ಕುಲಭೂಷಣ್ ಜಾಧವ್ ತಾಯಿಗೆ ವೀಸಾ ನೀಡಲು ಪಾಕ್ ಚಿಂತನೆ: ವರದಿ
Team Udayavani, Jul 13, 2017, 4:59 PM IST
ನವದೆಹಲಿ:ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಭೇಟಿಯಾಗಲು ಜಾಧವ್ ತಾಯಿಗೆ ವೀಸಾ ನೀಡುವ ಬಗ್ಗೆ ಪಾಕಿಸ್ತಾನ ಸರ್ಕಾರ ಚಿಂತನೆ ನಡೆಸುತ್ತಿರುವುದಾಗಿ ಮಾಧ್ಯಮದ ವರದಿಯೊಂದು ಹೇಳಿದೆ.
ಎಎನ್ ಐ ನ್ಯೂಸ್ ಏಜೆನ್ಸಿ ಪ್ರಕಾರ, ಭಾರತದ ಮನವಿ ಮೇರೆಗೆ ಮಗನನ್ನು ಭೇಟಿಯಾಗಲು ಜಾಧವ್ ತಾಯಿಗೆ ವೀಸಾ ನೀಡಲು ಇಸ್ಲಾಮಾಬಾದ್ ಉದ್ದೇಶಿಸಿದೆ ಎಂದು ತಿಳಿಸಿದೆ.
ಕುಲಭೂಷಣ್ ಜಾಧವ್ ಅವರನ್ನು ಭೇಟಿಯಾಗಲು ಪಾಕಿಸ್ತಾನ ವೀಸಾ ನೀಡಬೇಕೆಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮನವಿ ಮಾಡಿಕೊಂಡಿದ್ದರು. ಜಾಧವ್ ಅವರ ತಾಯಿಗೆ ವೀಸಾ ನೀಡಲು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜೀಜ್ ಅವರು ಹಿಂದೇಟು ಹಾಕಲು ಯಾವ ಕಾರಣವೂ ಇಲ್ಲ, ಆದರೂ ವೀಸಾ ನೀಡಿಕೆಗೆ ಶಿಫಾರಸು ಮಾಡಲು ಯಾಕೆ ಹಿಂಜರಿಯುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ ಎಂದು ಸುಷ್ಮಾ ಅಸಮಾಧಾನ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.