Tragedy: 5 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ: 52 ಮಂದಿ ಮೃತ್ಯು, ಹಲವರಿಗೆ ಗಾಯ
Team Udayavani, Aug 31, 2023, 11:41 AM IST
ಜೋಹಾನ್ಸ್‌ಬರ್ಗ್: ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 52 ಮಂದಿ ಮೃತಪಟ್ಟಿದ್ದು 20 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ದಕ್ಷಿಣ ಆಫ್ರಿಕಾದ ಮಧ್ಯ ಜೋಹಾನ್ಸ್‌ಬರ್ಗ್‌ನಲ್ಲಿ ಸಂಭವಿಸಿದೆ.
ಘಟನೆಯ ಕುರಿತು ತುರ್ತು ನಿರ್ವಹಣಾ ಸೇವೆಗಳ ವಕ್ತಾರ ರಾಬರ್ಟ್ ಮುಲಾಡ್ಜಿ ಟ್ವೀಟ್ ಮಾಡಿದ್ದು ಅಗ್ನಿ ಅವಘಡದಲ್ಲಿ ಸುಮಾರು ಐವತ್ತೆರಡು ಮಂದಿ ಮೃತಪಟ್ಟಿದ್ದು ಜೊತೆಗೆ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಗುರುವಾರ ಬೆಳಿಗ್ಗೆ ಘಟನೆ ನಡೆದಿದ್ದು ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದೆ ಎಂದು ತಿಳಿಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಬೆಂಕಿಯನ್ನು ಬಹುಮಟ್ಟಿಗೆ ನಂದಿಸಲಾಗಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ದಟ್ಟ ಹೊಗೆ ಪ್ರದೇಶ ಸುತ್ತ ಆವರಿಸಿಕೊಂಡಿದೆ.
ಇದನ್ನೂ ಓದಿ: Ballary; ವಿದ್ಯುತ್ ಕಂಬದ ಮೇಲೆ ಮೃತಪಟ್ಟ ಎಲೆಕ್ಟ್ರೀಷಿಯನ್: ಆಘಾತಕ್ಕೆ ಬೇರ್ಪಟ್ಟ ರುಂಡ-ಮುಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.