕರಣ
ಪ್ರತಿದಿನ ಸರಾಸರಿ 1,600 ಹೊಸ ಪ್ರಕರಣಗಳೊಂದಿಗೆ ದೆಹಲಿಯಲ್ಲಿ ಕೇವಲ 6 ದಿನಗಳ ಅವಧಿಯಲ್ಲಿ 10 ಸಾವಿರ ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದು ರಾಷ್ಟ್ರರಾಜಧಾನಿಯಲ್ಲಿ ಸೋಂಕು ಎಷ್ಟರಮಟ್ಟಿಗೆ ವ್ಯಾಪಿಸುತ್ತಿದೆ ಎನ್ನುವುದಕ್ಕೆ ಸಾಕ್ಷಿ. ಆರಂಭದಲ್ಲಿ 10 ಸಾವಿರ ಮಂದಿಗೆ ಸೋಂಕು ತಗುಲಲು 79 ದಿನಗಳು ಬೇಕಾಗಿದ್ದವು. ನಂತರದಲ್ಲಿ 8 ದಿನಗಳ ಅವಧಿಯಲ್ಲಿ ಪ್ರಕರಣಗಳ ಸಂಖ್ಯೆ 20,000ದಿಂದ 30,000ಕ್ಕೆ ತಲುಪಿತ್ತು. ಆದರೆ, ಈಗ ಜೂ.9ರಂದು 30 ಸಾವಿರ ಇದ್ದ ಸೋಂಕಿತರ ಸಂಖ್ಯೆ ಜೂ.14ರಂದು 40 ಸಾವಿರಕ್ಕೇರಿದೆ. ಅಂದರೆ, ಕೇವಲ 6 ದಿನಗಳಲ್ಲಿ 10 ಸಾವಿರ ಮಂದಿಗೆ ಸೋಂಕು ತಗುಲಿದೆ.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.