Earthquake: ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ: ಕನಿಷ್ಠ 128 ಮಂದಿ ಸಾವು
ಭಾರತದಲ್ಲೂ ಕಂಪಿಸಿದ ಭೂಮಿ
Team Udayavani, Nov 4, 2023, 8:59 AM IST
![Earthquake: ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ: ಕನಿಷ್ಠ 128 ಮಂದಿ ಸಾವು](https://www.udayavani.com/wp-content/uploads/2023/11/tdy-1-2-620x372.jpg)
![Earthquake: ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ: ಕನಿಷ್ಠ 128 ಮಂದಿ ಸಾವು](https://www.udayavani.com/wp-content/uploads/2023/11/tdy-1-2-620x372.jpg)
ಕಠ್ಮಂಡು: ನೇಪಾಳದ ಕಠ್ಮಂಡು ಸೇರಿದಂತೆ ಹಲವು ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ 128 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಅನೇಕ ಕಟ್ಟಡಗಳು ನೆಲಸಮಗೊಂಡಿವೆ.
ಶುಕ್ರವಾರ ರಾತ್ರಿ(ನ.3 ರಂದು) ನೇಪಾಳದ ಜಾಜರ್ಕೋಟ್ ಮತ್ತು ರುಕುಮ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.4 ರ ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರಬಿಂದು ಜಾಜರ್ಕೋಟ್ ನ ಲ್ಯಾಮಿಡಾಂಡಾ ಪ್ರದೇಶದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳು ಹೇಳಿದ್ದಾರೆ. ಶುಕ್ರವಾರ ರಾತ್ರಿ 11:32 ಕ್ಕೆ 10 ಕಿಮೀ ಆಳದಲ್ಲಿ ಭೂಕಂಪನ ಆಗಿವೆ ಎಂದು ವರದಿ ತಿಳಿಸಿದೆ.
ಅಧಿಕೃತವಾಗಿ ರುಕುಮ್ ವೆಸ್ಟ್‌ನಲ್ಲಿ ಕನಿಷ್ಠ 36 ಜನರು ಮತ್ತು ಜಾಜರ್ಕೋಟ್ ನಲ್ಲಿ 34 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಭೂಕಂಪದ ಪರಿಣಾಮ ಹಲವು ಕಟ್ಟಡಗಳು ಕುಸಿದು ಬಿದ್ದಿದ್ದು, ಜನ ಅತ್ತಿತ್ತ ನೋಡಿ ತನ್ನವರನ್ನು ಹುಡುಕುತ್ತಿರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ದೆಹಲಿ-ಎನ್‌ಸಿಆರ್ ಪ್ರದೇಶ ಹಾಗೂ ಇಂಡೋ-ನೇಪಾಳ ಗಡಿಯಲ್ಲಿರುವ ಪಾಟ್ನಾ, ಕತಿಹಾರ್, ಮೋತಿಹಾರಿ ಮತ್ತು ಬಿಹಾರದ ಹಲವಾರು ಜಿಲ್ಲೆಗಳಲ್ಲಿಯೂ ಕಂಪನದ ಅನುಭವವಾಗಿದೆ.
ಜಾಜರ್ಕೋಟ್ ಮತ್ತು ರುಕುಮ್ ಮಾತ್ರವಲ್ಲದೆ ಡೈಲೇಖ್, ಸಾಲ್ಯಾನ್ ಮತ್ತು ರೋಲ್ಪಾ ಜಿಲ್ಲೆಗಳು ಸೇರಿದಂತೆ ಇತರ ಜಿಲ್ಲೆಗಳಲ್ಲೂ ಅಪಾರ ಹಾನಿ ಹಾಗೂ ಅನೇಕರಿಗೆ ಗಾಯಗಳಾಗಿವೆ ಎಂದು ಗೃಹ ಸಚಿವಾಲಯ ತಿಳಿಸಿದೆ.
ಗಾಯಾಳುಗಳು ಕಠ್ಮಂಡುವಿನಿಂದ ಪಶ್ಚಿಮಕ್ಕೆ 500 ಕಿಲೋಮೀಟರ್ ದೂರದಲ್ಲಿರುವ ಜಾಜರ್ಕೋಟ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವೆರದಿದೆ ಎಂದು ವರದಿ ತಿಳಿಸಿದೆ.
ಹಿಮಾಲಯ ರಾಷ್ಟ್ರವಾದ ನೇಪಾಳದಲ್ಲಿ ಭೂಕಂಪಗಳು ಸಾಮಾನ್ಯವಾಗಿವೆ. ಅಕ್ಟೋಬರ್ 3 ರಂದು- 6.2 ರ ತೀವ್ರತೆಯ ಭೂಕಂಪಗಳು ಸಂಭವಿಸಿತ್ತು. ನವೆಂಬರ್ 2022 ರಲ್ಲಿ, ದೋಟಿ ಜಿಲ್ಲೆಯಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಆರು ಜನರು ಸಾವನ್ನಪ್ಪಿದರು. 2015 ರಲ್ಲಿ 7.8 ತೀವ್ರತೆಯ ಭೂಕಂಪದಿಂದ 12,000 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ](https://www.udayavani.com/wp-content/uploads/2025/02/obama-150x80.jpg)
![Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ](https://www.udayavani.com/wp-content/uploads/2025/02/obama-150x80.jpg)
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
![Trump-musk](https://www.udayavani.com/wp-content/uploads/2025/02/Trump-musk-150x90.jpg)
![Trump-musk](https://www.udayavani.com/wp-content/uploads/2025/02/Trump-musk-150x90.jpg)
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
![Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹತ್ಯೆ](https://www.udayavani.com/wp-content/uploads/2025/02/Mexic-150x84.jpg)
![Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹತ್ಯೆ](https://www.udayavani.com/wp-content/uploads/2025/02/Mexic-150x84.jpg)
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
![India cuts import duty on American Bourbon Whiskey](https://www.udayavani.com/wp-content/uploads/2025/02/wisky-150x83.jpg)
![India cuts import duty on American Bourbon Whiskey](https://www.udayavani.com/wp-content/uploads/2025/02/wisky-150x83.jpg)
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
![ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ](https://www.udayavani.com/wp-content/uploads/2025/02/uk-1-150x100.jpg)
![ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ](https://www.udayavani.com/wp-content/uploads/2025/02/uk-1-150x100.jpg)
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ