ಟ್ರಂಪ್, ಮೆಲನಿಯಾ ನಡುವೆ ಬಿರುಕು..!? ಎಲ್ಲಾ ಸಾಮಾಜಿಕ ಜಾಲತಾಣಗಳು ಡಿಲೀಟ್..!

ಮೆಲನಿಯಾ ಡೊನಾಲ್ಡ್ ಟ್ರಂಪ್ ಅವರಿಗೆ ವಿಚ್ಛೇದನ ನೀಡಿದ್ದಾರೆ ಎಂದು ಹಲವು ಮಾಧ್ಯಮಗಳು ಸುದ್ದಿ ಮಾಡಿದ್ದವು.

Team Udayavani, Feb 12, 2021, 1:46 PM IST

Melania Trump deletes all social media posts, fans rumours of divorce with Donald Trump again

ವಾಷಿಂಗ್ಟನ್ : ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಶ್ವೇತ ಭವನದಿಂದ ನಿರ್ಗಮಿಸಿದ ನಂತರ ಅವರ ಪತ್ನಿ, ಅಮೇರಿಕಾದ ಮಾಜಿ ಪ್ರಥಮ ಮಹಿಳೆ ಮೆಲನಿಯಾ ಟ್ರಂಪ್  ಸಾಮಾಜಿಕ ವಲಯದಿಂದ ದೂರ ಉಳಿದಿದ್ದಾರೆ.

ಜನವರಿ 20 ರಂದು ಜೋ ಬೈಡನ್ ಅವರು ಅಮೇರಿಕಾದ ಅಧ್ಯಕ್ಷ ಪಟ್ಟ ಸ್ವೀಕಾರ ಕಾರ್ಯಕ್ರಮದಲ್ಲಿ ಮೆಲನಿಯಾ ಕಾಣಿಸಿಕೊಂಡದ್ದನ್ನು ಹೊರತಾಗಿ ಬೇರೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿಲ್ಲ.

ಓದಿ : ಹಗ್ ಡೇ : ಅಪ್ಪುಗೆ ಕೇವಲ ಅಪ್ಪುಗೆಯಷ್ಟೇ ಅಲ್ಲ…

ಪತಿ ಟ್ರಂಪ್, ಶ್ವೇತಭವನದಿಂದ ಹೊರಗೆ ಬಂದ ಮೇಲೆ ಮೆಲನಿಯಾ ತುಸು ಬೇಸರಗೊಂಡಂತೆ ಕಾಣಿಸುತ್ತಿದೆ. ಮೆಲನಿಯಾ ತಮ್ಮ ಎಲ್ಲಾ ಸಾಮಾಜಿಕ ಜಾಲತಾಣಗಳ ವೈಯಕ್ತಿಕ ಖಾತೆಗಳನ್ನು ಡಿಲೀಟ್ ಮಾಡಿದ್ದಾರೆ.

ಮೆಲನಿಯಾ ಅವರ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶ್ವೇತ ಭವನದ ನಿರ್ಗಮನದ ಕೊನೆಯ ಸಂದೇಶವನ್ನು ಹೊರತು ಪಡಿಸಿ ಉಳಿದ ಎಲ್ಲಾ ಪೋಸ್ಟ್ ಗಳು ಡಿಲೀಟ್ ಆಗಿವೆ.

ಅಧ್ಯಕ್ಷ ಪಟ್ಟದಿಂದ ಟ್ರಂಪ್ ಕೆಳಗಿಳಿದ ನಂತರ ಇತ್ತೀಚೆಗೆ ಸೂಪರ್ ಬೌಲ್ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದರು, ಆದರೇ, ಮೆಲನಿಯಾ ಅವರೊಂದಿಗೆ ಹಾಜರಿರಾಗದೇ ಇರುವುದು ಈಗ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಓದಿ : ವಿಮಾ ದಾಖಲೆಗಳಿಗೆ ಸುರಕ್ಷತೆ ನೀಡಲಿದೆ “DigiLocker”

ಇನ್ನು, ತನ್ನ ಪತಿಯೊಂದಿಗೆ ಮೆಲನಿಯಾ ಕಾಣಿಸಿಕೊಳ್ಳದಿರುವುದರಿಂದ, ಪತಿ ಪತ್ನಿಯವರ ನಡುವೆ ಒಡಕು ಉಂಟಾಗಿರಬಹುದು ಎಂಬ ವದಂತಿಗಳು ಹರಿದಾಡುತ್ತಿವೆ ಎಂಬುವುದನ್ನು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ನವೆಂಬರ್ 3 ರಂದು ಡೊನಾಲ್ಡ್ ಟ್ರಂಪ್, ಜೋ ಬೈಡನ್ ವಿರುದ್ಧ ನಡೆದ ಚುನಾವಣೆಯಲ್ಲಿ ಸೋತ ನಂತರ ಮೆಲನಿಯಾ ಡೊನಾಲ್ಡ್ ಟ್ರಂಪ್ ಅವರಿಗೆ ವಿಚ್ಛೇದನ ನೀಡಿದ್ದಾರೆ ಎಂದು ಹಲವು ಮಾಧ್ಯಮಗಳು ಸುದ್ದಿ ಮಾಡಿದ್ದವು.

ಆದರೇ, ಡೊನಾಲ್ಡ್ ಟ್ರಂಪ್ ಮತ್ತು ಮೆಲನಿಯಾ ನಡುವಿನ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡಿದೆ ಎನ್ನುವುದಕ್ಕೆ ಸೂಕ್ತ ಪುರಾವೆಗಳು ಇಲ್ಲದಿದ್ದರೂ, ಸಾರ್ವಜನಿಕ ವಲಯದಲ್ಲಿ ಡೊನಾಲ್ಡ್ ಟ್ರಂಪ್ ಜೊತೆ ಮೆಲನಿಯಾ ಕಾಣಿಸಿಕೊಳ್ಳದೇ ಇರುವುದು ಮತ್ತು ಸಾಮಾಜಿಕ ಜಾಲತಾಣಗಳಿಂದ ಹೊರಬಂದಿರುವುದು ವದಂತಿಗಳು ಹಬ್ಬುವುದಕ್ಕೆ ಕಾರಣವಾಗಿದೆ ಎಂದು ವರದಿಯಾಗಿದೆ.

ಓದಿ :ಜೀವನದಲ್ಲಿ ವಿಶ್ವಾಸ ಕಳೆದುಕೊಂಡರೆ ಸಾಧನೆ ಅಸಾಧ್ಯ: ನಟ ಅಮೀರ್‌ಖಾನ್‌

 

 

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

iran

Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.