ಪಾಕ್ ಉಗ್ರರ ಉತ್ಪಾದನಾ ಘಟಕ : ವಿಶ್ವಸಂಸ್ಥೆಯಲ್ಲಿ ಭಾರತ
Team Udayavani, Sep 19, 2017, 9:18 AM IST
ಜಿನೆವಾ : ತನ್ನ ನೆಲದಲ್ಲಿ ನಿರಂತರ ಉಗ್ರ ಚಟುವಟಿಕೆಗಳನ್ನು ನಡೆಸುತ್ತಿರುವ ಪಾಕಿಸ್ಥಾನಕ್ಕೆ ಭಾರತ ವಿಶ್ವಸಂಸ್ಥೆಯಲ್ಲಿ ಚಾಟಿಯೇಟು ನೀಡಿದ್ದು,’ಅಂತರಾಷ್ಟ್ರೀಯ ಭಯೋತ್ಪಾದನೆಯ ಮುಖವಾಗಿರುವ ಪಾಕ್ ಉಗ್ರ ಉತ್ಪಾದನಾ ಘಟಕ’ ಎಂದು ಜರಿದಿದೆ.
ವಿಶ್ವಸಂಸ್ಥೆಯ 36 ನೇಯ ಮಾನವ ಹಕ್ಕುಗಳ ಸಮಿತಿಯ ಸಭೆಯಲ್ಲಿ ಮಾತನಾಡಿದ ಐಎಫ್ಎಸ್ ಅಧಿಕಾರಿ ವಿಷ್ಣು ರೆಡ್ಡಿ ‘ಭಯೋತ್ಪಾನಾ ಕೃತ್ಯಗಳು ಅಂತ್ಯವಾಗಬೇಕಾದರೆ ಪಾಕ್ ಮೊದಲು ಉಗ್ರ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಬೇಕು’ ಎಂದು ಕಿಡಿ ಕಾರಿದ್ದಾರೆ.
‘ಅಂತರಾಷ್ಟ್ರೀಯ ಮಟ್ಟದಲ್ಲಿ ನಿಷೇಧಕ್ಕೊಳಗಾಗಿರುವ ಲಷ್ಕರ್ -ಎ-ತೋಯ್ಬಾ, ಜೈಶ್-ಎ -ಮೊಹಮದ್‌ನಂತಹ ಉಗ್ರ ಸಂಘಟನೆಗಳು ಪಾಕ್‌ನಲ್ಲಿ ಕಾರ್ಯಚರಿಸುತ್ತಿರುವ ಬಗ್ಗೆ ಅಲ್ಲಿನ ವಿದೇಶಾಂಗ ಸಚಿವರೂ ಒಪ್ಪಿಕೊಂಡಿದ್ದಾರೆ. ಅವುಗಳನ್ನು ಮೊದಲು ಸ್ಥಗಿತಗೊಳಿಸಬೇಕು ಮತ್ತು ಉಗ್ರವಾದಿಗಳನ್ನು ಶಿಕ್ಷಿಸಿ ವಿಶ್ವಕ್ಕೆ ನ್ಯಾಯ ಒದಗಿಸಲಿ’ ಎಂದು ರೆಡ್ಡಿ ಆಗ್ರಹಿಸಿದರು.
‘ಕಾಶ್ಮೀರದಲ್ಲಿನ ಉಗ್ರ ಚಟುವಟಿಕೆಗಳಿಗೆ ಪಾಕ್ ನೆರವು ನೀಡುತ್ತಿರುವುದು ಸ್ಪಷ್ಟವಾಗಿದೆ’ ಎಂದ ರೆಡ್ಡಿ ‘ಕಾಶ್ಮೀರ ಭಾರತದ ಅವಿಭಾಜ್ಯ ಮತ್ತು ಅವಿಚ್ಛಿನ್ನ ಅಂಗವಾಗಿಯೇ ಉಳಿಯಲಿದೆ’ ಎಂದು ಪುನರುಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.