ನೇಪಾಲದಲ್ಲಿ ಪ್ರಧಾನಿ ಮೋದಿ, ಜನಕಪುರ-ಅಯೋಧ್ಯಾ ಬಸ್ ಸೇವೆಗೆ ಚಾಲನೆ
Team Udayavani, May 11, 2018, 12:19 PM IST
ಕಾಠ್ಮಂಡು : ಎರಡು ದಿನಗಳ ನೇಪಾಲ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶುಕ್ರವಾರ ಜನಕಪುರದಲ್ಲಿನ 20ನೇ ಶತಮಾನದ ಜಾನಕಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ಅಲ್ಲಿ ಪೂಜೆ ಸಲ್ಲಿಸಿದರು.
ಪ್ರಧಾನಿ ಮೋದಿ ಅವರಿಂದು ನೇಪಾಲದ ಉನ್ನತ ರಾಜಕೀಯ ನಾಯಕರೊಂದಿಗೆ ಮಾತುಕತೆ ನಡೆಸಿ ದ್ವಿಪಕ್ಷೀಯ ಬಾಂಧವ್ಯಗಳನ್ನು ಮತ್ತಷ್ಟು ಸದೃಢಗೊಳಿಸಿ ಮೇಲ್ಮಟ್ಟಕ್ಕೆ ಒಯ್ಯುವ, ಉಭಯ ದೇಶಗಳ ವಿಶಾಸಾರ್ಹತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚರ್ಚೆ ನಡೆಸುವರು.
ಜಾನಕಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೋದಿ, ಜನಕಪುರ – ಅಯೋಧ್ಯಾ ನಡುವಿನ ಬಸ್ ಸೇವೆಯನ್ನು ಉದ್ಘಾಟಿಸಿದರು.
WATCH: PM Narendra Modi offers prayers at Janki Temple in #Nepal‘s Janakpur pic.twitter.com/a0alC1YvCV
— ANI (@ANI) May 11, 2018
”ಮಾತಾ ಜಾನಕಿಯ ಜನ್ಮ ಸ್ಥಳಕ್ಕೆ ಭೇಟಿ ನೀಡಲು ಒದಗಿರುವ ಈ ಅವಕಾಶದಿಂದ ನಾನು ಧನ್ಯನಾಗಿದ್ದೇನೆ. ಭಾರತ ಮತ್ತು ನೇಪಾಲ ಉಭಯ ದೇಶಗಳ ನಡುವಿನ ರಾಮಾಯಣ ವರ್ತುಲವನ್ನು ನಿರ್ಮಿಸುವಲ್ಲಿ ಜತೆಗೂಡಿ ಶ್ರಮಿಸಬೇಕಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.
ನೇಪಾಲದ ಪ್ರಧಾನಿ ಕೆ ಪಿ ಶರ್ಮಾ ಓಲಿ ಅವರು ಪ್ರಧಾನಿ ಮೋದಿ ಅವರ ಜತೆಗಿದ್ದರು. ರಾಮಾಯಣ ವರ್ತುಲ ಯೋಜನೆಯನ್ನು ಭಾರತೀಯ ಪ್ರವಾಸೋದ್ಯಮ ಸಚಿವಾಲಯವು ಹಮ್ಮಿಕೊಂಡಿದ್ದು ಇದು ಭಾರತ – ನೇಪಾಲ ಧಾರ್ಮಿಕ ಪ್ರವಾಸೋದ್ಯಮಕ್ಕೆ ಇಂಬು ನೀಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.