Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
Team Udayavani, Apr 23, 2024, 8:51 AM IST
ತೈಪೆ: ತೈವಾನ್‌ನ ಪೂರ್ವ ಕೌಂಟಿ ಹುವಾಲಿಯನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸರಣಿ ಭೂಕಂಪ ಸಂಭವಿಸಿದ ವರದಿಯಾಗಿದೆ.
ದೇಶದಲ್ಲಿ ಸಂಭವಿಸಿದ ಅತ್ಯಂತ ಶಕ್ತಿಶಾಲಿ ಭೂಕಂಪ ಇದಾಗಿದೆ ಎಂದು ಹೇಳಲಾಗಿದೆ. ತೈವಾನ್ ರಾಜಧಾನಿಯಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರ ಮುಂಜಾನೆಯವರೆಗೆ ಇಪ್ಪತ್ತಕ್ಕೂ ಹೆಚ್ಚು ಭಾರಿ ಭೂಕಂಪನಡಾ ಅನುಭವವಾಗಿದೆ ಎಂದು ಹೇಳಲಾಗಿದೆ. ಪೂರ್ವ ಹುವಾಲಿಯನ್‌ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಕೇಂದ್ರ ಹವಾಮಾನ ಆಡಳಿತ ತಿಳಿಸಿದೆ.
ಭೂಕಂಪದಿಂದ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ ಎನ್ನಲಾಗಿದ್ದು ಯಾವುದೇ ಕಟ್ಟಡಗಳಿಗೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎನ್ನಲಾಗಿದೆ.
ಕೇಂದ್ರ ಹವಾಮಾನ ಇಲಾಖೆಯ ಪ್ರಕಾರ, ಮೊದಲ ತೀವ್ರ ಭೂಕಂಪವು ಸೋಮವಾರ ಸಂಜೆ 5:08ಕ್ಕೆ ರಾಜಧಾನಿ ತೈಪೆಯಲ್ಲಿ 5.5 ರ ತೀವ್ರತೆಯಾ ಭೂಕಂಪ ಸಂಭವಿಸಿದೆ ಎಂದು ಹೇಳಲಾಗಿದೆ.
ಸರಣಿ ಭೂಕಂಪದ ಅನುಭವ:
ಸೋಮವಾರ ಸಂಜೆಯಿಂದ ಮೊದಲ ಭೂಕಂಪ ಸಂಭವಿಸಿದ ಬೆನ್ನಲ್ಲೇ ಮಂಗಳವಾರ ಮುಂಜಾನೆ ವರೆಗೆ ಇಪ್ಪತ್ತಕ್ಕೂ ಹೆಚ್ಚು ಭೂಕಂಪಗಳು ಸಂಭವಿಸಿದೆ ಎಂದು ಅಲ್ಲಿನ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಅಲ್ಲದೆ ಭೂಕಂಪ ಸಂಭವಿಸಿದ ಕೂಡಲೇ ಮನೆಮಂದಿ ಮನೆಯಿಂದ ಹೊರಗೆ ಓಡೋಡಿ ಬಂದಿದ್ದು ಮತ್ತೆ ಮನೆಯೊಳಗೇ ಹೋಗುವ ಧೈರ್ಯ ನಮ್ಮಲ್ಲಿ ಇರಲಿಲ್ಲ ಎಂದು ಹೇಳಿದ್ದಾರೆ.
ಮಧ್ಯರಾತ್ರಿ 2:26ಕ್ಕೆ 6.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಆರು ನಿಮಿಷಗಳ ನಂತರ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಕೇಂದ್ರ ಹವಾಮಾನ ಆಡಳಿತ ತಿಳಿಸಿದೆ.
ಇದನ್ನೂ ಓದಿ:
🚨 BREAKING: A 6.1 MAGNITUDE EARTHQUAKE HAS HIT TAIWAN’S CAPITAL TAIPEI. 😳 ‼️ pic.twitter.com/YadLWcrtDG
— DramaAlert (@DramaAlert) April 22, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.