ರೂಪದರ್ಶಿ ಜತೆ ಲೈಂಗಿಕ ಕ್ರಿಯೆ; ನಗ್ನಗೊಳಿಸಿ 20ನೇ ಮಹಡಿ ಮೇಲಿಂದ ಕೆಳಗೆ ದೂಡಿ ಹತ್ಯೆ!
Team Udayavani, Nov 28, 2019, 1:03 PM IST
ಕೌಲಾಲಂಪುರ್: ಸುಮಾರು 20 ಅಂತಸ್ತಿನ ಮಹಡಿಯಲ್ಲಿ ಉದ್ದೀಪನಾಕಾರಿ ಮಾದಕ ದ್ರವ್ಯ ಸೇವಿಸಿ ಸಾಮೂಹಿಕವಾಗಿ ಲೈಂಗಿಕ ಕ್ರಿಯೆ ನಡೆಸಿದ ನಂತರ ಅಪ್ರಾಪ್ತ ಡಚ್ ರೂಪದರ್ಶಿಯೊಬ್ಬಳನ್ನು ನಗ್ನವಾಗಿ ಮಹಡಿ ಮೇಲಿನಿಂದ ಕೆಳಕ್ಕೆ ದೂಡಿ ಹತ್ಯೆಗೈದಿರುವ ಸಾಧ್ಯತೆ ಇದ್ದಿರುವುದಾಗಿ ಮಲೇಷ್ಯಾದಲ್ಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇವಾನಾ ಸ್ಮಿತ್ ಎಂಬ ರೂಪದರ್ಶಿಯನ್ನು ನಗ್ನಗೊಳಿಸಿ 20ನೇ ಮಹಡಿಯಿಂದ ತಳ್ಳಿದ ಪರಿಣಾಮ ಆಕೆ ಆರನೇ ಮಹಡಿಯ ಬಾಲ್ಕನಿ ಮೇಲೆ ಬಿದ್ದು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ. ಘಟನೆ 2017ರ ಡಿಸೆಂಬರ್ ನಲ್ಲಿ ನಡೆದಿದ್ದು, ಈ ಕೊಲೆ ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ಕಾನೂನು ಸಮರ ನಡೆಯುತ್ತಿದೆ ಎಂದು ವರದಿ ವಿವರಿಸಿದೆ.
18 ವರ್ಷದ ಇವಾನಾಳ ಮೇಲೆ ಮಿತಿಮೀರಿ ಡ್ರಗ್ಸ್ ಹಾಗೂ ಮದ್ಯಪಾನ ಸೇವಿಸಿ ಸಾಮೂಹಿಕವಾಗಿ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ವರದಿ ತಿಳಿಸಿದೆ. ಇದೊಂದು ಮೂರ್ಖರನ್ನಾಗಿಸುವ ನಾಟಕ ಎಂಬ ಆರೋಪವನ್ನು ಪೊಲೀಸ್ ಅಧಿಕಾರಿಗಳು ತಳ್ಳಿಹಾಕಿದ್ದರು.
ಆದರೆ ಸ್ಮಿತ್ ಕುಟುಂಬದವರು ಪೊಲೀಸರ ವಿರುದ್ಧ ಹೈಕೋರ್ಟ್ ನಲ್ಲಿ ಕಾನೂನು ಸಮರ ಆರಂಭಿಸಿದ್ದರು. ಕಳೆದ ವಾರ ಪ್ರಕರಣದ ಬಗ್ಗೆ ಆದೇಶ ನೀಡಿದ್ದು, ಈ ಘಟನೆಯಲ್ಲಿ ಪರಿಚತರಾಗಿರಲಿ ಅಥವಾ ಅಪರಿಚಿತರೇ ಶಾಮೀಲಾಗಿರಲೇ. ನೂತನವಾಗಿ ತನಿಖೆ ನಡೆಸಬೇಕೇಂದು ನಿರ್ದೇಶನ ನೀಡಿರುವುದಾಗಿ ವರದಿ ತಿಳಿಸಿದೆ.
ಸ್ಮಿತ್ ಪ್ರಕರಣದ ಬಗ್ಗೆ ಮರು ತನಿಖೆ ಆರಂಭಿಸಲಾಗುವುದು. ಈ ಬಗ್ಗೆ ಟಾಸ್ಕ್ ಪೋರ್ಸ್ ಅನ್ನು ರಚಿಸಲಾಗುವುದು ಎಂದು ಪೊಲೀಸ್ ಕ್ರಿಮಿನಲ್ ಇನ್ವೆಸ್ಟಿಗೇಶನ್ ಇಲಾಖೆಯ ಮುಖ್ಯಸ್ಥ ಹುಝೀರ್ ಮೊಹಮ್ಮದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.