Nepal; ಪ್ರಚಂಡ ಸರಕಾರ ಪತನ: ‘ವಿಶ್ವಾಸ’ದ ಪರೀಕ್ಷೆಯಲ್ಲಿ ಸೋಲು
Team Udayavani, Jul 13, 2024, 12:45 AM IST
ಕಠ್ಮಂಡು: ಬಹುಮತ ಕಳೆದುಕೊಂಡಿದ್ದ ಪ್ರಧಾನಿ ಪುಷ್ಪ ಕಮಲ್ ದಹಲ್(ಪ್ರಚಂಡ) ನೇತೃತ್ವದ ಸರಕಾರವು ಶುಕ್ರವಾರ ನೇಪಾಲ ಸಂಸತ್ತಿನಲ್ಲಿ ವಿಶ್ವಾಸ ಮತ ನಿರ್ಣಯದಲ್ಲಿ ಸೋಲು ಕಂಡಿದೆ. ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ನೇತೃತ್ವದ ಹೊಸ ಸರಕಾರ ಅಸ್ತಿತ್ವಕ್ಕೆ ಬರಲಿದೆ. ಈ ಮಧ್ಯೆ, ಪ್ರಚಂಡ ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸರಕಾರದ ಪಾಲುದಾರ ಪಕ್ಷವಾದ ಸಿಪಿಎನ್-ಯುಎಂಎಲ್ ಬೆಂಬಲ ವಾಪಸ್ ಪಡೆದ ಹಿನ್ನೆಲೆಯಲ್ಲಿ ಪ್ರಚಂಡ ಸರಕಾರ ಅಲ್ಪಮತಕ್ಕೆ ಕುಸಿದಿತ್ತು. 275 ಸದಸ್ಯ ಬದಲ ನೇಪಾಲ ಸಂಸತ್ತಿನಲ್ಲಿ ವಿಶ್ವಾಸ ಮತದ ಪರವಾಗಿ ಕೇವಲ 63 ಮತಗಳು ಚಲಾವಣೆಯಾದರೆ, ನಿರ್ಣಯದ ವಿರುದ್ಧ 194 ಮತಗಳು ಬಂದವು. ವಿಶ್ವಾಸಮತ ಗೆಲ್ಲಲು ಕನಿಷ್ಠ 138 ಮತಗಳ ಅಗತ್ಯವಿತ್ತು. 2022ರಲ್ಲಿ ಅಧಿಕಾರಕ್ಕೆ ಬಂದ ಪ್ರಚಂಡ ಇದುವರೆಗೆ 4 ಬಾರಿ ವಿಶ್ವಾಸಮತ ನಿರ್ಣಯ ಗೆದ್ದಿದ್ದರು. ನೇಪಾಲ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ನೇಪಾಲ ನ್ಯಾಶನಲ್ ಕಾಂಗ್ರೆಸ್ ಹಾಗೂ ಸಿಪಿಎನ್- ಯುಎಂಎಲ್ ಪಕ್ಷಕ್ಕೆ ಸರಕಾರ ರಚಿಸಲು ಶೀಘ್ರವೇ ಆಹ್ವಾನ ನೀಡುವ ಸಾಧ್ಯತೆಗಳಿವೆ. ಕಾಂಗ್ರೆಸ್ ಪಕ್ಷ 89 ಸದಸ್ಯರು ಮತ್ತು ಸಿಪಿಎನ್-ಯುಎಂಎಲ್ 78 ಸದಸ್ಯರನ್ನು ಹೊಂದಿದೆ. ಇವರೆಡೂ ಅತಿದೊಡ್ಡ ಪಕ್ಷಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.