ಪೆಸಿಫಿಕ್ ವಲಯದಲ್ಲಿ ಶಾಂತಿಗೆ ಬದ್ಧ: ಮೋದಿ
Team Udayavani, Nov 16, 2018, 7:44 AM IST
ಸಿಂಗಾಪುರ: ಇಂಡೋ ಪೆಸಿಫಿಕ್ ವಲಯದಲ್ಲಿ ಶಾಂತಿ ನೆಲೆಸುವ ಕ್ರಮಗಳನ್ನು ಕೈಗೊಳ್ಳಲು ಭಾರತ ಬದ್ಧವಾಗಿದೆ ಎಂದು ಸಿಂಗಾಪುರದಲ್ಲಿ ನಡೆಯುತ್ತಿರುವ ಪೂರ್ವ ಏಷ್ಯಾ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪೂರ್ವ ಏಷ್ಯಾ ದೇಶಗಳೊಂದಿಗೆ ಭಾರತ ಆರ್ಥಿಕ ಮತ್ತು ಸಾಂಸ್ಕೃತಿಕ ಸಂಬಂಧವನ್ನು ಹೊಂದಿದೆ. ಪೂರ್ವ ಏಷ್ಯಾ ದೇಶಗಳ ಒಕ್ಕೂಟ ದಲ್ಲಿ 10 ದೇಶಗಳಿದ್ದು, 2005 ರಿಂದಲೂ ಭಾರತ ಸಮ್ಮೇಳನದಲ್ಲಿ ಭಾಗವಹಿಸುತ್ತಿದೆ. ಇದಕ್ಕೂ ಮುನ್ನ ಬೆಳಗ್ಗೆ ಆಸಿಯಾನ್- ಇಂಡಿಯಾ ಬ್ರೇಕ್‌ಫಾಸ್ಟ್ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 10 ಆಸಿಯಾನ್ ಮುಖಂಡರ ಜೊತೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದಾರೆ.
ಪ್ರಶಸ್ತಿ ವಿತರಣೆ: ಕಳೆದ ಜೂನ್‌ನಲ್ಲಿ ಸಿಂಗಾಪುರಕ್ಕೆ ಭೇಟಿ ನೀಡಿದಾಗ ಭಾರತ-ಸಿಂಗಾಪುರ ಜಂಟಿ ಹ್ಯಾಕಥಾನ್ ನಡೆಸುವ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದರು. ಇದಕ್ಕೆ ಒಪ್ಪಿಕೊಂಡ ಸಿಂಗಾಪುರ ಪ್ರಧಾನಿ ಲೀ ಸೀನ್, ಹ್ಯಾಕಥಾನ್ ನಡೆಸಿದ್ದರು. ಈ ಸ್ಪರ್ಧೆಯಲ್ಲಿ ವಿಜೇತ ಭಾರತದ ಎರಡು ಹಾಗೂ ಸಿಂಗಾಪುರದ ನಾಲ್ಕು ತಂಡಗಳಿಗೆ ಪ್ರಧಾನಿ ಮೋದಿ ಗುರುವಾರ ಪ್ರಶಸ್ತಿ ಪ್ರದಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.