ಭಾರತದ ಕಿರು ಸಾಕ್ಷ್ಯಚಿತ್ರಕ್ಕೆ ಆಸ್ಕರ್‌ ಪ್ರಶಸ್ತಿಯ ಹಿರಿಮೆ

Team Udayavani, Feb 26, 2019, 12:30 AM IST

x-19.jpg

ಲಾಸ್‌ ಏಂಜಲೀಸ್‌: ಇರಾನ್‌ ಮೂಲದ ಅಮೆರಿಕದ ಚಿತ್ರ ನಿರ್ದೇಶಕಿ ರಯ್ಕ ಝೆಹಾಬಿ ನಿರ್ದೇಶನದ “ಪೀರಿಯಡ್‌. ಎಂಡ್‌ ಆಫ್ ಸೆಂಟೆನ್ಸ್‌’ ಎಂಬ ಸಾಕ್ಷ್ಯ ಚಿತ್ರಕ್ಕೆ 2018-19ನೇ ಸಾಲಿನ ಪ್ರತಿಷ್ಠಿತ ಆಸ್ಕರ್‌ ಗೌರವ ಸಂದಿದೆ. ರವಿವಾರ ರಾತ್ರಿ, ಲಾಸ್‌ ಏಂಜಲೀಸ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಶ್ರೇಷ್ಠ ಕಿರು ಸಾಕ್ಷ್ಯ ಚಿತ್ರ ವಿಭಾಗದಲ್ಲಿ ಈ ಚಿತ್ರ ಪ್ರಶಸ್ತಿ ಬಾಚಿಕೊಂಡಿತು. ಭಾರತದ ನಿರ್ಮಾಪಕಿ ಗುನೀತ್‌ ಮೊಂಗಾ ಅವರ “ಶಿಖ್ಯಾ ಎಂಟರ್‌ಟೇನ್‌ಮೆಂಟ್‌’ ಸಂಸ್ಥೆಯಡಿ ಈ ಸಾಕ್ಷ್ಯಚಿತ್ರ ತಯಾರಾಗಿದೆ. ಉತ್ತರ ಪ್ರದೇಶದ ಹಾಪುರ್‌ ಜಿಲ್ಲೆಯಲ್ಲಿ ಇಡೀ ಚಿತ್ರವನ್ನು ಚಿತ್ರೀಕರಿ ಸಲಾಗಿದೆ.

ಭಾರೀ ಪೈಪೋಟಿ ನಡುವೆಯೂ, “ಬ್ಲಾಕ್‌ ಶೀಪ್‌’, “ಎಂಡ್‌ ಗೇಮ್‌’, “ಲೈಫ್ ಬೋಟ್‌’ ಹಾಗೂ “ಎ ನೈಟ್‌ ಅಟ್‌ ದ ಗಾರ್ಡನ್‌’ಗಳನ್ನು ಹಿಂದಿಕ್ಕಿ  “ಪೀರಿಯಡ್‌. ಎಂಡ್‌ ಆಫ್ ಸೆಂಟೆನ್ಸ್‌ ‘, ಪ್ರಶಸ್ತಿಗೆ ಭಾಜನವಾಗಿದ್ದು, ಚಿತ್ರ ನಿರ್ಮಾಪಕಿ, ಭಾರತ ಮೂಲದ ಗುನೀತ್‌ ಮೊಂಗಾ ಅವರಿಗೆ ರೋಮಾಂಚನ ತಂದಿತ್ತು. 

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮೊಂಗಾ, “”ಹೆಣ್ಣುಮಕ್ಕಳಲ್ಲಿ ನೈಸರ್ಗಿಕವಾಗಿ ನಡೆಯುವ ಋತುಚಕ್ರವನ್ನು ಭಾರತದ ಹಲವೆಡೆ ಇಂದಿಗೂ ಕೀಳಾಗಿ ನೋಡುವ ಪರಿಪಾಠವಿದೆ. ಅಂಥ ಸಾಮಾಜಿಕ ಪಿಡುಗುಗಳನ್ನು ಹೋಗಲಾ ಡಿಸುವ ಪ್ರಯತ್ನವನ್ನು ಈ ಸಾಕ್ಷ್ಯಚಿತ್ರದಲ್ಲಿ ಮಾಡಲಾಗಿದೆ. ಆದರೆ, ಇದಕ್ಕೆ ಆಸ್ಕರ್‌ ಸಿಗುತ್ತದೆ ಎಂದು ಭಾವಿಸಿರಲಿಲ್ಲ ” ಎಂದರು. ತಮಿಳುನಾಡಿನಲ್ಲಿ ತಾನೇ ಖುದ್ದು ಸ್ಯಾನಿಟರಿ ಪ್ಯಾಡ್‌ಗಳನ್ನು ತಯಾರಿಸಿ ಅದನ್ನು ಕಡಿಮೆ ಬೆಲೆಗೆ ಹಳ್ಳಿಗಳ ಯುವತಿಯರಿಗೆ ನೀಡಿ ಪ್ರಸಿದ್ಧರಾದ ಅರುಣಾಚಲಂ ಮುರುಗನಾಥಮ್‌ ಅವರೇ ಈ ಸಾಕ್ಷ್ಯಚಿತ್ರದಲ್ಲಿ ನಟಿಸಿರುವುದು ವಿಶೇಷ. ಇದೇ, ಮುರುಗನಾಥಮ್‌ ಜೀವನ ಕಥೆ ಆಧರಿಸಿ ಬಾಲಿವುಡ್‌ನ‌ಲ್ಲಿ ಈಗಾಗಲೇ “ಪ್ಯಾಡ್‌ ಮ್ಯಾನ್‌’ ಎಂಬ ಚಿತ್ರ ತೆರೆಕಂಡಿದೆ. 

ದಶಕದ ಅನಂತರದ ಮಿಂಚು: ಆಸ್ಕರ್‌ನಲ್ಲಿ ಭಾರತದ ಮಿಂಚು ಹರಿದು ಒಂದು ದಶಕದ ನಂತರ ಈಗ ಮತ್ತೆ ಭಾರತಕ್ಕೆ ಪ್ರತಿಷ್ಠಿತ ಗರಿ ಲಭಿಸಿದಂತಾಗಿದೆ. 2009ರಲ್ಲಿ ಖ್ಯಾತ ಸಂಗೀತ ನಿರ್ದೇಶಕ ಎ.ಆರ್‌. ರೆಹಮಾನ್‌, ಸೌಂಡ್‌ ಇಂಜಿನಿಯರ್‌ ರಸೂಲ್‌ ಪೂಕುಟ್ಟಿ , “ಸ್ಲಂ ಡಾಗ್‌ ಮಿಲಿಯನೇರ್‌’ ಚಿತ್ರಕ್ಕಾಗಿ ಕ್ರಮವಾಗಿ ಶ್ರೇಷ್ಠ ಸಂಗೀತ ನಿರ್ದೇಶಕ ಹಾಗೂ ಶ್ರೇಷ್ಠ ಧ್ವನಿ ಗ್ರಾಹಕ ಪ್ರಶಸ್ತಿಗಳನ್ನು ತಮ್ಮದಾಗಿಸಿ ಕೊಂಡಿದ್ದರು. ಕಿರು ಸಾಕ್ಷ್ಯಚಿತ್ರಕ್ಕೆ ಆಸ್ಕರ್‌ ಬಂದಿದ್ದನ್ನು ಹಿಂದಿ ಚಿತ್ರರಂಗದ ಖ್ಯಾತ ನಾಮರಾದ ಪ್ರಿಯಾಂಕಾ ಚೋಪ್ರಾ, ಅಕ್ಷಯ್‌ ಕುಮಾರ್‌ ಮುಂತಾದವರು ಟ್ವಿಟರ್‌ನಲ್ಲಿ ಕೊಂಡಾಡಿ, ಚಿತ್ರ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. 

“ಗ್ರೀನ್‌ ಬುಕ್‌’ ಶ್ರೇಷ್ಠ ಚಿತ್ರ  
ಜನಾಂಗಗಳ ನಡುವಿನ ಆಪ್ತತೆಯನ್ನು ಸಾರುವ “ಗ್ರೀನ್‌ ಬುಕ್‌’ ಚಿತ್ರ ಅತ್ಯುತ್ತಮ ಚಲನ ಚಿತ್ರವೆಂಬ ಹೆಗ್ಗಳಿಕೆಗೆ ಭಾಜನವಾದರೆ, “ರೋಮಾ’ ಚಿತ್ರದ ನಿರ್ದೇಶಕ ಅಲೊನ್ಸೊ ಕ್ಯುರಾನ್‌ಗೆ ಶ್ರೇಷ್ಠ ನಿರ್ದೇಶಕ ಪ್ರಶಸ್ತಿ, “ದ ಫೇವರಿಟ್‌’ ಚಿತ್ರಕ್ಕಾಗಿ ಒಲಿವಿಯಾ ಕೋಲ್ಮನ್‌ಗೆ ಶ್ರೇಷ್ಠ ನಟಿ, “ಬೊಹೇಮಿಯಾನ್‌ ರಾಪೊಡಿ’ ಚಿತ್ರಕ್ಕಾಗಿ ರಾಮಿ ಮಲೇಕ್‌ಗೆ ಶ್ರೇಷ್ಠ ನಟ ಪ್ರಶಸ್ತಿ ಸಂದವು.  

ಟಾಪ್ ನ್ಯೂಸ್

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

canada

Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-h-n

H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.