ಪಾಕಿಸ್ಥಾನದಲ್ಲಿ ಮತಾಂತರ, ಅಪಹರಣಕ್ಕೆ ಭಾರೀ ವಿರೋಧ
ಮಾ.30ರಂದು ಅಲ್ಪಸಂಖ್ಯಾತ ಹಿಂದೂಗಳಿಂದ ಬೃಹತ್ ರ‍್ಯಾಲಿ
Team Udayavani, Mar 14, 2023, 7:15 AM IST
ಕರಾಚಿ: ಅಪಹರಣ, ಬಲವಂತದ ಮತಾಂತರ, ಅಪ್ರಾಪ್ತ ವಯಸ್ಕ ಯುವತಿಯರನ್ನು ಬಲವಂತವಾಗಿ ಮದುವೆಯಾಗುವುದು ಸೇರಿದಂತೆ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದಬ್ಟಾಳಿಕೆ ವಿರುದ್ಧ; ಪಾಕಿಸ್ಥಾನದ ಸಿಂಧ್ ವಿಧಾನಸಭೆ ಕಟ್ಟಡದ ಎದುರು ಮಾ.30ರಂದು ಹಿಂದೂ ಸಮುದಾ ಯುವು ಬೃಹತ್ ರ‍್ಯಾಲಿ ಆಯೋಜಿಸಿದೆ.
ಪಾಕಿಸ್ಥಾನದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಹೋರಾಡುತ್ತಿರುವ “ಪಾಕಿಸ್ತಾನ್ ದಾರಾ ವರ್ ಇತ್ತೆಹಾದ್’ ವತಿಯಿಂದ ಈ ರ‍್ಯಾಲಿ ಆಯೋಜಿಸಲಾಗಿದೆ. ಇದರಲ್ಲಿ ಹಿಂದೂ ಸಮುದಾಯದ ಅನೇಕ ನಾಯಕರು ಭಾಗಿ ಯಾಗಲಿದ್ದಾರೆ. ರ‍್ಯಾಲಿ ಕುರಿತು ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ಈ ಕುರಿತು ಮಾಹಿತಿ ನೀಡಿದ ಪಾಕಿಸ್ತಾನ್ ದಾರಾವರ್ ಇತ್ತೆಹಾದ್ ಅಧ್ಯಕ್ಷ ಫಕರ್ ಶಿವ ಕೂಚಿ, “ಹಿಂದೂ ಸಮುದಾಯದವರ ಅಪಹರಣಗಳು, ಬಲವಂತದ ಮತಾಂತರ, ಮಹಿಳೆಯರು ಮತ್ತು ಬಾಲಕಿಯರ ನಕಲಿ ಮದುವೆಗಳ ಬಗ್ಗೆ ಪಾಕ್ ಸರಕಾರ ಕುರುಡಾಗಿದೆ.
ಈ ಬಗ್ಗೆ ಅರಿವು ಮೂಡಿಸಲು ರ‍್ಯಾಲಿ ಆಯೋಜಿಸಲಾಗಿದೆ. ಅಲ್ಲದೇ ಬಲವಂತದ ಮತಾಂತರ ಮತ್ತು ಮದುವೆಗಳ ವಿರುದ್ಧ ಕಠಿಣ ಕಾನೂನು ತರಬೇಕೆಂಬುದು ನಮ್ಮ ಆಗ್ರಹ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.