ಜೆಯುಡಿಗೆ ಶಾಶ್ವತ ನಿಷೇಧ ಹೇರಲು ಪಾಕ್ ಚಿಂತನೆ
Team Udayavani, Apr 9, 2018, 10:20 AM IST
ಇಸ್ಲಾಮಾಬಾದ್: ತನ್ನ ನೆಲದಲ್ಲಿ ಉಗ್ರರನ್ನು ಪೋಷಿಸುತ್ತಿರುವುದಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಛೀಮಾರಿ ಹಾಕಿಸಿಕೊಂಡಿರುವ ಪಾಕಿಸ್ತಾನವು ಇದೀಗ ಕಳಂಕದಿಂದ ಹೊರಬರಲು ಶತಾಯಗತಾಯ ಯತ್ನಿಸುತ್ತಿದೆ. ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಉಗ್ರ ಹಫೀಜ್ ಸಯೀದ್ ನೇತೃತ್ವದ ಜಮಾತ್-ಉದ್-ದಾವಾ ಮತ್ತು ಇತರೆ ಕೆಲವು ಉಗ್ರ ಸಂಘಟನೆಗಳನ್ನು ಶಾಶ್ವತವಾಗಿ ನಿಷೇಧಿಸಲು ಪಾಕಿಸ್ತಾನ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ 1997ರ ಉಗ್ರ ನಿಗ್ರಹ ಕಾಯ್ದೆಗೆ ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು, ಕರಡು ವಿಧೇಯಕವನ್ನು ಸೋಮವಾರದಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ.
ವಿಶೇಷವೆಂದರೆ, ಪಾಕಿಸ್ತಾನದ ಈ ಕ್ರಮಕ್ಕೆ ಇಲ್ಲಿನ ಸೇನೆಯೂ ಬೆಂಬಲ ನೀಡಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. ಅಮೆರಿಕ, ಯುಕೆ, ಫ್ರಾನ್ಸ್ ಮತ್ತು ಜರ್ಮನಿಯು ಕಳೆದ ಫೆಬ್ರವರಿಯಲ್ಲಿ ಪಾಕಿಸ್ತಾನವನ್ನು ಅಂತಾರಾಷ್ಟ್ರೀಯ ನಿಗಾ ಸಂಸ್ಥೆಯ ‘ಹಣಕಾಸು ಅವ್ಯವಹಾರ ಹಾಗೂ ಉಗ್ರರಿಗೆ ಹಣಕಾಸು ಪೂರೈಕೆ ಮಾಡುತ್ತಿರುವ ರಾಷ್ಟ್ರ’ ಎಂಬ ಪಟ್ಟಿಗೆ ಸೇರ್ಪಡೆಗೊಳಿಸಲು ಪ್ರಸ್ತಾಪಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಸುಗ್ರೀವಾಜ್ಞೆಯ ಮೂಲಕ ಉಗ್ರ ನಿಗ್ರಹ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದರೂ, ಅದರ ಅವಧಿ ಇರುವುದು 120 ದಿನಗಳು ಮಾತ್ರ. ಹಾಗಾಗಿ, ಈ ವಿಧೇಯಕ ಮಂಡಿಸಿ ಕಾನೂನು ಜಾರಿಗೊಳಿಸಲು ಪಾಕ್ ಪ್ರಯತ್ನಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.