Pakistan; ಏಷ್ಯಾದ ಮೊದಲ ಮಂಗನ ಸಿಡುಬು ಕೇಸ್ ದೃಢ
ಸೌದಿಯಿಂದ ಹಿಂದಿರುಗಿದ ಯುವಕನಲ್ಲಿ ಪತ್ತೆ
Team Udayavani, Aug 17, 2024, 6:20 AM IST
ಹೊಸದಿಲ್ಲಿ: ಮಂಗನ ಸಿಡಬು (ಎಂಪಾಕ್ಸ್) ಪ್ರಕರಣವೊಂದು ಏಷ್ಯಾದಲ್ಲೇ ಮೊದಲ ಬಾರಿಗೆ ಪಾಕಿಸ್ಥಾನದಲ್ಲಿ ದೃಢಪಟ್ಟಿದೆ. ಮಂಗನ ಸಿಡುಬು ಕುರಿತು ವಿಶ್ವ ಆರೋಗ್ಯ ಸಂಸ್ಥೆ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿ ಸಿದ ಬೆನ್ನಲ್ಲೇ ಈ ಪ್ರಕರಣ ಪತ್ತೆಯಾ ಗಿದೆ ಎಂದು ಪಾಕಿಸ್ಥಾನ ಆರೋಗ್ಯ ಸಚಿವಾಲಯವು ಹೇಳಿದೆ.
ಇತ್ತೀಚೆಗಷ್ಟೇ ಸೌದಿ ಅರೇಬಿಯಾದಿಂದ ಹಿಂದಿರುಗಿರುವ 34 ವರ್ಷದ ವ್ಯಕ್ತಿಯೊಬ್ಬನಿಗೆ ಮಂಗನ ಸಿಡುಬು ತಗಲಿದೆ. ಈತನೊಂದಿಗೆ ಸಂಪರ್ಕ ಹೊಂದಿರುವ ಎಲ್ಲರನ್ನು ಪತ್ತೆ ಹಚ್ಚುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಪಾಕಿಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ. 2023ರಲ್ಲಿ 11 ಪ್ರಕರಣಗಳು ಪತ್ತೆಯಾಗಿದ್ದವು ಮತ್ತು ಒಬ್ಬರು ಮೃತಪಟ್ಟಿದ್ದರು.
ಮಂಗನ ಸಿಡುಬು ರೋಗ ಲಕ್ಷಣಗಳು
ಮಂಗನ ಸಿಡುಬು ಪತ್ತೆಯಾದ ವರಲ್ಲಿ ತೀವ್ರ ಜ್ವರ, ತಲೆನೋವು, ಸ್ನಾಯು ನೋವು, ಬೆನ್ನು ನೋವು, ಗ್ರಂಥಿಗಳ ಉಬ್ಬುವಿಕೆ, ನಡುಕ, ಕೀಲು ನೋವು ಮತ್ತು ಆಯಾಸ ಕಂಡು ಬರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.