ಭಾರತದ ಹೊಸ ಭೂಪಟಕ್ಕೆ ಪಾಕ್ ಆಕ್ಷೇಪ
Team Udayavani, Nov 3, 2019, 7:09 PM IST
ಇಸ್ಲಾಮಾಬಾದ್: ಕೇಂದ್ರ ಸರ್ಕಾರವು ಶನಿವಾರವಷ್ಟೇ ಬಿಡುಗಡೆ ಮಾಡಿದ ಹೊಸ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಅನ್ನು ಒಳಗೊಂಡ ಭಾರತದ ಭೂಪಟವು ಪಾಕಿಸ್ತಾನದ ನಿದ್ದೆಗೆಡಿಸಿದೆ.
ಕಾಶ್ಮೀರದ ಸಂಪೂರ್ಣ ಭೂಭಾಗವು ಭಾರತಕ್ಕೇ ಸೇರಿದ್ದು ಎಂದು ಭೂಪಟದಲ್ಲಿ ಚಿತ್ರಿಸಿದ್ದಕ್ಕೆ ಪಾಕ್ ಭಾನುವಾರ ಆಕ್ಷೇಪ ವ್ಯಕ್ತಪಡಿಸಿದೆ. ಇದೊಂದು ಅಸಮರ್ಪಕ ಮತ್ತು ಕಾನೂನಾತ್ಮಕವಾಗಿ ಒಪ್ಪಲಾಗದ ನಕ್ಷೆ ಎಂದು ಹೇಳಿದೆ.
ಭಾರತ ಬಿಡುಗಡೆ ಮಾಡಿದ ಮ್ಯಾಪ್‌ನಲ್ಲಿ, ಪಾಕ್ ಆಕ್ರಮಿತ ಕಾಶ್ಮೀರವನ್ನು ಹೊಸ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದೊಳಗೆ ಹಾಗೂ ಗಿಲಿYಟ್-ಬಾಲ್ಟಿಸ್ತಾನವನ್ನು ಲಡಾಖ್‌ನೊಳಗೆ ಸೇರಿಸಿ ಚಿತ್ರಿಸಿದ್ದು, ಪಾಕ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪಾಕ್ ವಿದೇಶಾಂಗ ಇಲಾಖೆ, ಇದೊಂದು ಕಾನೂನುಬಾಹಿರ ಕೃತ್ಯ ಹಾಗೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯದ ಸಂಪೂರ್ಣ ಉಲ್ಲಂಘನೆ ಎಂದು ಆರೋಪಿಸಿದೆ. ಅಲ್ಲದೆ, ಈ ಭೂಪಟವನ್ನು ಪಾಕಿಸ್ತಾನವು ನಿರಾಕರಿಸುತ್ತದೆ ಎಂದೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.