![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 6, 2019, 8:26 AM IST
ಮಾಸ್ಕೋ: ಭಾರತದ ಪ್ರಧಾನಿ ನರೇಂದ್ರ ಮೋದಿಯವರು ರಷ್ಯಾದಲ್ಲಿ ತನ್ನ ಸರಳತೆಯಿಂದ ಗಮನ ಸೆಳೆದಿದ್ದಾರೆ. ಫೋಟೋಶೂಟ್ ನಲ್ಲಿ ತನಗಾಗಿ ಇರಿಸಲಾಗಿದ್ದ ವಿಶೇಷ ಸೋಫಾವನ್ನು ನಿರಾಕರಿಸಿ ಮಾಮೂಲಿ ಕುರ್ಚಿಯಲ್ಲಿ ಕುಳಿತುಕೊಂಡ ಮೋದಿಯವರ ಈ ವಿಡಿಯೋ ಈಗ ವೈರಲ್ ಆಗಿದೆ.
ರಷ್ಯಾ ಪ್ರವಾಸದಲ್ಲಿ ವ್ಲಾಡಿವೋಸ್ಟಕ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿ, ಅಧಿಕಾರಿಗಳ ಜೊತೆ ಫೋಟೋಶೂಟ್ ನಲ್ಲಿ ಪಾಲ್ಗೊಂಡರು. ಆದರೆ ಅಲ್ಲಿ ನರೇಂದ್ರ ಮೋದಿಯವರಿಗೆ ವಿಶೇಷ ಸೋಫಾದ ವ್ಯವಸ್ಥೆ ಮಾಡಲಾಗಿತ್ತು. ಇದನ್ನು ಕಂಡ ಮೋದಿಯವರು ತನಗೆ ಈ ಸೋಫಾ ಬೇಡ, ಇತರರೊಂದಿಗೆ ಮಾಮೂಲಿ ಕುರ್ಚಿಯಲ್ಲೇ ಕುಳಿತುಕೊಳ್ಳುತ್ತೇನೆಂದು ಆ ಸೋಫಾ ತೆಗೆಸಿ ಬೇರೆ ಕುರ್ಚಿ ತರಿಸಿದರು. ರೈಲ್ವೇ ಖಾತೆ ಸಚಿವ ಪೀಯೂಶ್ ಗೋಯಲ್ ಈ ವಿಡಿಯೋವನ್ನು ತನ್ನ ಟ್ವೀಟರ್ ನಲ್ಲಿ ಪ್ರಕಟಿಸಿದ್ದು, ಇದು ಈಗ ಜನಪ್ರಿಯವಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಈಗ ಭಾರಿ ಪ್ರಚಾರ ಪಡೆಯುತ್ತಿದ್ದು, ಪ್ರಧಾನಿ ಮೋದಿಯವರ ಸರಳತೆಯನ್ನು ನೆಟ್ಟಿಗರು ಕೊಂಡಾಡಿದ್ದಾರೆ.
PM @NarendraModi जी की सरलता का उदाहरण आज पुनः देखने को मिला, उन्होंने रूस में अपने लिए की गई विशेष व्यवस्था को हटवा कर अन्य लोगों के साथ सामान्य कुर्सी पर बैठने की इच्छा जाहिर की। pic.twitter.com/6Rn7eHid6N
— Piyush Goyal (@PiyushGoyal) September 5, 2019
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
You seem to have an Ad Blocker on.
To continue reading, please turn it off or whitelist Udayavani.