ಮಹಿಂದ ರಾಜಪಕ್ಸ ಶ್ರೀಲಂಕಾ ಪ್ರಧಾನಿ
Team Udayavani, Oct 27, 2018, 6:00 AM IST
ಕೊಲಂಬೋ: ಶ್ರೀಲಂಕಾದಲ್ಲಿ ನಡೆದ ಹಠಾತ್ ಬೆಳವಣಿಗೆಯಲ್ಲಿ ಪ್ರಧಾನಿಯಾಗಿ ಮಹಿಂದ ರಾಜಪಕ್ಸ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶ್ರೀಲಂಕಾದ ಮೈತ್ರಿ ಸರಕಾರದಲ್ಲಿ ಕಳೆದ ಕೆಲವು ದಿನಗಳಿಂದ ಉಂಟಾಗಿದ್ದ ಗೊಂದಲ ಈ ಮೂಲಕ ಪರಿಹಾರ ಕಂಡಂತಾಗಿದೆ.
ಶ್ರೀಲಂಕಾ ಫ್ರೀಡಂ ಪಾರ್ಟಿ ಹಾಗೂ ಯುನೈಟೆಡ್ ನ್ಯಾಷನಲ್ ಪಾರ್ಟಿ ಮಧ್ಯೆ ಬಿಕ್ಕಟ್ಟು ಉಂಟಾಗಿತ್ತು. ಇನ್ನೊಂದೆಡೆ ಯುನೈಟೆಡ್ ಪೀಪಲ್ಸ್ ಫ್ರೀಡಂ ಅಲಾಯನ್ಸ್ ಮೈತ್ರಿಕೂಟದಿಂದ ಹೊರನಡೆದಿದೆ. ಮಹಿಂದ ರಾಜಪಕ್ಸ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ದೃಶ್ಯಾವಳಿಗಳು ಶ್ರೀಲಂಕಾದ ಸ್ಥಳೀಯ ಟಿವಿ ವಾಹಿನಿಗಳಲ್ಲಿ ಪ್ರಸಾರವಾದಾಗಲೇ ಜನರಿಗೆ ಈ ಬೆಳವಣಿಗೆಯ ಬಗ್ಗೆ ತಿಳಿದುಬಂದಿದೆ.
ಕಳೆದ ವಾರ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ, ತನ್ನನ್ನು ಹತ್ಯೆಗೈಯಲು ಸಂಚು ರೂಪಿಸಲಾಗಿತ್ತು ಎಂದು ಆರೋಪಿಸಿದ್ದರು. ಈ ಆರೋಪವನ್ನು ಮೈತ್ರಿಕೂಟದ ಪಕ್ಷಗಳು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದೂ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಗೆ ನೈಸರ್ಗಿಕ ಅನಿಲ
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ
Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.