ಗೊಂದಲಕ್ಕೆ ಕಾರಣವಾದ ಪಾಕಿಸ್ಥಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ ಸುದ್ದಿ
ಅಂಗಾಂಗಗಳು ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ, ಚೇತರಿಕೆ ಸಾಧ್ಯವಿಲ್ಲ
Team Udayavani, Jun 10, 2022, 5:18 PM IST
ದುಬೈ :ಪಾಕಿಸ್ಥಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ವೆಂಟಿಲೇಟರ್‌ನಲ್ಲಿದ್ದು, ಅವರು ನಿಧನ ಹೊಂದಿದ್ದಾರೆ ಎಂದು ಕೆಲ ಪಾಕಿಸ್ಥಾನದ ಮಾಧ್ಯಮಗಳು ವರದಿ ಮಾಡಿದ್ದು ಗೊಂದಲಕ್ಕೆ ಕಾರಣವಾಗಿದೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 78 ರ ಹರೆಯದ ಮುಷರಫ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟ ನಂತರ ದುಬೈನಲ್ಲಿರುವ ಅಮೆರಿಕದ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.ಅವರನ್ನು ನೋಡಲು ಅವರ ಕುಟುಂಬ ಸದಸ್ಯರು ಈಗಾಗಲೇ ದುಬೈಗೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ.
ನಿವೃತ್ತ ಮಿಲಿಟರಿ ಜನರಲ್ ಆಗಿದ್ದ ಮುಷರಫ್ 1999 ರಲ್ಲಿ ಫೆಡರಲ್ ಸರ್ಕಾರದ ಯಶಸ್ವಿ ಮಿಲಿಟರಿ ಸ್ವಾಧೀನದ ನಂತರ ಪಾಕಿಸ್ಥಾನದ ಹತ್ತನೇ ಅಧ್ಯಕ್ಷರಾಗಿದ್ದರು. 2008 ರವರೆಗೆ ಅಧ್ಯಕ್ಷರಾಗಿದ್ದರು. ಅವರು ದೋಷಾರೋಪಣೆಯನ್ನು ತಪ್ಪಿಸಲು ರಾಜೀನಾಮೆಯನ್ನು ಸಲ್ಲಿಸಿದ್ದರು.
ಅವರು ಆಸ್ಪತ್ರೆಗೆ ದಾಖಲಾದ ತಕ್ಷಣ, ಮುಷರಫ್ ಸಾವಿನ ಬಗ್ಗೆ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು. ಕೆಲವು ಪಾಕಿಸ್ಥಾನಿ ಮಾಧ್ಯಮಗಳು ಈ ಹಿಂದೆ ಮುಷರಫ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು ಎಂದು ವರದಿ ಮಾಡಿದ್ದವು, ಆದರೆ ನಂತರ ವರದಿಗಳನ್ನು ರದ್ದುಗೊಳಿಸಲಾಯಿತು.
ಅಂಗಾಂಗಗಳು ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ, ಚೇತರಿಕೆ ಸಾಧ್ಯವಿಲ್ಲ ಎಂದು ಪರ್ವೇಜ್ ಮುಷರಫ್ ಕುಟುಂಬ ಹೇಳಿದೆ.
ಅವರು ವೆಂಟಿಲೇಟರ್‌ನಲ್ಲಿಲ್ಲ. ಕಳೆದ 3 ವಾರಗಳಿಂದ ಅವರ ಅನಾರೋಗ್ಯದ (ಅಮಿಲೋಡೋಸಿಸ್) ತೊಡಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೇತರಿಕೆ ಸಾಧ್ಯವಾಗದ ಮತ್ತು ಅಂಗಗಳು ಅಸಮರ್ಪಕವಾಗಿ ಕಾರ್ಯನಿರ್ವಹಿಸುವ ಕಠಿಣ ಹಂತದಲ್ಲಿದ್ದಾರೆ. ಅವರ ದಿನನಿತ್ಯದ ಜೀವನ ಸುಗಮವಾಗಿರಲಿ ಎಂದು ಪ್ರಾರ್ಥಿಸಿ,’’ ಎಂದು ಪರ್ವೇಜ್ ಮುಷರಫ್ ಅವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಸಂದೇಶವನ್ನು ಬರೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.