ಮಲ್ಯ ಗಡೀಪಾರು ಸದ್ಯ ಅಸಾಧ್ಯ: ಬ್ರಿಟನ್
Team Udayavani, Jan 19, 2021, 6:40 AM IST
ಲಂಡನ್/ಹೊಸದಿಲ್ಲಿ: ಬ್ರಿಟನ್‌ನಲ್ಲಿ ಉದ್ಯಮಿ ವಿಜಯ ಮಲ್ಯ ವಿರುದ್ಧದ ರಹಸ್ಯ ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳದ ವಿನಾ ಅವರನ್ನು ಭಾರತಕ್ಕೆ ಗಡೀಪಾರು ಮಾಡಲು ಸಾಧ್ಯವಿಲ್ಲ ಎಂದು ಅಲ್ಲಿನ ಸರಕಾರ ಭಾರತದ ವಿದೇಶಾಂಗ ಸಚಿವಾಲಯಕ್ಕೆ ತಿಳಿಸಿದೆ. ಸುಪ್ರೀಂ ಕೋರ್ಟ್‌ಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಮಾಹಿತಿಯನ್ನು ಅರಿಕೆ ಮಾಡಿಕೊಂಡಿದ್ದಾರೆ.
ಉದ್ಯಮಿ ವಿಜಯ್ ಮಲ್ಯ ಗಡೀ ಪಾರಿನ ಬಗ್ಗೆ ಸೋಮವಾರ ನಡೆದ ವಿಚಾರಣೆ ವೇಳೆ ಈ ಅಂಶ ಪ್ರಸ್ತಾವವಾಗಿದೆ. ಭಾರತದ ವಿದೇಶಾಂಗ ಸಚಿವಾಲಯವು ಬ್ರಿಟಿಶ್ ಸರಕಾರದ ಜತೆಗೆ ಮಲ್ಯ ಗಡೀಪಾರಿನ ವಿಚಾರವನ್ನು ಪ್ರಸ್ತಾವಿಸಿದೆ. ಮಲ್ಯ ವಿರುದ್ಧ ಕೆಲವು ರಹಸ್ಯ ಕಾನೂನು ಪ್ರಕ್ರಿಯೆಗಳು ಪೂರ್ಣಗೊಳ್ಳಬೇಕಾಗಿದ್ದು, ಅವು ಇತ್ಯರ್ಥಗೊಳ್ಳುವ ವರೆಗೆ ಮಲ್ಯ ಗಡೀಪಾರು ಸಾಧ್ಯವಿಲ್ಲ. ಇವು ರಹಸ್ಯ ಪ್ರಕ್ರಿಯೆಗಳಾಗಿರುವ ಕಾರಣ ಬ್ರಿಟಿಶ್ ಸರಕಾರವು ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಕೂಡ ಸಾಧ್ಯವಿಲ್ಲ. ಪ್ರಕ್ರಿಯೆ ಇತ್ಯರ್ಥವಾಗದೆ ಯಾವ ನಿರ್ಧಾರವನ್ನೂ ಕೈಗೊಳ್ಳಲೂ ಸಾಧ್ಯವಿಲ್ಲ ಎಂದು ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಸಾಲಿಸಿಟರ್ ಜನರಲ್ ಅವರು ನ್ಯಾ| ಯು.ಯು. ಲಲಿತ್ ನೇತೃತ್ವದ ನ್ಯಾಯಪೀಠಕ್ಕೆ ಮಾಹಿತಿ ನೀಡಿದ್ದಾರೆ.
ಪ್ರಕರಣದ ಬೆಳವಣಿ ಬಗ್ಗೆ ವರದಿ ಸಲ್ಲಿಸಲು ಕಾಲಾವಕಾಶ ಬೇಕು ಎಂದು ಮೆಹ್ತಾ ಅರಿಕೆ ಮಾಡಿಕೊಂಡರು. ಅದಕ್ಕೆ ಸಮ್ಮತಿಸಿದ ನ್ಯಾಯಪೀಠ ವಿಚಾರಣೆಯನ್ನು ಮಾ.15ಕ್ಕೆ ನಿಗದಿಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.