ಒಳಚರಂಡಿಯಲ್ಲಿದ್ದ ನವಜಾತಶಿಶು ರಕ್ಷಣಾ ಕಾರ್ಯಾಚರಣೆಯಲ್ಲಿ ಬದುಕುಳಿಯಿತು
Team Udayavani, Feb 13, 2019, 3:11 AM IST
ನವಜಾತ ಶಿಶುಗಳನ್ನು ಕಸದ ತೊಟ್ಟಿಯಲ್ಲಿ ಬಿಸಾಕಿ ಹೋಕುವ ಅಮಾನವೀಯ ಘಟನೆಗಳನ್ನು ನಾವು ಆಗಾಗ ಕೇಳುತ್ತಿರುತ್ತೇವೆ. ಇನ್ನು ಕೆಲವು ಕಡೆಗಳಲ್ಲಿ ಪೊದೆಗಳಲ್ಲಿ, ಶೌಚಾಲಯಗಳಲ್ಲಿಯೂ ನವಜಾತ ಶಿಶುಗಳು ಪತ್ತೆಯಾದ ಘಟನೆಗಳು ನಡೆಯುತ್ತಲೇ ಇರುತ್ತವೆ. ಆದರೆ ಇಲ್ಲೊಂದು ಕಡೆ ಒಳಚರಂಡಿ ಚೇಂಬರ್ ನೊಳಗೆ ನವಜಾತ ಶಿಶುವೊಂದು ಪತ್ತೆಯಾಗಿದ್ದು ರಕ್ಷಣಾ ಕಾರ್ಯಕರ್ತರು ಸುಮಾರು ನಾಲ್ಕು ಗಂಟೆಗಳ ಮ್ಯಾರಥಾನ್ ಕಾರ್ಯಾಚರಣೆಯ ಬಳಿಕ ಮಗುವನ್ನು ಜೀವಂತವಾಗಿ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಂದ ಹಾಗೆ ಈ ಘಟನೆ ನಡೆದಿರುವುದು ದಕ್ಷಿಣ ಆಫ್ರಿಕಾದ ಜೊಹಾನ್ಸ್ ಬರ್ಗ್ ನಗರದಲ್ಲಿ.
ಸೋಮವಾರದಂದು ಅಲ್ಲಿನ ಸ್ಥಳಿಯ ನಿವಾಸಿಗಳಿಗೆ ಒಳಚರಂಡಿ ಆಳದಿಂದ ಮಗು ಅಳುತ್ತಿರುವ ಧ್ವನಿ ಕೇಳಿಸುತ್ತದೆ. ತಕ್ಷಣವೇ ಅವರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುತ್ತಾರೆ, ಆಗ ರಕ್ಷಣಾ ಕಾರ್ಯಕರ್ತರು ಮತ್ತು ವೈದ್ಯಕೀಯ ಪಾಲನಾ ತಂಡವು ಸ್ಥಳಕ್ಕಾಗಮಿಸಿ ಮಗುವಿನ ರಕ್ಷಣಾ ಕಾರ್ಯವನ್ನು ಪ್ರಾರಂಭಿಸುತ್ತಾರೆ. ಅಕ್ಷರಶಃ ಒಳಚರಂಡಿ ಭಾಗವನ್ನು ಅಗೆದು ನಾಲ್ಕು ಗಂಟೆಗಳ ಕಾರ್ಯಾಚರಣೆಯ ಬಳಿಕ ಶಿಶುವನ್ನು ಹೊರತೆಗೆಯಲಾಯಿತು. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದವರು ಹರ್ಷೋದ್ಘಾರ ಮಾಡಿದರು ಮತ್ತು ನವಜಾತ ಹೆಣ್ಣು ಶಿಶು ಜೀವಂತ ರಕ್ಷಣೆಯಾಗಿದ್ದಕ್ಕೆ ಆನಂದ ಬಾಷ್ಟ ಸುರಿಸಿದರು. ಇದೀಗ ಶಿಶುವನ್ನು ಆಸ್ಪತ್ರಗೆ ದಾಖಲಿಸಲಾಗಿದ್ದು ಅಲ್ಲಿ ಚೇತರಿಸಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.