ಚೀನ-ಪಾಕ್ ಜಂಟಿಯಾಗಿ ಭಯಾನಕ ವೈರಸ್ ಸೃಷ್ಟಿ?
Team Udayavani, Nov 9, 2022, 7:15 AM IST
ರಾವಲ್ಪಿಂಡಿ: ಚೀನ ಮತ್ತು ಪಾಕಿಸ್ತಾನ ಜಂಟಿಯಾಗಿ ರಾವಲ್ಪಿಂಡಿಯ ರಹಸ್ಯ ಪ್ರಯೋಗಾಲಯದಲ್ಲಿ ಕೊರೊನಾಕ್ಕಿಂತಲೂ ಭಯಾನಕವಾದ ವೈರಸ್ ಸೃಷ್ಟಿಸುವಲ್ಲಿ ನಿರತವಾಗಿವೆ ಎಂಬ ಆತಂಕಕಾರಿ ವರದಿಯನ್ನು ಎಎನ್‌ಐ ಬಹಿರಂಗಪಡಿಸಿದೆ.
ವುಹಾನ್ ಇನ್ಸಿಟ್ಯೂಟ್ ಆಫ್ ಡಿಫೆನ್ಸ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ಆರ್ಗನೈಸೇಷನ್(ಡಿಎಸ್‌ಟಿಒ) ಎಂಬ ಹೆಸರಿನಲ್ಲಿ ಈ ಪ್ರಯೋಗಾಲಯವನ್ನು ನಿರ್ಮಿಸಲಾಗಿದೆ. ಪಾಕಿಸ್ತಾನ ಸೇನೆಯು ಇದರ ಮೇಲುಸ್ತುವಾರಿ ವಹಿಸಿದೆ.
ಈ ಪ್ರಯೋಗಾಲಯದಲ್ಲಿ ವಿಶೇಷ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ ವೈರಾಣುಗಳ ಸಂಶೋಧನೆ ನಡೆಯುತ್ತಿದೆ. ರಾವಲ್ಪಿಂಡಿಯ ಚಕ್ಲಾಲ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಈ ಪ್ರಯೋಗಾಲಯಕ್ಕೆ ಪಾಕ್ ಸೇನೆಯು ಬಿಗಿ ಬಂದೋಬಸ್ತ್ ಕಲ್ಪಿಸಿದೆ ಎಂದು ಜಿಯೋ-ಪೊಲಿಟಿಕ್ ಸಂಸ್ಥೆಯ ವರದಿ ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.
2020ರಲ್ಲೇ ಇಂಥದ್ದೊಂದು ಪ್ರಯೋಗ ಪಾಕಿಸ್ತಾನದಲ್ಲಿ ನಡೆಯುತ್ತಿದೆ ಎಂಬ ವದಂತಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಆದರೆ ಈ ಬಯೋಸೇಫ್ಟಿ-3 ಪ್ರಯೋಗಾಲಯದ ಕುರಿತ ವರದಿಗಳನ್ನು ಪಾಕಿಸ್ತಾನ ಅಲ್ಲಗಳೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.