ಹೆಲಿಕಾಪ್ಟರ್ ಅಪಘಾತ; ನೇಪಾಳ ಪ್ರವಾಸೋದ್ಯಮ ಸಚಿವ ಸೇರಿ 7 ಮಂದಿ ಸಾವು
Team Udayavani, Feb 27, 2019, 11:00 AM IST
ಕಾಠ್ಮಂಡು: ನೇಪಾಳದ ಪ್ರವಾಸೋದ್ಯಮ ಸಚಿವ ರಬೀಂದ್ರಾ ಅಧಿಕಾರಿ ಸೇರಿದಂತೆ ಏಳು ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬುಧವಾರ ಅಪಘಾತಕ್ಕೀಡಾಗಿದ್ದು, ಏಳು ಮಂದಿ ಸಾವನ್ನಪ್ಪಿರುವುದಾಗಿ ಎಎನ್ ಐ ವರದಿ ಮಾಡಿದೆ.
ನೇಪಾಳದ ಟೆಹ್ರಾಥೂಮ್ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ ಎಂದು ನೇಪಾಳದ ನಾಗರಿಕ ವಿಮಾನಯಾನ ಅಧಿಕಾರಿಗಳು ತಿಳಿಸಿದ್ದಾರೆ. ಏರ್ ಡೈನಾಸ್ಟಿ ಹೆಲಿಕಾಪ್ಟರ್ ನಲ್ಲಿ ಸಚಿವ ಅಧಿಕಾರಿ, ಏರ್ ಲೈನ್ಸ್ ಉದ್ಯಮಿ ಆ್ಯಂಗ್ ತ್ಸೆರಿಂಗ್ ಶೆರ್ಪಾ, ಯುವರಾಜ್ ದಹಾಲ್ ಹಾಗೂ ಪೈಲಟ್ ಸೇರಿದಂತೆ ಏಳು ಮಂದಿಯೂ ಸಾವಿಗೀಡಾಗಿರುವುದಾಗಿ ಹಿಮಾಲಯನ್ ಟೈಮ್ಸ್ ಹೇಳಿದೆ.
ಹೆಲಿಕಾಪ್ಟರ್ ನಾಪತ್ತೆಯಾದ ಕೆಲವೇ ಹೊತ್ತಿನಲ್ಲಿ ಪಾಥಿಬಾರಾ ಪ್ರದೇಶದ ಸ್ಥಳೀಯರು ಅಪಘಾತ ಸಂಭವಿಸಿದ ಸ್ಥಳದಲ್ಲಿ ದೊಡ್ಡ ಪ್ರಮಾಣದ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರವಾಸೋದ್ಯಮ ಸಚಿವರು ತಮ್ಮ ಇಲಾಖೆಯ ಅಧಿಕಾರಿಗಳ ಜತೆ ಪಾಥಿಬಾರಾ ದೇವಸ್ಥಾನಕ್ಕೆ ಭೇಟಿ ನೀಡಲು ಹೊರಟಿದ್ದರು. ಅಲ್ಲದೇ ಚುಹಾನ್ ದಾಂಡಾ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎಂದು ವರದಿ ವಿವರಿಸಿದೆ.
ಘಟನಾ ಸ್ಥಳಕ್ಕೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ನೇಪಾಳ ಪ್ರಧಾನಿ ತುರ್ತು ಸಭೆ ನಡೆಸಿ, ತನಿಖೆಗೆ ಆದೇಶ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Pakistan: ಬಲೂಚ್ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ
Washington: ಹಿಲರಿ, ಸೊರೋಸ್ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.