Israel-Hamas Conflict: ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಮೃತರ ಸಂಖ್ಯೆ 1,100 ಕ್ಕೆ ಏರಿಕೆ
ಸಂಗೀತೋತ್ಸವ ಕಾರ್ಯಕ್ರಮದ ಮೇಲೆ ಹಮಾಸ್ ಉಗ್ರರ ದಾಳಿ
Team Udayavani, Oct 9, 2023, 8:41 AM IST
ಗಾಜಾ ಪಟ್ಟಿ: ಇಸ್ರೇಲ್ ಹಾಗೂ ಉಗ್ರಗಾಮಿ ಗುಂಪು ಹಮಾಸ್ ನಡುವಿನ ಸಂಘರ್ಷ ಮುಂದುವರೆದಿದ್ದು, ಎರಡು ಕಡೆಗಳ ಸಂಘರ್ಷದಲ್ಲಿ ಮೃತರ ಸಂಖ್ಯೆ 1,100 ಕ್ಕೂ ಮೇಲ್ಪಟ್ಟಿದೆ ಎಂದು ವರದಿ ತಿಳಿಸಿದೆ.
ಗಾಜಾ ಪಟ್ಟಿಯ ಬಳಿ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ಬಳಿಕ ಇಸ್ರೇಲ್ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪು ಹಮಾಸ್ ವಿರುದ್ಧ ಯುದ್ಧ ಘೋಷಿಸಿತು. ಮೂರು ದಿನಗಳ ಸಂಘರ್ಷವು ಈಗಾಗಲೇ ಎರಡೂ ಕಡೆಗಳಲ್ಲಿ 1,100 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ ಎಂದು ಹೇಳಲಾಗಿದ್ದು, ಇಸ್ರೇಲ್‌ನಲ್ಲಿ 44 ಸೈನಿಕರು ಸೇರಿದಂತೆ 700 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ದಾಳಿಯ ಕುರಿತು ಪ್ರತಿಕ್ರಿಯೆ ನೀಡಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹಮಾಸ್ ದಾಳಿಯಿಂದ ಯುದ್ಧ ಆರಂಭವಾಗಿದ್ದು ಇದಕ್ಕೆ ನಮ್ಮ ಸೇನೆ ಪ್ರತಿಕಾರ ತೀರಿಸಿಕೊಳ್ಳಲಿದೆ ಎಂದು ಹೇಳಿದ ಅವರು ಉಗ್ರಗಾಮಿ ಗುಂಪಿನ ಅಡಗುತಾಣಗಳನ್ನು ಸಂಪೂರ್ಣ ನಾಶಪಡಿಸುವುದಾಗಿ ಪ್ರತಿಜ್ಞೆ ಮಾಡಿದರು.
ಉಗ್ರರ ದಾಳಿಯಲ್ಲಿ ಹಲವು ಸೈನಿಕರು ಮತ್ತು ಪೊಲೀಸರು ಸೇರಿದಂತೆ ಹೆಚ್ಚಿನ ಜನ ಮೃತಪಟ್ಟಿದ್ದಾರೆ ಮತ್ತು 2,048ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಇಸ್ರೇಲ್ ಮೂಲದ ಮಾಧ್ಯಮ ವರದಿ ಮಾಡಿದೆ.
ಸಂಗೀತೋತ್ಸವ ಕಾರ್ಯಕ್ರಮದ ಮೇಲೆ ಹಮಾಸ್ ದಾಳಿ
ಇಸ್ರೇಲ್ ನಲ್ಲಿ ನಡೆಯುತಿದ್ದ ಸಂಗೀತೋತ್ಸವ ಕಾರ್ಯಕ್ರಮದ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿದ ಪರಿಣಾಮ ಸುಮಾರು 260 ಮಂದಿ ಮೃತಪಟ್ಟಿರುವುದಾಗಿ ಇಸ್ರೇಲಿ ರಕ್ಷಣಾ ಸೇವೆ ಝಕಾ ವರದಿ ಮಾಡಿದೆ.
ಗಾಜಾ ಬಳಿಯ ಕಿಬ್ಬುಟ್ಜ್ ರೀಮ್ ಬಳಿ ನೇಚರ್ ಪಾರ್ಟಿ ಆಯೋಜಿಸಲಾಗಿತ್ತು ಇದನ್ನು ಗುರುಯಾಗಿರಿಸಿಕೊಂಡು ದಾಳಿ ನಡೆಸಿದ ಹಮಾಸ್ ಉಗ್ರರು ರಾಕೆಟ್ ದಾಳಿ ನಡೆಸಿದ್ದಾರೆ ಘಟನೆಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನರು ದಿಕ್ಕುಪಾಲಾಗಿ ಜೀವ ಉಳಿಸಿಕೊಳ್ಳಲು ಓಡಿದ್ದಾರೆ ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಜನರ ಮೇಲೆ ಹಮಾಸ್ ಬಂದೂಕುಧಾರಿಗಳು ಗುಂಡಿನ ಮರೆಗಳೆದರು. ಈ ದಾಳಿಯಲ್ಲಿ ಸುಮಾರು 260ಜನ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ: Mangaluru ತಣ್ಣೀರುಬಾವಿಯಲ್ಲಿ ಕಡಲಜೀವಿಗಳಿಗೊಂದು ಸಂರಕ್ಷಣ ಕೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Missile Strike: ಉಕ್ರೇನ್ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Israel; ಪ್ರಧಾನಿ ನಿವಾಸಕ್ಕೆ ಬಾಂಬ್ ದಾಳಿ: 3 ಮಂದಿ ಸೆರೆ
MUST WATCH
ಹೊಸ ಸೇರ್ಪಡೆ
Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.