ಪಿಎಂ ಮೋದಿಗೆ ಸಿಯೋಲ್ ಶಾಂತಿ ಪ್ರಶಸ್ತಿ
Team Udayavani, Feb 23, 2019, 12:30 AM IST
ಸಿಯೋಲ್: ದಕ್ಷಿಣ ಕೊರಿಯಾ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ 2018ನೇ ಸಾಲಿನ ಪ್ರತಿಷ್ಠಿತ “ಸಿಯೋಲ್ ಶಾಂತಿ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಅಂತಾರಾಷ್ಟ್ರೀಯ ಸಹಕಾರ ಮತ್ತು ವಿಶ್ವದ ಆರ್ಥಿಕ ಅಭಿವೃದ್ಧಿಗೆ ಮೋದಿಯವರು ನೀಡಿದ ಕೊಡುಗೆ ಪರಿಗಣಿಸಿ ಅವರಿಗೆ ಗೌರವ ನೀಡಲಾಗಿದೆ ಎಂದು ಪ್ರಶಸ್ತಿ ಸ್ಥಾಪಿಸಿದ ಸಿಯೋಲ್ ಶಾಂತಿ ಪ್ರತಿಷ್ಠಾನ ಶುಕ್ರವಾರ ತಿಳಿಸಿದೆ.
ಇದೇ ಸಂದರ್ಭದಲ್ಲಿ ಪ್ರಧಾನಿಯವರ ಜೀವನ-ಸಾಧನೆಯ ಕಿರುಚಿತ್ರ ಪ್ರದರ್ಶಿ ಸಲಾಗಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಧಾನಿ “ಪ್ರಶಸ್ತಿ ಮೊತ್ತ 2 ಲಕ್ಷ ಅಮೆರಿಕನ್ ಡಾಲರ್ ಅನ್ನು ಗಂಗಾ ಶುದ್ಧೀಕರಣ ಯೋಜನೆಗೆ ನೀಡುತ್ತೇನೆ. ಈ ಗೌರವ ಭಾರತೀಯರಿಗೆ ಸಲ್ಲುತ್ತದೆ’ ಎಂದಿದ್ದಾರೆ. 1990ರಲ್ಲಿ ಸ್ಥಾಪನೆಯಾದ ಈ ಪ್ರಶಸ್ತಿ ಸ್ವೀಕರಿಸು ವವರಲ್ಲಿ ಭಾರತದ ಪ್ರಧಾನಿ 14ನೇಯವರು.
ಕೊರಿಯಾಕ್ಕೆ ಕೃತಜ್ಞತೆ: ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಫೆ.14ರಂದು ಪುಲ್ವಾಮಾ ಘಟನೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಮತ್ತು ಭಾರತಕ್ಕೆ ಬೆಂಬಲ ನೀಡಿದ ದಕ್ಷಿಣ ಕೊರಿಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ. ಜತೆಗೆ ವಿಶ್ವಕ್ಕೆ ಪಿಡುಗಾಗಿರುವ ಭಯೋತ್ಪಾದನೆಯನ್ನು ಎಲ್ಲಾ ರಾಷ್ಟ್ರಗಳೂ ಸೇರಿಕೊಂಡು ಎದುರಿಸಬೇಕಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಆರು ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ
ಪ್ರಶಸ್ತಿ ಸ್ವೀಕಾರ ಕಾರ್ಯಕ್ರಮಕ್ಕೆ ಮೊದಲು ಪ್ರಧಾನಿ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್-ಜೆ-ಇನ್ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಮಾಧ್ಯಮ, ಮೂಲ ಸೌಕರ್ಯ ಅಭಿವೃದ್ಧಿ, ಸ್ಟಾರ್ಟಪ್, ಅಂತಾರಾಷ್ಟ್ರೀಯ ಅಪರಾಧ ನಿಯಂತ್ರಣಕ್ಕೆ ಸಹಕಾರ ಸೇರಿದಂತೆ ಆರು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಿದರು. ಕ್ರಿಸ್ತಶಕ 48ನೇ ಶತಮಾನದಲ್ಲಿ ಅಯೋಧ್ಯೆಯಿಂದ ಕೊರಿಯಾಕ್ಕೆ ತೆರಳಿದ್ದ ರಾಜ ಕಿಂಗ್- ಸುರೋನನ್ನು ವಿವಾಹವಾದ ರಾಣಿ ಹರ್ ಹ್ವಾಂಗ್ ಒಕೆ ಹೆಸರಲ್ಲಿ ಅಂಚೆ ಚೀಟಿ ಹೊರಡಿಸುವ ಬಗ್ಗೆಯೂ ಒಪ್ಪಂದ ಮಾಡಿಕೊಳ್ಳಲಾಗಿದೆ. ಜತೆಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಧ್ಯಕ್ಷರ ಅಧಿಕೃತ ನಿವಾಸ “ಬ್ಲೂ ಹೌಸ್’ನಲ್ಲಿ ಸಾಂಪ್ರದಾಯಿಕ ಸ್ವಾಗತವನ್ನೂ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.