ದೇಣಿಗೆ ಸಂಗ್ರಹದಲ್ಲಿ ಲಖ್ವಿ ಬ್ಯುಸಿ
Team Udayavani, May 11, 2018, 9:49 AM IST
ಲಾಹೋರ್: ಭಾರತದಲ್ಲಿ ಉಗ್ರ ಕೃತ್ಯ ಮತ್ತು ಇತರ ಪಾತಕ ಕೃತ್ಯ ನಡೆಸಿರುವ ಇಬ್ಬರು ಉಗ್ರದ್ವಯರ ತಾಜಾ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮುಂಬಯಿ ದಾಳಿಯ ರೂವಾರಿ, ಉಗ್ರ ಝಕೀವುರ್ ರೆಹಮಾನ್ ಲಖ್ವಿ ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ಧನ ಸಂಗ್ರಹಿಸುತ್ತಿದ್ದಾನೆ.
2015ರಲ್ಲಿ ಲಾಹೋರ್ ಹೈಕೋರ್ಟಿನಿಂದ ಜಾಮೀನು ಪಡೆದುಕೊಂಡ ಬಳಿಕ ಮೊದಲ ಬಾರಿಗೆ ಆತ ಕಾಣಿಸಿಕೊಂಡಿದ್ದಾನೆ. ದೇಶದ ಗುಪ್ತಚರ ಸಂಸ್ಥೆಗಳು ಕಲೆಹಾಕಿರುವ ಮಾಹಿತಿ ಪ್ರಕಾರ ಲಖ್ವಿಯೇ ಸಂಘಟನೆಯ ನೇತೃತ್ವ ವಹಿಸಿದ್ದಾನೆ. ಜತೆಗೆ ಪಾಕ್‌ನ ಪಂಜಾಬ್ ನಲ್ಲಿ ರೈತರು ಮತ್ತು ಇತರ ಮೂಲಗಳಿಂದ ಆತ ಹಣ ಸಂಗ್ರಹ ಮಾಡುತ್ತಿದ್ದಾನೆ. ಪಾಕಿಸ್ಥಾನದ ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್ ನಿಷೇಧ ಹೇರಿದ ಹೊರತಾಗಿಯೂ ಈ ಕ್ರಮ ಮುಂದುವರಿದಿದೆ.
ಇದೇ ವೇಳೆ ಉಗ್ರ ಸಂಘಟನೆ ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಕೂಡ ಪಾಕಿಸ್ಥಾನದ ವಿವಿಧ ಭಾಗಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾನೆ. ಶೀಘ್ರದಲ್ಲಿಯೇ ಆ ದೇಶದಲ್ಲಿ ಚುನಾವಣೆ ನಡೆಯಲಿದ್ದು, ಅದಕ್ಕಾಗಿ ರಾಜಕೀಯ ಪ್ರವೇಶದ ಇರಾದೆಯನ್ನೂ ಹೊಂದಿದ್ದಾನೆ. ಇದರ ಜತೆಗೆ ಉಗ್ರ ಸಂಘಟನೆ ಕಾಶ್ಮೀರ ವಿಚಾರವನ್ನು ಪ್ರಧಾನವಾಗಿ ಪ್ರಕಟಿಸುವ ನಿಯತಕಾಲಿಕೆ ಪ್ರಕಟಿಸಲು ಶುರು ಮಾಡಿದೆ. ಅದರಲ್ಲಿ ಲಷ್ಕರ್ ಉಗ್ರ ಸಂಘಟನೆಯ ವಕ್ತಾರ ಅಬ್ದುಲ್ಲ ಘಝ°ವಿ ಸಂದರ್ಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.