ಪಾಕ್ ಪ್ರಧಾನಿ ಷರೀಫ್ ಭ್ರಷ್ಟಾಚಾರ ತನಿಖೆ ಅಂತಿಮ ವರದಿ ಇಂದು ಸಲ್ಲಿಕೆ
Team Udayavani, Jul 10, 2017, 11:57 AM IST
ಇಸ್ಲಾಮಾಬಾದ್ : ಪಾಕ್ ಪ್ರಧಾನಿ ನವಾಜ್ ಷರೀಫ್ ವಿರುದ್ದದ ಪನಾಮಾಗೇಟ್ ಭ್ರಷ್ಟಾಚಾರ ಹಗರಣದ ತನಿಖೆ ನಡೆಸುತ್ತಿರುವ ಜಂಟಿ ತನಿಖಾ ತಂಡ ಇಂದು ಸುಪ್ರೀಂ ಕೋರ್ಟಿಗೆ ತನ್ನ ಅಂತಿಮ ವರದಿಯನ್ನು ಸಲ್ಲಿಸಲಿದೆ.
ಈ ವರ್ಷ ಮೇ ತಿಂಗಳಲ್ಲಿ ಪಾಕ್ ಸುಪ್ರೀಂ ಕೋರ್ಟ್ ಪ್ರಧಾನಿ ನವಾಜ್ ಷರೀಫ್ ಮತ್ತು ಅವರ ಕುಟುಂಬದವರು ಶಾಮೀಲಾಗಿದ್ದಾರೆನ್ನಲಾದ ಪನಾಮಾಗೇಟ್ ಭ್ರಷ್ಟಾಚಾರ ಹಗರಣದ ತನಿಖೆಗೆ ಆರು ಸದಸ್ಯರ ಜಂಟಿ ತನಿಖಾ ತಂಡವನ್ನು (ಜೆಐಟಿ) ರೂಪಿಸಿತ್ತು.
1990ರ ದಶಕದಲ್ಲಿ ನವಾಜ್ ಷರೀಫ್ ಮತ್ತು ಅವರ ಕುಟುಂಬದವರು ಲಂಡನ್‌ನಲ್ಲಿ ಅಪಾರ ಮೌಲ್ಯದ ಆಸ್ತಿ ಪಾಸ್ತಿಗಳನ್ನು ಖರೀದಿಸಲು ಬಳಸಿದ್ದ ಹಣದ ಮೂಲವನ್ನು ಪತ್ತೆ ಹಚ್ಚುವಂತೆ ತನಿಖಾ ತಂಡಕ್ಕೆ ಸೂಚಿಸಿತ್ತು.
ಜೆಐಟಿ ಅಂತಿಮ ವರದಿಯು ಪ್ರಧಾನಿ ಷರೀಫ್, ಅವರ ಸಹೋದರ – ಪಂಜಾಬ್ ಮುಖ್ಯಮಂತ್ರಿ ಶಹಬಾಜ್ ಷರೀಫ್, ಮಕ್ಕಳಾದ ಹುಸೇನ್ , ಹಸನ್ ಮತ್ತು ಮರ್ಯಾಮ್ ಷರೀಫ್ ಹಾಗೂ ಅಳಿಯ – ನಿವೃತ್ತ ಕ್ಯಾಪ್ಟನ್ ಮೊಹಮ್ಮದ್ ಸಫ್ದರ್ ಅವರ ಹೇಳಿಕೆಗಳನ್ನು ಒಳಗೊಂಡಿರುವುದಾಗಿ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.