ಇಮ್ರಾನ್ ಹತ್ಯೆ ಯತ್ನ ಪ್ರಕರಣ: ಪ್ರತಿಭಟನಾಕಾರರು, ಪೊಲೀಸರ ನಡುವೆ ಘರ್ಷಣೆ, ದಾಂಧಲೆ

ಮಾಜಿ ಪತಿಯ ಆರೋಗ್ಯದಲ್ಲಿ ಸುಧಾರಣೆಯಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.

Team Udayavani, Nov 5, 2022, 9:05 AM IST

ಇಮ್ರಾನ್ ಹತ್ಯೆ ಯತ್ನ ಪ್ರಕರಣ: ಪ್ರತಿಭಟನಾಕಾರರು, ಪೊಲೀಸರ ನಡುವೆ ಘರ್ಷಣೆ, ದಾಂಧಲೆ

ಲಾಹೋರ್‌/ಇಸ್ಲಾಮಾಬಾದ್‌: ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಯತ್ನ ಖಂಡಿಸಿ ಅವರ ಬೆಂಬಲಿಗರು ಮತ್ತು ಪಾಕಿಸ್ತಾನ ತೆಹ್ರಿಕ್‌-ಇ-ಇನ್ಸಾಫ್ (ಪಿಟಿಐ) ಪಕ್ಷದ ಸದಸ್ಯರು ಪಾಕಿಸ್ತಾನ ದಾದ್ಯಂತ ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಮುಂದಿನ ವರ್ಷದ ಆಗಸ್ಟ್‌ ವೇಳೆಗೆ ಸಂಸತ್‌ ಚುನಾವಣೆ ನಡೆಯಲಿರುವಂತೆಯೇ ಅಲ್ಲಿ ಮತ್ತೂಮ್ಮೆ ಸಂಘರ್ಷದ ವಾತಾವರಣ ಉಂಟಾಗಿದೆ. ಫೈಜಾಬಾದ್‌, ಕರಾಚಿ, ಲಾಹೋರ್‌ ಸೇರಿದಂತೆ ಪ್ರಮುಖ ನಗರಗಳಲ್ಲಿ ತಮ್ಮ ನಾಯಕನ ಹತ್ಯೆ ಯತ್ನ ಖಂಡಿಸಿ ಪಿಟಿಐ ಸದಸ್ಯರು ಪೊಲೀಸರ ಜತೆಗೆ ಘರ್ಷಣೆ ನಡೆಸಿದ್ದಾರೆ.

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಹಲವು ಭಾಗಗಳಲ್ಲಿ ಇಮ್ರಾನ್‌ ಖಾನ್‌ ಬೆಂಬಲಿಗರು ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಪೊಲೀಸರು ಅವರನ್ನು ಮನವೊಲಿಸಲು ಪ್ರಯತ್ನ ಮಾಡಿದರೂ, ಅವರು ಅದಕ್ಕೆ ಸ್ಪಂದಿಸಲಿಲ್ಲ. ಹೀಗಾಗಿ, ಅವರನ್ನು ಚದುರಿಸಲು ಅಶ್ರುವಾಯು ಸಿಡಿಸಿದ್ದಾರೆ. ಇದರ ಹೊರತಾಗಿಯೂ ಸಂಚಾರಕ್ಕೆ ಅಡ್ಡಿಪಡಿಸಿದವರನ್ನು ಪೊಲೀಸರು ವಶಕ್ಕೆ ಪಡಿಸಿಕೊಂಡಿದ್ದಾರೆ.

ಮೊದಲೇ ಮಾಹಿತಿ ಇತ್ತು: ಲಾಹೋರ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಮ್ರಾನ್‌ ಖಾನ್‌ ಅರೋಗ್ಯ ಸುಧಾರಿಸುತ್ತಿರುವಂತೆಯೇ ಅವರು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಗುರುವಾರ ತಮ್ಮ ಮೇಲೆ ದಾಳಿ ನಡೆಯಲಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿತ್ತು ಎಂದು ಹೇಳಿದ್ದಾರೆ.ಪಾಕಿಸ್ತಾನದಲ್ಲಿ ನಡೆದಿದ್ದ ಹಿಂದಿನ ಚುನಾವಣೆಯಲ್ಲಿ ದೇಶದ ಜನರು ತಮ್ಮ ಪಕ್ಷದ ನೀತಿಗಳನ್ನು ಮೆಚ್ಚಿ ಮತ ಹಾಕಿದ್ದರು.

ಪಾಕಿಸ್ತಾನ ಮುಸ್ಲಿ ಲೀಗ್‌- ನವಾಜ್‌ ಮತ್ತು ಪಾಕಿಸ್ತಾನ ಪೀಪಲ್ಸ್‌ ಪಾರ್ಟಿಗಳ ಮುಖಂಡರು ದೇಶದ ಮೇಲಿನ ಸಾಲದ ಹೊರೆಯನ್ನು ಹೆಚ್ಚಿಸಿವೆ ಎಂದು ದೂರಿದರು. ದೇಶದ ತನಿಖಾ ಸಂಸ್ಥೆಗಳು ಪ್ರಜಾಸತ್ತಾತ್ಮಕವಾಗಿ ನಡೆಯುತ್ತಿದ್ದ ಪ್ರತಿಭಟನಾ ಯಾತ್ರೆಗೆ ಅವಕಾಶ ನೀಡುತ್ತಿಲ್ಲ ಎಂದು ಇಮ್ರಾನ್‌ ಖಾನ್‌ ಆರೋಪಿಸಿದ್ದಾರೆ.

ನಾಲ್ಕು ಗುಂಡುಗಳು: ದಾಳಿ ನಡೆಸಿದ ವ್ಯಕ್ತಿ ನಾಲ್ಕು ಗುಂಡುಗಳನ್ನು ಹಾರಿಸಿದ್ದಾನೆ. ಅವರು ನನ್ನನ್ನು ಕೊಲ್ಲಲು ಬಯಸಿದ್ದರು ಎಂದು ಇಮ್ರಾನ್‌ ಟೀಕಿಸಿದರು. ಇಬ್ಬರ ಬಂಧನ: ಇಮ್ರಾನ್‌ ಖಾನ್‌ ಮೇಲೆ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ. ಮತ್ತೂಂದು ಬೆಳವಣಿಗೆಯಲ್ಲಿ ದಾಳಿ ಎಸಗಿ ಸಿಕ್ಕಿಬಿದ್ದ ನವೀದ್‌ನ ತಪ್ಪೊಪ್ಪಿಗೆ ವಿಡಿಯೋವನ್ನು ಲೀಕ್‌ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡಲಾಗಿದೆ.

ತನಿಖೆಗೆ ಸಮಿತಿ: ಮಾಜಿ ಪ್ರಧಾನಿ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮತ್ತು ಆ ದೇಶದ ಪಂಜಾಬ್‌ ಪ್ರಾಂತ್ಯದ ಸರ್ಕಾರಗಳು ಜಂಟಿ ತನಿಖೆ ನಡೆಸಲಿವೆ. ಅದಕ್ಕಾಗಿ ಉನ್ನತ ಮಟ್ಟದ ಜಂಟಿ ತನಿಖಾ ಸಮಿತಿಯನ್ನೂ ರಚಿಸಿವೆ. ಸೂಚ್ಯಂಕ ಪತನ: ಗುರುವಾರ ನಡೆದ ದಾಳಿ ಪ್ರಕರಣದ ಬೆನ್ನಲ್ಲೇ ಶುಕ್ರವಾರ ಪಾಕಿಸ್ತಾನದ ಸ್ಟಾಕ್‌ ಎಕ್ಸ್‌ಚೇಂಜ್‌ನಲ್ಲಿ ಸಂವೇದಿ ಸೂಚ್ಯಂಕ 200 ಪಾಯಿಂಟ್ಸ್‌ ಕುಸಿದಿದೆ.

ಮಾಜಿ ಪತ್ನಿಯರ ಖಂಡನೆ
ಇಮ್ರಾನ್‌ ಖಾನ್‌ ಹತ್ಯೆ ಯತ್ನವನ್ನು ಅವರ ಮಾಜಿ ಪತ್ನಿಯರು ಖಂಡಿಸಿದ್ದಾರೆ. ಪತ್ನಿಯರಾದ ಜೆಮಿಮಾ ಗೋಲ್ಡ್‌ಸ್ಮಿತ್‌, ರೆಹಾಮ್‌ ಖಾನ್‌ ಖಂಡನೆ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ. ರೆಹಾಮ್‌ ಖಾನ್‌ ಟ್ವೀಟ್‌ ಮಾಡಿ ಇದೊಂದು ಆಘಾತಕಾರಿ ಘಟನೆ. ಪ್ರಮುಖ ವ್ಯಕ್ತಿಗಳಿಗೆ ಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಜೆಮಿಮಾ ಪ್ರತಿಕ್ರಿಯೆ ನೀಡಿ, ಮಾಜಿ ಪತಿಯ ಆರೋಗ್ಯದಲ್ಲಿ ಸುಧಾರಣೆಯಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. ಜತೆಗೆ ದಾಳಿಕೋರನನ್ನು ಹಿಡಿದು ಕೊಟ್ಟ ವ್ಯಕ್ತಿಗೆ ಧನ್ಯವಾದವನ್ನೂ ಸಮರ್ಪಿಸಿದ್ದಾರೆ.

ಟಾಪ್ ನ್ಯೂಸ್

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.