![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 7, 2018, 7:39 AM IST
ಕೊಲಂಬೋ/ಮಾಲೆ: ಲಕ್ಷದ್ವೀಪದ ಸಮೀಪ ಇರುವ ದ್ವೀಪರಾಷ್ಟ್ರ ಮಾಲ್ಡೀವ್ಸ್‌ನಲ್ಲಿ ಉಂಟಾಗಿರುವ ರಾಜತಾಂತ್ರಿಕ ಬಿಕ್ಕಟ್ಟು ಇನ್ನಷ್ಟು ವಿಷಮಿಸಿದೆ. ಇಲ್ಲಿ ತುರ್ತು ಪರಿಸ್ಥಿತಿ ಹೇರಿಕೆಯಾದ ಬೆನ್ನಲ್ಲೇ ಸೋಮವಾರ ತಡರಾತ್ರಿ ನಡೆದ ಬೆಳವಣಿಗೆಯಲ್ಲಿ ಮಾಜಿ ಅಧ್ಯಕ್ಷ ಅಬ್ದುಲ್ ಗಯೂಮ್, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಮೂರ್ತಿಗಳನ್ನು ಬಂಧಿಸಲಾಗಿದೆ. ಈ ಎಲ್ಲ ಬೆಳವಣಿಗೆಗಳಿಂದಾಗಿ ಪ್ರವಾಸಿಗರೇ ಹೆಚ್ಚಾಗಿರುವ ರಾಷ್ಟ್ರದಲ್ಲಿ ಬಿಕ್ಕಟ್ಟು ತಲೆದೋರಿದೆ.
ವಿಪಕ್ಷ ಮಾಲ್ಡೀವಿಯನ್ ಡೆಮಾಕ್ರಾಟಿಕ್ ಪಾರ್ಟಿ ಜತೆ ಮಾಜಿ ಅಧ್ಯಕ್ಷ ಗಯೂಮ್ ಕೈಜೋಡಿಸಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಸುಪ್ರೀಂ ಕೋರ್ಟ್, ಸಂಸತ್ ಮತ್ತು ಇತರ ಪ್ರಮುಖ ಸರಕಾರಿ ಕಟ್ಟಡಗಳು ಸೇನೆಯ ವಶದಲ್ಲಿವೆ.
ಈ ನಡುವೆ ಸ್ವಯಂಪ್ರೇರಿತ ಗಡೀಪಾರು ಮಾಡಿ ಕೊಂಡಿ ಕೊಂಡು ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ರುವ ಮಾಜಿ ಅಧ್ಯಕ್ಷ ಮೊಹಮ್ಮದ್ ನಶೀದ್, ಭಾರತ ಸರಕಾರವು ಪರಿಸ್ಥಿತಿ ತಹಬಂದಿಗೆ ತರಲು ಮುಂದಾಗ ಬೇಕು ಎಂದು ಕೋರಿದ್ದಾರೆ. “ಭಾರತ ಸರಕಾರ ಕೂಡಲೇ ವಿಶೇಷ ರಾಯಭಾರಿಯೊಬ್ಬರನ್ನು ಮಾಲೆಗೆ ಕಳುಹಿಸ ಬೇಕು. ಇದರ ಜತೆಗೆ ಸೇನೆಯನ್ನೂ ಕಳುಹಿಸಿಕೊಡಬೇಕು. ಬಂಧಿತರನ್ನು ಬಿಡುಗಡೆ ಮಾಡುವಲ್ಲಿ ನೆರವಾಗಬೇಕು’ ಎಂದು ಒತ್ತಾಯಿಸಿದ್ದಾರೆ. ಅಮೆರಿಕ ಸರಕಾರವೂ ಬಿಕ್ಕಟ್ಟು ನಿವಾರಣೆಗೆ ನೆರವಾಗಬೇಕು ಎಂದು ಪ್ರತಿಪಾದಿಸಿದ್ದಾರೆ.
ವಿಪಕ್ಷ ಮಾಲ್ಡೀವಿಯನ್ ಡೆಮಾ ಕ್ರಾಟಿಕ್ ಪಾರ್ಟಿ (ಎಂಡಿಪಿ)ಯ ನಾಯಕರೂ ಆಗಿರುವ ನಶೀದ್ ಶ್ರೀಲಂಕಾದಲ್ಲಿರುವುದರಿಂದ ಕೊಲೊಂಬೋ ದಿಂದಲೇ ಗಯೂಮ್ ವಿರುದ್ಧದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಧ್ಯಕ್ಷ ಅಬ್ದುಲ್ಲಾ ಯಮೀನ್ ಅಕ್ರಮವಾಗಿ ತುರ್ತು ಪರಿಸ್ಥಿತಿ ಹೇರಿದ್ದಾರೆ. ಇದು ಸಂವಿಧಾನಬಾಹಿರ ಎಂದು ಅವರು ಹೇಳಿದ್ದಾರೆ. ಅಧ್ಯಕ್ಷ ಯಮೀನ್‌ರನ್ನು ಕೂಡಲೇ ಅಧಿಕಾರದಿಂದ ಕೆಳಗಿಳಿಸಬೇಕು ಎಂದು ನಶೀದ್ ಹೇಳಿದ್ದಾರೆ.
2013ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಮೊಹಮ್ಮದ್ ನಶೀದ್ ಕಡಿಮೆ ಅಂತರದಲ್ಲಿ ಸೋತಿದ್ದರು. ನ್ಯಾಯ ಮೂರ್ತಿಯೊಬ್ಬರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ನಶೀದ್‌ಗೆ 13 ವರ್ಷ ಜೈಲು ಶಿಕ್ಷೆಯಾಗಿದೆ.
ಭಾರತ ವ್ಯಾಕುಲಗೊಂಡಿದೆ: ವಿದೇಶಾಂಗ ಇಲಾಖೆ
ಮಾಲ್ಡೀವ್ಸ್ ಬಿಕ್ಕಟ್ಟು ಸಂಬಂಧ ಮಂಗಳವಾರ ಸಂಜೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಇಲಾಖೆ, “ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂ ಸಿ, ಸರ್ಕಾರವು ತುರ್ತು ಪರಿಸ್ಥಿತಿ ಘೋಷಿಸಿರುವುದು ಹಾಗೂ ಮಾಲ್ಡೀವ್ಸ್‌ನಲ್ಲಿ ಬಿಕ್ಕಟ್ಟು ಉಂಟಾಗಿರುವುದು ವ್ಯಾಕುಲ ಉಂಟುಮಾಡಿದೆ’ ಎಂದು ಹೇಳಿದೆ. ಜತೆಗೆ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಇತರ ರಾಜಕೀಯ ನಾಯಕರನ್ನು ಬಂಧಿಸಿರುವುದು ಕೂಡ ಕಳವಳಕಾರಿ. ನಮ್ಮ ಸರ್ಕಾರವು ಈ ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದೂ ಹೇಳಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
You seem to have an Ad Blocker on.
To continue reading, please turn it off or whitelist Udayavani.