Border ಅತಿಕ್ರಮಣ ಬೇಡ: ಚೀನಕ್ಕೆ ಭಾರತ ಎಚ್ಚರಿಕೆ
ಮಾತುಕತೆಯಿಂದ ಸಮಸ್ಯೆ ಇತ್ಯರ್ಥ: ಜೈಶಂಕರ್
Team Udayavani, Jul 5, 2024, 6:29 AM IST
ಆಸ್ಟಾನಾ: ವಾಸ್ತವಿಕ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ಗೌರವಿಸಿ ಮತ್ತು ಗಡಿ ಅತಿಕ್ರಮಣ ಮಾಡುವುದು ಬೇಡ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಚೀನಕ್ಕೆ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ. ಕಜಕಿಸ್ಥಾನದ ಆಸ್ಟಾನದಲ್ಲಿ ಶಾಂಘೈ ಸಹಕಾರ ಒಕ್ಕೂಟದ ಸಭೆಯ ನಡುವೆ ಚೀನ ವಿದೇಶಾಂಗ ಸಚಿವ ವಾಂಗ್ ಇ ಜತೆಗೆ ನಡೆಸಿದ ಮಾತುಕತೆ ವೇಳೆ ಈ ಅಂಶ ಪ್ರಸ್ತಾವಿಸಲಾಗಿದೆ.
ಪೂರ್ವ ಲಡಾಖ್ ಗಡಿತಂಟೆಯನ್ನು ಬಗೆಹರಿಸಲು ಮಾತುಕತೆಯೇ ಪರಿಹಾರವೆಂದು ಇಬ್ಬರು ನಾಯಕರು ಸಹಮತಕ್ಕೆ ಬಂದಿದ್ದಾರೆ. ಆದರೆ ಎಲ್‌ಎಸಿ ಗೌರವಿಸಬೇಕು ಎಂದು ಸಚಿವ ಜೈಶಂಕರ್ ಹೇಳಿದ್ದಾರೆ. ಪರಸ್ಪರ ಗೌರವ, ಪರಸ್ಪರ ಸೂಕ್ಷ್ಮತೆ, ಹಿತಾಸಕ್ತಿ ಯನ್ನು ಅರಿಯುವುದರಿಂದ ಭಾರತ ಹಾಗೂ ಚೀನ ನಡುವಿನ ದ್ವಿಪಕ್ಷೀಯ ಸಂಬಂಧಗಳು ಸುಧಾರಿಸುತ್ತವೆ ಎಂದು ಟ್ವೀಟ್ ಮಾಡಿದ್ದಾರೆ. ಉಭಯ ಸಚಿ ವರ ಬಗ್ಗೆ ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ಇಬ್ಬರು ನಾಯಕರು ದ್ವಿಪಕ್ಷೀಯ ಬಾಂಧವ್ಯ ವೃದ್ಧಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದಿದೆ. ಪೂರ್ವ ಲಡಾಖ್‌ನಲ್ಲಿ ಚೀನ ಸೇನೆ ದಾಳಿ ನಡೆಸಿದ ಬಳಿಕ ಭಾರತ ಮತ್ತು ಚೀನದ ನಡುವಿನ ಸಂಬಂಧ ಹದಗೆಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.