ಮಾರುಕಟ್ಟೆ ವಿಶ್ಲೇಷಕರಿಗೂ ಸಿಗಲಿದೆ ಎಚ್-1 ಬಿ ವೀಸಾ
Team Udayavani, Oct 29, 2021, 6:56 PM IST
ವಾಷಿಂಗ್ಟನ್: ಅಮೆರಿಕ ವೃತ್ತಿಪರರಿಗೆ ನೀಡುವ ಎಚ್-1ಬಿ ವೀಸಾ ಇನ್ನು ಮುಂದೆ ಮಾರುಕಟ್ಟೆ ಸಂಶೋಧನೆ ಕ್ಷೇತ್ರದ ವಿಶ್ಲೇಷಕ (ಮಾರ್ಕೆಟ್ ರಿಸರ್ಚ್ ಅನಲಿಸ್ಟ್)ರಿಗೂ ಲಭ್ಯವಾಗಲಿದೆ.
ಈ ಬಗ್ಗೆ ಸಲ್ಲಿಕೆಯಾಗಿದ್ದ ಹಲವು ಮನವಿ, ಆಗ್ರಹಗಳಿಗೆ ಅಮೆರಿಕದ ಪೌರತ್ವ ಮತ್ತು ವಲಸೆಗಳ ವಿಭಾಗ (ಯುಎಸ್‌ಸಿಐಎಸ್) ಕೊನೆಗೂ ಅಂಗೀಕಾರ ನೀಡಿದೆ.
ಈ ನಿರ್ಧಾರ, ಭಾರತದಲ್ಲಿನ ಮಾರುಕಟ್ಟೆ ಸಂಶೋಧನೆ ಕ್ಷೇತ್ರದ ಉದ್ಯೋಗಿಗಳಿಗೆ ಹೆಚ್ಚಿನ ರೀತಿಯಲ್ಲಿ ಲಾಭವಾಗಲಿದೆ.
ಇದುವರೆಗೆ ಮಾಹಿತಿ ತಂತ್ರಜ್ಞಾನ, ವಿಜ್ಞಾನ ಕ್ಷೇತ್ರದವರಿಗೆ ಮಾತ್ರ ಎಚ್-1ಬಿ ವೀಸಾ ನೀಡಲಾಗುತ್ತಿತ್ತು.
ಇದನ್ನೂ ಓದಿ:ಪುನೀತ್ ಸರ್ ಅತ್ಯಂತ ಸುಲಭವಾಗಿ ತಲುಪಬಹುದಾಗಿದ್ದ ಸೂಪರ್ ಸ್ಟಾರ್: ಮಣಿಕಾಂತ್ ಕದ್ರಿ
ಈ ಬಗ್ಗೆ ಅಮೆರಿಕದ ಉತ್ತರ ಕ್ಯಾಲಿಫೋರ್ನಿಯಾ ಜಿಲ್ಲೆಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿತ್ತು. ಮಾರುಕಟ್ಟೆ ಸಂಶೋಧನೆ ಕ್ಷೇತ್ರದವರಿಗೆ ಎಚ್-1ಬಿ ಏಕೆ ನೀಡಲಾಗುತ್ತಿಲ್ಲ ಎಂಬ ವಿಚಾರಕ್ಕೆ ವಾದ ಮಂಡನೆ ನಡೆದು, ಅಂತಿಮವಾಗಿ ಅರ್ಜಿದಾರರಿಗೆ ಜಯ ಸಿಕ್ಕಿದೆ.
ಹೀಗಾಗಿ, ಸದ್ಯ ವೀಸಾ ನಿರಾಕರಣೆಗೊಂಡವರ ಅರ್ಜಿಗಳನ್ನು ಮತ್ತೊಮ್ಮೆ ಪರಿಶೀಲಿಸಿ ಯುಎಸ್‌ಸಿಐಎಸ್ ಕ್ರಮ ಕೈಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.