ಇಸ್ರೇಲ್ ಪ್ರವಾಸದ ವೇಳೆ ಮೋದಿ, ಮೋಶೆ ಭೇಟಿ; ಯಾರೀತ ಗೊತ್ತಾ?
Team Udayavani, Jun 29, 2017, 5:08 PM IST
ನವದೆಹಲಿ:ಜುಲೈ 4ರಿಂದ ನಾಲ್ಕು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರವಾಸ ಕೈಗೊಳ್ಳಲಿದ್ದು, ಈ ಸಂದರ್ಭದಲ್ಲಿ ಅವರು 2008ರ ಮುಂಬೈ ದಾಳಿಯಲ್ಲಿ ಬದುಕಿ ಉಳಿದಿದ್ದ ಸಂತ್ರಸ್ತ “ಬೇಬಿ ಮೋಶೆ’ಯನ್ನು ಭೇಟಿಯಾಗುವ ಸಾಧ್ಯತೆ ಇದ್ದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
2008ರಂದು ಮಂಬೈನಲ್ಲಿ ಸಂಭವಿಸಿದ್ದ ಭಯೋತ್ಪಾದನಾ ದಾಳಿಯಲ್ಲಿ ಇಸ್ರೇಲ್ ನ ರಿವ್ಕಾ ಮತ್ತು ಗಾವ್ರಿಯೆಲ್ ಹೋಟ್ಜ್ ಬರ್ಗ್ ದಂಪತಿ ಸಾವನ್ನಪ್ಪಿದ್ದರು. ಅದೃಷ್ಟವಶಾತ್ ಎಂಬಂತೆ ದಂಪತಿಯ 2 ವರ್ಷದ ಪುತ್ರ ಮೋಶೆ ಬದುಕುಳಿದಿದ್ದ.
ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆಯ ಭಯೋತ್ಪಾದಕರು ನಾರಿಮನ್ ಹೌಸ್ ಸೇರಿದಂತೆ ಐದು ಸ್ಥಳಗಳನ್ನು ಗುರಿಯಾಗಿರಿಸಿ ದಾಳಿ ನಡೆಸಿದ್ದರು. ಅಂದು ಉಗ್ರರ ದಾಳಿಯಲ್ಲಿ ಬಚಾವಾಗಿದ್ದ ಮೋಶೆಗೆ ಈಗ 10ರ ಹರೆಯ.
ನಾರಿಮನ್ ಹೌಸ್ ನೊಳಗೆ ಉಗ್ರರು ನಡೆಸಿದ ದಾಳಿಯಲ್ಲಿ ಮೋಶೆ ಪೋಷಕರು ಬಲಿಯಾಗಿದ್ದರು. ಅಂದು ಮೋಶೆಯನ್ನು ಭಾರತೀಯ ದಾದಿ ರಕ್ಷಿಸಿದ್ದರು. ಬಳಿಕ ಇಬ್ಬರನ್ನೂ ಇಸ್ರೇಲ್ ಗೆ ಕರೆತರಲಾಗಿತ್ತು. ಮೋಶೆ ಈಗ ಅಜ್ಜ, ಅಜ್ಜಿ ಜೊತೆ ವಾಸಿಸುತ್ತಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.