ಧ್ವಜ ಸುಡಲು ಬಂದರು ; ದೇಶಪ್ರೇಮಿಗಳೆದುರು ಸುಮ್ಮನಾದರು


Team Udayavani, Jan 27, 2019, 5:50 AM IST

sikh-flag-27-1.jpg

ವಾಷಿಂಗ್ಟನ್: ಪ್ರತ್ಯೇಕ ಖಲಿಸ್ಥಾನ ರಾಷ್ಟ್ರಕ್ಕಾಗಿ ಹೋರಾಡುತ್ತಿರುವ ಸಂಘಟನೆಯಾಗಿರುವ ಸಿಖ್ ಫಾರ್ ಜಸ್ಟೀಸ್ (SFJ) ಗಣರಾಜ್ಯೋತ್ಸವ ದಿನದಂದು ವಾಷಿಂಗ್ಟನ್ ನಲ್ಲಿರುವ ಭಾರತೀಯ ರಾಯಭಾರಿ ಕಛೇರಿಯ ಎದುರು ಹಮ್ಮಿಕೊಂಡಿದ್ದ ಪ್ರತಿಭಟನೆ ಜನಬೆಂಬಲವಿಲ್ಲದೆ ವಿಫಲವಾದ ಮಾಹಿತಿ ಇದೀಗ ಹೊರಬಿದ್ದಿದೆ.

ಗಣರಾಜ್ಯೋತ್ಸವ ದಿನದಂದು ಸಿಖ್ ಫಾರ್ ಜಸ್ಟೀಸ್ (SFJ) ಸಂಘಟನೆಯು ಭಾರತ ವಿರೋಧಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಮತ್ತು ಇದೇ ಸಂದರ್ಭದಲ್ಲಿ ತ್ರಿವರ್ಣ ಧ್ವಜವನ್ನು ಸುಡುವ ಯೋಚನೆಯನ್ನೂ ಸಂಘಟನೆಯ ಸದಸ್ಯರು ಮಾಡಿಕೊಂಡಿದ್ದರು. ಆದರೆ ಪ್ರತಿಭಟನೆಯ ದಿನ SFJ ಪರವಾಗಿ 15 ರಿಂದ 20 ಸದಸ್ಯರು ಮಾತ್ರವೇ ಪ್ರತಿಭಟನಾ ಸ್ಥಳದಲ್ಲಿ ಹಾಜರಿದ್ದರು. ಇದೇ ಸಂದರ್ಭದಲ್ಲಿ ಭಾರತ ಪರ ಜಾಥಾವೊಂದನ್ನು ಅನಿವಾಸಿ ಭಾರತೀಯ ದೇಶಪ್ರೇಮಿಗಳು ಆಯೋಜಿಸಿದ್ದರು. ಭಾರತ ಪರ ಘೋಷಣೆಗಳನ್ನು ಕೂಗುತ್ತಾ, ತ್ರಿವರ್ಣ ಧ್ವಜವನ್ನು ಹಾರಿಸುತ್ತಾ ಈ ಗುಂಪು ರಾಯಭಾರಿ ಕಛೇರಿಯ ಎದುರು SFJಗೆ ಭರ್ಜರಿ ಶಾಕ್ ನೀಡಿತು.

ಭಾರತ ವಿರೋಧಿ ಪ್ರತಿಭಟನಾಕಾರರಲ್ಲಿ ಪಾಕ್ ಪ್ರಜೆಗಳು!
ಪ್ರತ್ಯಕ್ಷದರ್ಶಿಗಳು ಹೇಳುವಂತೆ ಸಿಖ್ ಫಾರ್ ಜಸ್ಟೀಸ್ (SFJ) ಸಂಘಟನೆ ಆಯೋಜಿಸಿದ್ದ ಈ ಪ್ರತಿಭಟನೆಯಲ್ಲಿ ಪಾಕಿಸ್ಥಾನೀಯರೇ ಇದ್ದರು, ಇದರಿಂದಾಗಿ ಈ ಪ್ರತಿಭಟನೆಯ ಆಯೋಜನೆಯ ಹಿಂದೆ ಪಾಕಿಸ್ಥಾನದ ಕೈವಾಡ ಇರುವ ಕುರಿತಾಗಿ ಇದೀಗ ಶಂಕೆ ವ್ಯಕ್ತವಾಗಿದೆ. 
ತಮ್ಮ ಪ್ರತಿಭಟನೆ ಯಶಸ್ವಿಯಾಗದಿದ್ದರೂ SFJ ತನ್ನ ಅಧೀಕೃತ ವೆಬ್ ಸೈಟ್ ನಲ್ಲಿ ಪ್ರತಿಭಟನೆ ಯಶಸ್ವಿಯಾಗಿರುವುದಾಗಿ ತಪ್ಪು ಮಾಹಿತಿಯನ್ನು ನೀಡಲಾಗಿದೆ. ಇದೇ ವೇಳೆ @sikhsforjustice, @SFJ_Lawyer ಟ್ವಟರ್ ಅಕೌಂಟ್ ಗಳ ಮೇಲೆ ಕಾನೂನು ಕ್ರಮ ಕೈಗೊಂಡು ಅವುಗಳನ್ನು ರದ್ದುಗೊಳಿಸಲಾಗಿದೆ.

ಅನಿವಾಸಿ ಸಿಖ್ ಸಮುದಾಯ ಖಂಡನೆ
SFJ ಆಯೋಜಿಸಿದ್ದ ಭಾರತ ವಿರೋಧಿ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ಭಾರತದ ತ್ರಿವರ್ಣ ಧ್ವಜ ಸುಡುವ ಯೋಚನೆಗೆ ಅಮೆರಿಕಾದಲ್ಲಿರುವ ಸಿಖ್ ಸಮುದಾಯದ ಸದಸ್ಯರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ‘ಭಾರತದಲ್ಲಿ ಮಾತ್ರವಲ್ಲದೇ ವಿಶ್ವದ ಯಾವುದೇ ಭಾಗದಲ್ಲಿರುವ ಶಾಂತಿಪ್ರಿಯ ಸಿಖ್ ಸಮುದಾಯವು ಧ್ವಜ ಸುಡುವಂತಹ ಮಾದರಿಯ ಪ್ರತಿಭಟನೆಯನ್ನು ಯಾವತ್ತೂ ಬೆಂಬಲಿಸುವುದಿಲ್ಲ…’ ಎಂದು ಅಮೆರಿಕಾ ಸಿಖ್ ಸಂಘಟನೆ ತನ್ನ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

ಅಮೆರಿಕಾಕ್ಕೆ ಭಾರತದ ನೂತನ ರಾಯಭಾರಿಯಾಗಿ ನೇಮಕಗೊಂಡಿರುವ ಹರ್ಷ ಶ್ರಿಂಗ್ಲಾ ಅವರು ವಾಷಿಂಗ್ಟನ್ ನಲ್ಲಿರುವ ಭಾರತೀಯ ರಾಯಭಾರ ಕಛೇರಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಗಣರಾಜ್ಯೋತ್ಸವ ದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಅನಿವಾಸಿ ಭಾರತೀಯರು ಹಾಜರಿದ್ದರು.

ಟಾಪ್ ನ್ಯೂಸ್

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.