ಇನ್ನಾದರೂ ನರ ಹತ್ಯೆ ನಿಲ್ಲಿಸಿ ; ಮ್ಯಾನ್ಮಾರ್‌ಗೆ ವಿಶ್ವಸಂಸ್ಥೆ ಕೋರ್ಟ್‌ನಲ್ಲಿ ತಾಕೀತು
Team Udayavani, Dec 11, 2019, 1:34 AM IST
ದ ಹೇಗ್: ಮ್ಯಾನ್ಮಾರ್ ಸರಕಾರ ರೊಹಿಂಗ್ಯಾ ಮುಸ್ಲಿಮರ ವಿರುದ್ಧ ದಮನಕಾರಿ ನೀತಿ ಅನುಸರಿಸುತ್ತಿರುವುದಕ್ಕೆ ವಿಶ್ವಸಂಸ್ಥೆಯ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ನರ ಹತ್ಯೆಯನ್ನು ನಿಲ್ಲಿಸುವಂತೆ ನ್ಯಾಯಾಲಯ ನೊಬೆಲ್ ಪುರಸ್ಕೃತೆ ಆ್ಯಂಗ್ ಸ್ಯಾನ್ ಸೂಕಿ ಅವರಿಗೆ ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಇದರಿಂದಾಗಿ ಸೂಕಿ ಅವರಿಗೆ ಅಂತಾರಾಷ್ಟ್ರೀಯ ಮಟ್ಟ ದಲ್ಲಿ ಮುಜುಗರ ಉಂಟಾಗಿದೆ. ಮಂಗಳವಾರ ನಡೆದಿದ್ದ ವಿಚಾರಣೆ ವೇಳೆ ಸೂಕಿ ಸಮ್ಮುಖದಲ್ಲಿಯೇ 2017ರಲ್ಲಿ ನಡೆದಿದ್ದ ಕಾರ್ಯಾಚರಣೆಯ ಫೋಟೋ, ದೌರ್ಜನ್ಯ ಆರೋಪಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು.
2017ರಲ್ಲಿ ಮ್ಯಾನ್ಮಾರ್ ಸರಕಾರ ಅನುಸರಿಸಿದ್ದ ದಮನಕಾರಿ ನೀತಿಯ ಅನ್ವಯ 7.40 ಲಕ್ಷಕ್ಕೂ ಅಧಿಕ ರೊಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶಕ್ಕೆ ಪಲಾಯನ ಮಾಡಿದ್ದರು. ಅದರ ವಿರುದ್ಧ ಆಫ್ರಿಕಾ ಖಂಡದ ರಾಷ್ಟ್ರ ಗಾಂಬಿಯಾ ಅಂತಾರಾಷ್ಟ್ರೀಯ ಸಮುದಾಯದ ಗಮನ ಸೆಳೆದು, ವಿಶ್ವಸಂಸ್ಥೆಯ ಕೋರ್ಟ್‌ಗೆ ದೂರು ನೀಡಿತ್ತು.
ಅಲ್ಲಿನ ನ್ಯಾಯ ಖಾತೆ ಸಚಿವ ಅಬೂಬಕರ್ ತಂಬಾದೌ, ಮ್ಯಾನ್ಮಾರ್ ಸರಕಾರ 1948ರ ನರಹತ್ಯೆ ನಿಷೇಧ ಸಮ್ಮೇಳನದ ಒಪ್ಪಂದ ಉಲ್ಲಂ ಸಿದೆ. ಅದೇ ರೀತಿಯ ಮತ್ತೂಂದು ಘಟನೆ ಶೀಘ್ರದಲ್ಲಿಯೇ ನಡೆಯಲಿದೆ. ಅದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕಿದೆ ಎಂದು ಪ್ರಬಲವಾಗಿ ವಾದಿಸಿದರು. ಮ್ಯಾನ್ಮಾರ್ ಸರಕಾರದ ವಿರುದ್ಧ ಇರುವ ಆರೋಪಗಳ ಬಗ್ಗೆ ನೊಬೆಲ್ ಪುರಸ್ಕೃತೆ ಬುಧವಾರ ಸಮಗ್ರ ಉತ್ತರ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Emotions: ಭಾವನೆಗಳ ಬಸ್ ನಿಲ್ದಾಣ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.