ಪಾಕಿಸ್ಥಾನ: 26/11 ದಾಳಿಕೋರ ಸಯೀದ್ ಅನುಚರರ ಬಿಡುಗಡೆ
Team Udayavani, Nov 12, 2017, 1:40 PM IST
ಲಾಹೋರ್: 2008ರಲ್ಲಿ ಮುಂಬಯಿ ಮೇಲೆ ದಾಳಿ ನಡೆಸಿದ ಪ್ರಧಾನ ಸಂಚುಕೋರ ಹಫೀಜ್ ಸಯೀದ್‌ನ ನಾಲ್ವರು ಅನುಚರರನ್ನು ಬಿಡುಗಡೆ ಮಾಡಲಾಗಿದೆ. ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದ ಜೈಲಿನಲ್ಲಿ ಅವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಲಾಗಿತ್ತು. ಪಂಜಾಬ್ ಸರಕಾರದ ನ್ಯಾಯಾಂಗ ಪರಿಶೀಲನಾ ಮಂಡಳಿ ಬಂಧಿತರ ಅವಧಿಯ ವಿಸ್ತರಣೆಗೆ ಯಾವುದೇ ರೀತಿಯಲ್ಲಿ ಒಪ್ಪದೇ ಇದ್ದುದರಿಂದ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಈ ವರ್ಷದ ಜನವರಿ 31ರಂದು ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ನಾಯಕ ಸಯೀದ್ ಮತ್ತು ಇತರ ನಾಲ್ವರನ್ನು ಮುನೆಚ್ಚರಿಕಾ ಕ್ರಮವಾಗಿ ಬಂಧಿಸಲಾಗಿತ್ತು. ಮೊದಲ ಹಂತದಲ್ಲಿ ಅವರನ್ನು ಉಗ್ರ ನಿಗ್ರಹ ಕಾಯ್ದೆಯಡಿ 90 ದಿನಗಳ ಕಾಲ ಬಂಧಿಸಲಾಗಿತ್ತು. ಇದಾದ ಬಳಿಕ ಬಂಧನ ಅವಧಿಯನ್ನು ಮತ್ತಷ್ಟು ವಿಸ್ತರಿಸಲಾಗಿತ್ತು. ಈಗಾಗಲೇ ಎರಡು ಬಾರಿ ಬಂಧನ ಅವಧಿ ವಿಸ್ತರಣೆ ಮಾಡಿದ್ದರಿಂದ ನ್ಯಾಯಾಂಗ ಪರಿಶೀಲನಾ ಮಂಡಳಿಗೆ ಮತ್ತೂಮ್ಮೆ ವಿಸ್ತರಣೆಯ ಅಗತ್ಯವನ್ನು ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಯಿತು. ಹೀಗಾಗಿ ಅವರನ್ನು ಬಿಡುಗಡೆ ಮಾಡಲಾಗಿದೆ.
ಕೊಲ್ಲಲು ಸಂಚು: ಮತ್ತೂಂದು ಮಹತ್ವದ ಬೆಳವಣಿಗೆಯಲ್ಲಿ ಉಗ್ರ ಹಫೀಜ್ ಸಯೀದ್‌ನನ್ನು ವಿದೇಶಿ ಸಂಸ್ಥೆಯೊಂದು ಕೊಲ್ಲಲು ಸಂಚು ಹೂಡಿದೆ ಎಂದು ಪಾಕಿಸ್ಥಾನದ ಗುಪ್ತಚರ ಸಂಸ್ಥೆಗಳು ಆರೋಪ ಮಾಡಿವೆ. ಅದಕ್ಕಾಗಿ 80 ಮಿಲಿಯ ರೂ.ಗಳನ್ನು ಪಡೆದುಕೊಳ್ಳಲಾಗಿದೆ ಎಂದು ಅವು ದೂರಿವೆ. ಹೀಗಾಗಿ, ಆತನಿಗೆ ನೀಡಲಾಗಿರುವ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ ಎಂದು ಪಾಕಿಸ್ಥಾನದ ಉಗ್ರ ನಿಗ್ರಹ ಪ್ರಾಧಿಕಾರಕ್ಕೆ ಬರೆಯಲಾಗಿರುವ ಪತ್ರದಲ್ಲಿ ವಿವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.