![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 3, 2022, 10:24 PM IST
ವಾಷಿಂಗ್ಟನ್: ವಿಮಾನ ನಿಲ್ದಾಣದಿಂದ ವಿಮಾನವನ್ನೇ ಕದ್ದ ಪೈಲೆಟ್ ಒಬ್ಬ ನಗರದ ಕಟ್ಟಡವೊಂದಕ್ಕೆ ವಿಮಾನವನ್ನು ಡಿಕ್ಕಿ ಹೊಡೆಸುವೆ ಎಂದು ಬೆದರಿಕೆ ಹಾಕಿ, ಗಂಟೆಗಟ್ಟಲೆ ಕಾಡಿಸಿದ ವಿಚಿತ್ರ ಘಟನೆ ಅಮೆರಿಕದ ಮಿಸ್ಸಿಸ್ಸಿಪ್ಪಿಯ ತುಪೆಲೋ ನಗರದಲ್ಲಿ ಶನಿವಾರ ನಡೆದಿದೆ.
ಸುಮಾರು 4 ಗಂಟೆಗೂ ಹೆಚ್ಚು ಸಮಯದ ನಂತರ ಆ ವಿಮಾನ ಪತನಗೊಂಡಿದ್ದು, ಪೊಲೀಸರು ಪೈಲೆಟ್ ಅನ್ನು ವಶಕ್ಕೆ ಪಡೆದಿದ್ದಾರೆ.
ತುಪೆಲೋ ಪ್ರಾದೇಶಿಕ ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯಾದ ಪೈಲೆಟ್ ಈ ಕೆಲಸ ಮಾಡಿದವನು. ಆತ ಶನಿವಾರ ಬೆಳಗ್ಗೆಯೇ “ಬೀಚ್‌ಕ್ರಾಫ್ಟ್ ಕಿಂಗ್ ಏರ್ 90′ ಹೆಸರಿನ 9 ಸೀಟಿನ ಸಣ್ಣ ವಿಮಾನ ಕದ್ದು, ಹಾರಾಟ ಆರಂಭಿಸಿದ್ದಾನೆ. ನಂತರ ಪೊಲೀಸರೊಂದಿಗೆ ನೇರ ಸಂಪರ್ಕಕ್ಕೆ ಬಂದ ಆತ, ನಗರದ ವಾಲ್‌ಮಾರ್ಟ್ ಮಳಿಗೆಗೆ ವಿಮಾನವನ್ನು ಡಿಕ್ಕಿ ಹೊಡೆಸುತ್ತೇನೆ ಎಂದು ಬೆದರಿಸಿದ್ದಾನೆ.
4 ಗಂಟೆಗಳ ಕಾಲ ಅದೇ ಪ್ರದೇಶದಲ್ಲಿ ಆತ ಸುತ್ತಿದ್ದು ಜನರ ಆತಂಕಕ್ಕೆ ಕಾರಣವಾಗಿತ್ತು. ಪೊಲೀಸರು ವಾಲ್‌ಮಾರ್ಟ್ ಹಾಗೂ ಸುತ್ತಲಿನ ಪ್ರದೇಶಗಳ ಜನರನ್ನು ಬೇರೆಡೆಗೆ ಸ್ಥಳಾಂತರಿಸಿತ್ತು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.