ಡೊಮಿನಿಕಾದಲ್ಲಿ ಕಂಬಿಯ ಹಿಂದೆ ಮೆಹುಲ್ ಚೋಕ್ಸಿ: ಕೈ ಮೇಲೆ ಸುಟ್ಟಗಾಯಗಳು ಪತ್ತೆ; ಹಲ್ಲೆ ಆರೋಪ
Team Udayavani, May 30, 2021, 9:15 AM IST
ನವದೆಹಲಿ: ಡೊಮಿನಿಕಾದಲ್ಲಿ ಬಂಧಿಸಲ್ಪಟ್ಟಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಇದೀಗ ಪೊಲೀಸ್ ಕಸ್ಟಡಿಯಲ್ಲಿದ್ದು, ಈ ಕುರಿತ ಫೋಟೋಗಳನ್ನು ಅಲ್ಲಿನ ಸ್ಥಳೀಯ ಮಾಧ್ಯಮಗಳು ಬಿಡುಗಡೆ ಮಾಡಿದೆ.
ಈಗಾಗಲೇ ನ್ಯಾಯಾಲಯವು ಬುಧವಾರದವರೆಗೆ (2-6-2021)ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿರುವುದರಿಂದ, ಮೆಹುಲ್ ಚೋಕ್ಸಿ ಲಾಕ್ ಅಪ್ ನಲ್ಲಿದ್ದಾರೆ. ಚೋಕ್ಸಿ ಕಂಬಿಯ ಹಿಂದೆ ನಿಂತಿರುವ ಕೆಲವೊಂದು ಫೋಟೋಗಳು ಹೊರಬಿದ್ದಿದ್ದು ದೇಹದಲ್ಲಿ ಗಾಯದ ಗುರುತುಗಳು ಪತ್ತೆಯಾಗಿವೆ. ಮಾತ್ರವಲ್ಲದೆ ಕೈಯಲ್ಲಿ ಸುಟ್ಟ ಗಾಯಗಳು ಪತ್ತೆಯಾಗಿದೆ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ.
ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಚೋಕ್ಸಿ ಪರ ವಕೀಲರು, ಆ್ಯಂಟಿಗುವಾ ಮತ್ತು ಬಾರ್ಬುಡಾದಿಂದ ಮೆಹುಲ್ ಚೋಕ್ಸಿ ಅಪಹರಿಸಲ್ಪಟ್ಟಿದ್ದು, ಬಲವಂತವಾಗಿ ಡೊಮಿನಿಕಾಗೆ ಕರೆತರಲಾಗಿದೆ. ಇದೀಗ ಕಸ್ಟಡಿಯಲ್ಲಿ ಅವರ ಮೇಲೆ ದಾರುಣವಾಗಿ ಹಲ್ಲೆ ನಡೆಸಲಾಗಿದ್ದು, ದೇಹದ ಕೆಲವು ಭಾಗಗಳನ್ನು ಸುಡಲಾಗಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಹೆಚ್ಚಾದ ಇಲಿಗಳ ಹಾವಳಿ: ಪ್ಲೇಗ್ ಭೀತಿ; ಭಾರತದಿಂದ ಪಾಷಾಣ ಆಮದಿಗೆ ಅಸ್ತು
ಡೊಮಿನಿಕಾ ನ್ಯಾಯಾಲಯ ಮೆಹುಲ್ ಚೋಕ್ಸಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸುವಂತೆ ಆದೇಶ ನೀಡಿದ್ದು, ವರದಿ ನೆಗೆಟಿವ್ ಬಂದಿದೆ.
ಇದನ್ನೂ ಓದಿ: ಪ್ರೇಯಸಿಯ ಜೊತೆಗೆ ವಿವಾಹ ಬಂಧನಕ್ಕೆ ಒಳಗಾದ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
MUST WATCH
ಹೊಸ ಸೇರ್ಪಡೆ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.