ಯುದ್ದೋನ್ಮತ್ತ ಪಾಕ್: ಕ್ಷಿಪಣಿ ಪರೀಕ್ಷೆ ಮಾಡಲಿರುವ ನೆರೆ ರಾಷ್ಟ್ರ
Team Udayavani, Aug 29, 2019, 10:34 AM IST
ಇಸ್ಲಮಾಬಾದ್: ಜಮ್ಮು- ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ನಂತರ ಕೆಂಡಾಮಂಡಲವಾಗಿರುವ ನೆರೆರಾಷ್ಟ್ರ ಪಾಕಿಸ್ಥಾನ ಯುದ್ದಕ್ಕೆ ಸಜ್ಜಾದಂತಿದೆ. ಪದೇ ಪದೇ ಯುದ್ದದ ಬಗ್ಗೆ ಮಾತಾಡುತ್ತಿರುವ ಪಾಕ್ ಈಗ ಒಂದು ಹೆಜ್ಜೆ ಮುಂದು ಹೋಗಿದ್ದು, ಕ್ಷಿಪಣಿ ಪರೀಕ್ಷೆ ಮಾಡಲು ತಯಾರಿ ನಡೆಸಿದೆ.
ಕರಾಚಿಯ ಸೋನ್ಮೈನಿ ಬಳಿ ಪಾಕ್ ಈ ಕ್ಷಿಪಣಿ ಪರೀಕ್ಷೆ ನಡೆಸಲು ಸಿದ್ದತೆ ನಡೆಸಿದೆ ಎಂದು ಮೂಲಗಳು ವರದಿ ಮಾಡಿದೆ. ಇದೇ ಕಾರಣದಿಂದಾಗಿ ಕರಾಚಿ ಮೂಲಕ ಸಂಚರಿಸುವ ಭಾರತೀಯ ವಿಮಾನಗಳ ಮೂರು ವಾಯು ಮಾರ್ಗವನ್ನು ನಿರ್ಬಂಧಿಸಲಾಗಿದೆ. ಆಗಸ್ಟ್ 28ರಂದು ಜಾರಿಯಾಗಿರುವ ಈ ನಿರ್ಬಂಧ ಆಗಸ್ಟ್ 31ರವರೆಗೆ ಮುಂದುವರಿಯಲಿದೆ. ಕೇವಲ ನಾಲ್ಕು ದಿನಗಳಿಗೆ ವಾಯು ಮಾರ್ಗ ನಿರ್ಬಂಧ ವಿಧಿಸಿರುವ ಪಾಕ್ ನ ಈ ನಡೆ ಅನುಮಾನಕ್ಕೆ ಕಾರಣವಾಗಿತ್ತು. ಈ ನಾಲ್ಕು ದಿನಗಳಲ್ಲೇ ಪಾಕಿಸ್ಥಾನ ಕ್ಷಿಪಣಿ ಪರೀಕ್ಷೆ ನಡೆಸಲಿದೆ ಎಂದು ವರದಿಯಾಗಿದೆ.
ಪಾಕಿಸ್ಥಾನದ ರೈಲ್ವೇ ಸಚಿವ ಶೇಖ್ ರಶೀದ್ ಅಹ್ಮದ್ ಭಾರತ – ಪಾಕ್ ಯುದ್ದ ಸಂಭವನೆಯ ಬಗ್ಗೆ ಮಾತಾಡಿದ್ದು, ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ಉಭಯ ದೇಶಗಳ ನಡುವೆ ಯುದ್ದ ನಡೆಯಲಿದೆ ಎಂದು ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Puttur: ಕೆರೆಗೆ ಬಿದ್ದು ವ್ಯಕ್ತಿ ಸಾವು
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.