ಉಕ್ರೇನ್ ನಲ್ಲಿ ರಕ್ಷಣೆ ಮಾಡಿದ್ದಕ್ಕೆ ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಪಾಕಿಸ್ಥಾನದ ಹುಡುಗಿ
Team Udayavani, Mar 9, 2022, 9:31 AM IST
ಕೀವ್/ಹೊಸದಿಲ್ಲಿ: ಯುದ್ಧಪೀಡಿತ ಉಕ್ರೇನ್ ದೇಶದಿಂದ ಭಾರತೀಯರನ್ನು ಕರೆತರುವ ಕೆಲಸ ಸಮರೋಪಾದಿಯಲ್ಲಿ ನಡೆಯುತ್ತಿದೆ. ಆಪರೇಶನ್ ಗಂಗಾ ಕಾರ್ಯಾಚರಣೆ ಮೂಲಕ ಸಾವಿರಾರು ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಈ ನಡುವೆ ಕೀವ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಸಹಾಯದಿಂದ ಪಾಕಿಸ್ತಾನಿ ಹುಡುಗಿ ಅಸ್ಮಾ ಶಫೀಕ್ ಎಂಬ ವಿದ್ಯಾರ್ಥಿನಿಯನ್ನು ಉಕ್ರೇನ್‌ನ ಯುದ್ಧ ವಲಯದಿಂದ ಸ್ಥಳಾಂತರಿಸಲಾಗಿದೆ.
ವೀಡಿಯೊವೊಂದರಲ್ಲಿ, ಅವರು “ಬಹಳ ಕಷ್ಟಕರ ಪರಿಸ್ಥಿತಿ” ಯಿಂದ ಪಾರಾಗಲು ಸಹಾಯ ಮಾಡಿದ್ದಕ್ಕಾಗಿ ಭಾರತೀಯ ರಾಯಭಾರ ಕಚೇರಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿದ್ದಾರೆ. “ನಾವು ಅತ್ಯಂತ ಕಷ್ಟಕರ ಪರಿಸ್ಥಿತಿಯಲ್ಲಿ ಸಿಲುಕಿರುವಾಗ ಇಲ್ಲಿ ಎಲ್ಲಾ ರೀತಿಯಲ್ಲಿ ನಮಗೆ ಬೆಂಬಲ ನೀಡಿದ ಕೀವ್ ನಲ್ಲಿರುವ ಭಾರತದ ರಾಯಭಾರ ಕಚೇರಿಗೆ ನಾನು ತುಂಬಾ ಕೃತಜ್ಞಳಾಗಿದ್ದೇನೆ” ಎಂದು ಅಸ್ಮಾ ಶಫೀಕ್ ಹೇಳಿದ್ದಾರೆ.
ಇದನ್ನೂ ಓದಿ:ಕೋವಿಡ್ ನಾಲ್ಕನೇ ಅಲೆ ಸಾಧ್ಯತೆ ಇಲ್ಲ! ದೇಶದಲ್ಲಿ ಸೋಂಕು ಎಂಡೆಮಿಕ್ ಹಂತ ತಲುಪಿದೆ ಎಂದ ತಜ್ಞ
“ನಾನು ಭಾರತದ ಪ್ರಧಾನ ಮಂತ್ರಿಯವರಿಗೆ ಧನ್ಯವಾದ ಹೇಳುತ್ತಿದ್ದೇನೆ. ನಾವು ಸುರಕ್ಷಿತವಾಗಿ ಮನೆಗೆ ಹೋಗುತ್ತೇವೆ ಎಂಬ ವಿಶ್ವಾಸದಲ್ಲಿದ್ದೇವೆ, ಭಾರತೀಯ ರಾಯಭಾರ ಕಚೇರಿಗೆ ಧನ್ಯವಾದಗಳು” ಎಂದು ಅವರು ಎಎನ್‌ಐ ಸುದ್ದಿ ಸಂಸ್ಥೆ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ.
ಅಸ್ಮಾ ಶಫೀಕ್ ಅವರು ಈಗ ಪಶ್ಚಿಮ ಉಕ್ರೇನ್ ಗೆ ಹೋಗುತ್ತಿದ್ದಾರೆ, ಅಲ್ಲಿಂದ ಅವರು ಗಡಿ ದಾಟಿ ಉಕ್ರೇನ್ ನಿಂದ ಹೊರಬರುತ್ತಾರೆ. ಆಕೆ ಶೀಘ್ರದಲ್ಲೇ ತನ್ನ ಕುಟುಂಬದೊಂದಿಗೆ ಮತ್ತೆ ಸೇರಿಕೊಳ್ಳುತ್ತಾಳೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.
#WATCH | Pakistan’s Asma Shafique thanks the Indian embassy in Kyiv and Prime Minister Modi for evacuating her.
Shas been rescued by Indian authorities and is enroute to Western #Ukraine for further evacuation out of the country. She will be reunited with her family soon:Sources pic.twitter.com/9hiBWGKvNp
— ANI (@ANI) March 9, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.