ಲಂಡನ್ನ ಮೆಟ್ರೋ ನಿಲ್ದಾಣದಲ್ಲಿ ಬಾಂಬ್ ಸ್ಫೋಟ
Team Udayavani, Sep 15, 2017, 2:02 PM IST
ಲಂಡನ್ : ನಗರದ ಪಶ್ಚಿಮ ಭಾಗದಲ್ಲಿರುವ ಪರ್ಸನ್ಸ್ ಗ್ರೀನ್ ಮೆಟ್ರೋ ನಿಲ್ದಾಣದ ಸುರಂಗ ಮಾರ್ಗದಲ್ಲಿ ಶುಕ್ರವಾರ ಬಾಂಬ್ ಸ್ಫೋಟಗೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಸ್ಫೋಟವಾಗುತ್ತಿದ್ದಂತೆ ಸ್ಥಳದಲ್ಲಿದ್ದ ನೂರಾರು ಪ್ರಯಾಣಿಕರು ಪ್ರಾಣ ಭೀತಿಯಿಂದ ದಿಕ್ಕಾಪಾಲಾಗಿ ಓಡಿದ್ದಾರೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಪೊಲೀಸರು ಭದ್ರತಾ ಪಡೆಗಳು ದೌಡಾಯಿಸಿದ್ದು ರಕ್ಷಣಾ ಕಾರ್ಯ ನಿರತರಾಗಿದ್ದಾರೆ. ಇಂಗ್ಲೆಂಡ್ನಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಪ್ರಾಥಮಿಕ ತನಿಖೆಯ ವೇಳೆ ಇದೊಂದು ಉಗ್ರ ದಾಳಿ ಎಂದು ಕಂಡು ಬಂದಿರುವುದಾಗಿ ಲಂಡನ್ ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.