ಪಾಕ್ ತೊರೆದ ಚೀನೀಯರು; ಆರ್ಥಿಕ ಸಂಕಷ್ಟದಲ್ಲಿರುವ ದೇಶಕ್ಕೆ ಮತ್ತೊಂದು ಆಘಾತ
ಮೊಬೈಲ್ ಉತ್ಪಾದನಾ ಘಟಕಗಳಲ್ಲಿ ಕೆಲಸವಿಲ್ಲದ್ದೇ ಕಾರಣ
Team Udayavani, Apr 5, 2023, 7:40 AM IST
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ತುತ್ತು ಅನ್ನಕ್ಕೂ ಹಾಹಾಕಾರ ಉಂಟಾಗುತ್ತಿದೆ. ಇತರ ಯಾವ ರಾಷ್ಟ್ರಗಳಿಂದಲೂ ನಿರೀಕ್ಷಿತ ನೆರವು ಅದಕ್ಕೆ ಸಿಗುತ್ತಿಲ್ಲ. ಅದರ ಯಾವತ್ತೂ ಮಿತ್ರರಾಷ್ಟ್ರ ಎಂದು ಹೇಳಿಕೊಂಡ ಚೀನ ಕೂಡ ನಡುನೀರಿನಲ್ಲಿ ಕೈಬಿಟ್ಟಂತೆ ಇದೆ.
ದಿವಾಳಿಯ ಹಂತದಲ್ಲಿ ಇರುವ ರಾಷ್ಟ್ರದಲ್ಲಿ ಮೂವತ್ತು ಮೊಬೈಲ್ ಫೋನ್ ತಯಾರಿಕಾ ಘಟಕಗಳು ಬಾಗಿಲು ಮುಚ್ಚಿವೆ. ಅದಕ್ಕೆ ಕಾರಣವೂ ಇಲ್ಲದೇ ಇಲ್ಲ. ಪಾಕಿಸ್ತಾನ ಸರ್ಕಾರದ ಬಳಿ ವಿದೇಶಿ ವಿನಿಮಯ ಪ್ರಮಾಣವೂ ಕುಸಿತಗೊಂಡಿರುವುದರಿಂದ ಮೊಬೈಲ್ ತಯಾರಿಕೆಗೆ ಬೇಕಾಗುವ ಅಗತ್ಯ ವಸ್ತುಗಳ ಕೊರತೆ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ಮೊಬೈಲ್ ಉತ್ಪಾದನೆ ಮಾಡುವ ಘಟಕಗಳ ಒಕ್ಕೂಟ ಅನಿವಾರ್ಯವಾಗಿ ಉತ್ಪಾದನೆ ಸ್ಥಗಿತಗೊಳಿಸಲೇಬೇಕಾಗಿದೆ ಎಂದು ಸರ್ಕಾರಕ್ಕೆ ಮನವರಿಕೆ ಮಾಡಿದೆ. ಜತೆಗೆ ಈ ಘಟಕಗಳಲ್ಲಿ ಇರುವ ಶೇ.90ರಷ್ಟು ಮಂದಿ ಚೀನ ಪರಿಣಿತರು ಕೂಡ ಸ್ವದೇಶಕ್ಕೆ ವಾಪಸಾಗಿದ್ದಾರೆ. ಇದು ದೇಶದ ವರ್ಚಸ್ಸಿಗೆ ಧಕ್ಕೆ ತರುವ ಅಂಶ ಮತ್ತು ಮುಂದಿನ ದಿನಗಳಲ್ಲಿ ಆರ್ಥಿಕ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರತಿಕೂಲ ಪರಿಣಾಮಗಳನ್ನು ತಂದುಕೊಡಲಿದೆ ಎಂದು ಒಕ್ಕೂಟ ಭೀತಿ ವ್ಯಕ್ತಪಡಿಸಿದೆ.
ಪಾಕಿಸ್ತಾನದ ಸೆಂಟ್ರಲ್ ಬ್ಯಾಂಕ್ ಮೊಬೈಲ್ ಉತ್ಪಾದನಾ ಘಟಕಗಳ ಯಾವುದೇ ರೀತಿಯ ಕೋರಿಕೆಗಳನ್ನು ಪರಿಗಣಿಸದಂತೆ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ ಎಂದು ಒಕ್ಕೂಟ ಅಲವತ್ತುತೊಂಡಿದೆ. ಇದೇ ವೇಳೆ, ಮಾರ್ಚ್‌ಗೆ ಸಂಬಂಧಿಸಿದಂತೆ ಆ ದೇಶದ ಹಣದುಬ್ಬರ ಶೇ.35.37ಕ್ಕೆ ಏರಿಕೆಯಾಗಿದೆ. ಐದು ದಶಕಗಳಿಗೆ ಹೋಲಿಕೆ ಮಾಡಿದರೆ ಇದು ಅತ್ಯಧಿಕವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.