Flight ಶೌಚಾಲಯದಲ್ಲಿ ಮೃತಪಟ್ಟ ಪೈಲಟ್: 271 ಪ್ರಯಾಣಿಕರಿದ್ದ ವಿಮಾನ ತುರ್ತು ಲ್ಯಾಂಡಿಂಗ್!
Team Udayavani, Aug 17, 2023, 10:59 AM IST
ಪನಾಮ: ಒಟ್ಟು 271 ಮಂದಿ ಪ್ರಯಾಣಿಕರಿದ್ದ ವಿಮಾನದ ಪೈಲಟ್ ಒಬ್ಬರು ಮಾರ್ಗಮಧ್ಯೆ ಮೃತಪಟ್ಟಿದ್ದು, ಸಹ ಪೈಲಟ್ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಿದ ಘಟನೆ ನಡೆದಿದೆ. ಮಿಯಾಮಿಯಿಂದ ಚಿಲಿಗೆ ತೆರಳುತ್ತಿದ್ದ ಕಮರ್ಷಿಯಲ್ ಫ್ಲೈಟ್ ನಲ್ಲಿ ಈ ಘಟನೆ ನಡೆದಿದೆ.
ವಿಮಾನವನ್ನು ಪನಾಮದಲ್ಲಿ ತುರ್ತು ಲ್ಯಾಂಡ್ ಮಾಡಲಾಗಿದೆ. ಲ್ಯಾಟಂ ಏರ್ ಲೈನ್ಸ್ ನ ಮುಖ್ಯ ಪೈಲಟ್ 56 ವರ್ಷದ ಇವಾನ್ ಅಂದೂರ್ ಅವರಿಗೆ ವಿಮಾನದಲ್ಲಿ ಹಠಾತ್ ಹೃದಯ ಸ್ಥಂಭನವಾಗಿದೆ.
ವಿಮಾನದ ಸಹ-ಪೈಲಟ್ ಪನಾಮ ನಗರದ ಟೊಕುಮೆನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದರು. ಅಲ್ಲಿ ಅವರಿಗೆ ತ್ವರಿತವಾಗಿ ವೈದ್ಯಕೀಯ ನೆರವು ನೀಡಲು ವ್ಯವಸ್ಥೆ ಮಾಡಲಾಗಿತ್ತು.
ವಿಮಾನ ತುರ್ತು ಲ್ಯಾಂಡ್ ಮಾಡಲು ಅನುವಾಗುತ್ತಿದ್ದಂತೆ ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿದ್ದ ಇಬ್ಬರು ವೈದ್ಯರು ಮತ್ತು ಓರ್ವ ನರ್ಸ್, ಪೈಲಟ್ ಗೆ ತುರ್ತು ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಅವರ ಪ್ರಯತ್ನದ ಹೊರತಾಗಿಯೂ ಪೈಲಟ್ ಇವಾನ್ ಅವರನ್ನು ಉಳಿಸಲು ವಿಫಲರಾದರು ಎಂದು ವರದಿ ಹೇಳಿದೆ.
ಪ್ರಯಾಣಿಕರಿಗೆ ಪನಾಮದ ಹೋಟೆಲ್ ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಮರುದಿನ ಅವರಿಗೆ ಬೇರೆ ವಿಮಾನದಲ್ಲಿ ಪ್ರಯಾಣ ಕಲ್ಪಿಸಲಾಯಿತು ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
Burqa ban; ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಕಾನೂನು ಜಾರಿ: ಗರಿಷ್ಠ ದಂಡ
Court Verdict: ಹಿಂದೂ ಸಂತ ಚಿನ್ಮಯ್ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್
Chinmay Das: ಇಂದು ಬಾಂಗ್ಲಾದಲ್ಲಿ ಚಿನ್ಮಯ್ ದಾಸ್ ಬೇಲ್ ಅರ್ಜಿ ವಿಚಾರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.