Gas Explosion: ಕೀನ್ಯಾದಲ್ಲಿ ಅನಿಲ ಸೋರಿಕೆಯಿಂದ ಬಾರಿ ಸ್ಫೋಟ, 2 ಮೃತ್ಯು, 165 ಮಂದಿಗೆ ಗಾಯ
Team Udayavani, Feb 2, 2024, 9:45 AM IST
ನೈರೋಬಿಯ: ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಭೀಕರ ಅನಿಲ ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ ಇಬ್ಬರು ಮೃತಪಟ್ಟು 165ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಕುರಿತು ವರದಿಯಾಗಿದೆ.
ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ಈ ಘಟನೆಯು ಗುರುವಾರ ತಡರಾತ್ರಿ ಸಂಭವಿಸಿದೆ ಎಂದು ಹೇಳಿಕೊಂಡಿದೆ.
ಈ ಕುರಿತು ಟ್ವೀಟ್ ಮಾಡಿದ ಸರಕಾರದ ವಕ್ತಾರ ಐಸಾಕ್ ಮೌರಾ ನೈರೋಬಿಯ ಎಂಬಕಾಸಿಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ಕಂಪನಿಯಲ್ಲಿ ಸ್ಫೋಟ ಸಂಭವಿಸಿ ಬೆಂಕಿ ಅವಘಡ ಸಂಭವಿಸಿದ್ದು ಈ ವೇಳೆ ಘಟಕದ ಕಟ್ಟಡಕ್ಕೂ ಹಾನಿಯಾಗಿದೆ ಎಂದು ಹೇಳಿದ್ದಾರೆ.
ಅಗ್ನಿ ಅವಘಡ ಸಂಭವಿಸಿದ ವಿಡಿಯೋ ಸಾಮಾಜಿಕ ಜಾಲತಾಣದ ಹರಿದಾಡುತ್ತಿದ್ದು ಅನಿಲ ಸೋರಿಕೆಯೊಂದ ಬೆಂಕಿ ಹೊತ್ತಿಕೊಂಡು ಸ್ಪೋಟಗೊಂಡಿರುವ ಭಯಾನಕ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ ಅಲ್ಲದೆ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
WATCH: Massive gas explosion in Nairobi, Kenya. At least 2 dead, 167 injured. Death toll expected to rise pic.twitter.com/cfle9onXYT
— BNO News (@BNONews) February 2, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.