ಭಾರತ ಜತೆಗಿನ ಉದ್ವಿಗ್ನತೆ ಶಮನಕ್ಕೆ ತುರ್ತಾಗಿ ನೆರವಾಗಿ: UNಗೆ ಪಾಕ್
Team Udayavani, Feb 19, 2019, 7:16 AM IST
ಇಸ್ಲಾಮಾಬಾದ್ : 40 ಭಾರತೀಯ ಯೋಧರನ್ನು ಬಲಿ ಪಡೆದಿರುವ ಪುಲ್ವಾಮಾ ಉಗ್ರ ದಾಳಿಯಿಂದಾಗಿ ಪರಾಕಾಷ್ಠೆಗೆ ತಲುಪಿರುವ ಭಾರತದೊಂದಿಗಿನ ಉದ್ವಿಗ್ನತೆಯನ್ನು ಶಮನಗೊಳಿಸಲು ವಿಶ್ವಸಂಸ್ಥೆ ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ಪಾಕಿಸ್ಥಾನ ಬೇಡಿಕೊಂಡಿದೆ.
ಕಳೆದ ಫೆ.14ರಂದು ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ಪಾಕ್‌ಮೂಲದ ಜೈಶ್ ಸಂಘಟನೆಯ ಉಗ್ರನೋರ್ವ ಆತ್ಮಾಹುತಿ ಬಾಂಬ್ ದಾಳಿ ನಡೆಸಿ 40 ಭಾರತೀಯ ಯೋಧರನ್ನು ಬಲಿಪಡೆದಿದ್ದ. ಈ ಹಿನ್ನೆಲೆಯಲ್ಲಿ ಭಾರತ -ಪಾಕ್ ತಮ್ಮ ರಾಜತಾಂತ್ರಿಕರನ್ನು ಹಿಂದಕ್ಕೆ ಕರೆಸಿಕೊಂಡಿದ್ದು ಉಭಯ ದೇಶಗಳ ನಡುವಿನ ಉದ್ವಿಗ್ನತೆ ಪರಾಕಾಷ್ಠೆಗೇರಿದೆ.
ಪಾಕ್ ವಿದೇಶ ಸಚಿವ ಶಾ ಮಹಮೂದ್ ಕುರೇಶಿ ಅವರು ವಿಶ್ವ ಸಂಸ್ಥೆಯ ಮಹಾ ಕಾರ್ಯದರ್ಶಿ ಅಂಟೋನಿಯೋ ಗುಟೆರೆಸ್ ಅವರಿಗೆ ಪತ್ರ ಬರೆದು ಉಭಯ ದೇಶಗಳ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವ ದಿಶೆಯಲ್ಲಿ ತುರ್ತಾಗಿ ನೆರವಾಗುವಂತೆ ವಿಶ್ವಸಂಸ್ಥೆಯನ್ನು ಕೋರಿದ್ದಾರೆ.
ಕಾಶ್ಮೀರ ವಿಷಯದಲ್ಲಿ ಯಾವುದೇ ತೃತೀಯ ಪಕ್ಷದ ಹಸ್ತಕ್ಷೇಪವನ್ನು ಸಾರಾಸಗಟು ತಿರಸ್ಕರಿಸಿರುವ ಭಾರತ, ಪಾಕಿಸ್ಥಾನದ ಜತೆಗಿನ ಯಾವತ್ತೂ ವಿವಾದಗಳನ್ನು ದ್ವಿಪಕ್ಷೀಯ ನೆಲೆಯಲ್ಲೇ ಪರಿಹರಿಸಿಕೊಳ್ಳಬೇಕಿದೆ ಎಂದು ಪಟ್ಟು ಹಿಡಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.