![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 5, 2019, 6:00 AM IST
ದುಬಾೖ: ಯುಎಇ ಕೊಡಮಾಡುವ ಅತ್ಯಂತ ಪ್ರತಿಷ್ಠಿತ ಝಾಯೆದ್ ಪುರಸ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಉಭಯ ದೇಶಗಳ ಮಧ್ಯೆ ಸಂಬಂಧ ಸುಧಾರಣೆಯಲ್ಲಿ ಮಹತ್ವದ ಪಾತ್ರವನ್ನು ಮೋದಿ ವಹಿಸಿದ್ದು, ಈ ಸಾಧನೆಗೆ ಅವರನ್ನು ಪುರಸ್ಕರಿಸಲಾಗುತ್ತಿದೆ ಎಂದು ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೇದ್ ಅಲ್ ನಹ್ಯನ್ ಘೋಷಿಸಿದ್ದಾರೆ. ಈ ಪುರಸ್ಕಾರವನ್ನು ರಾಜರು, ದೇಶದ ಅಧ್ಯಕ್ಷರು ಮತ್ತು ಪ್ರಧಾನಿಗಳಿಗೆ ನೀಡಲಾಗುತ್ತದೆ.
ಭಾರತದೊಂದಿಗೆ ನಾವು ಐತಿಹಾಸಿಕ ಸಂಬಂಧ ಹೊಂದಿದ್ದು, ಪ್ರಧಾನಿ ಮೋದಿ ಇದನ್ನು ಇನ್ನಷ್ಟು ಬಲಗೊಳಿಸಿದ್ದಾರೆ ಎಂದು ಅಧ್ಯಕ್ಷ ಶೇಖ್ ಖಲೀಫಾ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಈ ಗೌರವವನ್ನು ಅತ್ಯಂತ ವಿನಯತೆಯಿಂದ ಸ್ವೀಕರಿಸುತ್ತಿದ್ದು, ಗೌರವಾನ್ವಿತ ದೊರೆಗಳಾದ ಮೊಹಮ್ಮದ್ ಬಿನ್ ಝಯೇದ್ ಅಲ್ ನಹ್ಯಾನ್’ರಿಗೆ ಧನ್ಯವಾದಗಳು ಎಂದಿದ್ದಾರೆ. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಪ್ರಧಾನಿ ಮೋದಿಯವರಿಗೆ ಈ ಪುರಸ್ಕಾರ ವನ್ನು ಯುಎಇ ಘೋಷಿಸಿರುವುದು ಅತ್ಯಂತ ಖುಷಿಯ ಸಂಗತಿ ಎಂದಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.