ನರೇಂದ್ರ ಮೋದಿ ಉತ್ತಮ ಕೆಲಸ ಮಾಡುತ್ತಿದ್ದಾರೆ: ಹಾಡಿ ಹೊಗಳಿದ ಡೊನಾಲ್ಡ್ ಟ್ರಂಪ್
Team Udayavani, Sep 8, 2022, 4:23 PM IST
ನ್ಯೂ ಜೆರ್ಸಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ. ನರೇಂದ್ರ ಮೋದಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಎನ್ ಡಿಟಿವಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಡೊನಾಲ್ಡ್ ಟ್ರಂಪ್ ಅವರು ಮುಂದಿನ ಚುನಾವಣೆಗೆ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.
“ಎಲ್ಲರೂ ನಾನು ಸ್ಪರ್ಧಿಸಬೇಕೆಂದು ಬಯಸುತ್ತಾರೆ, ಪೋಲ್ ಗಳಲ್ಲಿ ನಾನೇ ಮುಂದಿದ್ದೇನೆ. ಈ ಬಗ್ಗೆ ನಾನು ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇನೆ” ಎಂದು ಡೊನಾಲ್ಡ್ ಟ್ರಂಪ್ ಹೇಳಿದರು.
ಬರಾಕ್ ಒಬಾಮ, ಜೋ ಬೈಡನ್ ಗಿಂತ ಭಾರತದ ಜೊತೆ ನೀವು ಉತ್ತಮ ಸಂಬಂಧ ಹೊಂದಿದ್ದರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ ಇದನ್ನು ನೀವು ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಕೇಳಬೇಕು. ಆದರೆ ಅಧ್ಯಕ್ಷ ಟ್ರಂಪ್ ಅವರೊಂದಿಗೆ ನೀವು ಹೊಂದಿದ್ದಕ್ಕಿಂತ ಉತ್ತಮ ಸಂಬಂಧವನ್ನು ನೀವು ಎಂದಿಗೂ ಹೊಂದಿಲ್ಲ ಎಂದು ನಾನು ಭಾವಿಸುತ್ತೇನೆ.” ಎಂದರು.
ಇದನ್ನೂ ಓದಿ:ಎನ್ ಐಎ ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತಿದೆ : ರಿಯಾಝ್ ಫರಂಗಿಪೇಟೆ
“ನಾನು ಭಾರತ ಮತ್ತು ಮೋದಿ ಜೊತೆ ಉತ್ತಮ ಸಂಬಂಧ ಹೊಂದಿದ್ದೆ. ನಾವು ಉತ್ತಮ ಸ್ನೇಹಿತರಾಗಿದ್ದೆವು. ಅವರೊಬ್ಬ (ಮೋದಿ) ಅದ್ಭುತ ವ್ಯಕ್ತಿ. ಅವರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸ ಸುಲಭದಲ್ಲ. ನಾವಿಬ್ಬರು ಹಲವು ಸಮಯದಿಂದ ಪರಿಚಿತರು” ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
2019ರ ಸಪ್ಟೆಂಬರ್ ನಲ್ಲಿ ಎರಡನೇ ಬಾರಿ ಚುನಾಯಿತರಾದ ನರೇಂದ್ರ ಮೋದಿ ಅವರು ಡೊನಾಲ್ಡ್ ಟ್ರಂಪ್ ಜೊತೆ ಟೆಕ್ಸಾಸ್ ನಲ್ಲಿ “ ಹೌಡಿ ಮೋದಿ” ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಟ್ರಂಪ್ ಪರವಾಗಿ ಮಾತನಾಡಿದ್ದ ಮೋದಿ “ ಅಬ್ ಕಿ ಬಾರ್, ಟ್ರಂಪ್ ಸರ್ಕಾರ್” ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.