Russia: ಡಾಗೆಸ್ತಾನ್‌ನಲ್ಲಿ ಭಯೋತ್ಪಾದಕರ ದಾಳಿ, ಪಾದ್ರಿ, ಪೊಲೀಸರು ಸೇರಿ 15 ಮಂದಿ ಮೃತ್ಯು
Team Udayavani, Jun 24, 2024, 8:47 AM IST
ರಷ್ಯಾ: ರಷ್ಯಾದ ಡಾಗೆಸ್ತಾನ್ ಪ್ರಾಂತ್ಯದಲ್ಲಿ ಪೊಲೀಸ್ ಪೋಸ್ಟ್, ಚರ್ಚ್ ಮತ್ತು ಯಹೂದಿಗಳ ಪೂಜಾ ಸ್ಥಳವನ್ನು ಗುರಿಯಾಗಿಸಿಕೊಂಡು ಪ್ರತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಚರ್ಚ್ ಪಾದ್ರಿ, ಪೊಲೀಸರು ಸೇರಿದಂತೆ ಹದಿನೈದು ಮಾಡಿ ಮೃತಪಟ್ಟಿದ್ದು ಜೊತೆಗೆ ಹಲವಾರು ಮಂದಿ ಗಾಯಗೊಂಡಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಭಯೋತ್ಪಾದಕ ದಾಳಿಯ ವೇಳೆ ಆರು ಭಯೋತ್ಪಾದಕರು ಮೃತಪಟ್ಟಿರುವುದಾಗಿ ಅಧಿಕಾರಿಗಳು ದೃಢ ಪಡಿಸಿದ್ದಾರೆ.
ದಾಗೆಸ್ತಾನ್‌ನ ಅತಿದೊಡ್ಡ ನಗರವಾದ ಮಖಚ್ಕಲಾ ಮತ್ತು ಕರಾವಳಿ ನಗರವಾದ ಡರ್ಬೆಂಟ್‌ನಲ್ಲಿ ಏಕಕಾಲದಲ್ಲಿ ಗುಂಡಿನ ದಾಳಿಗಳು ನಡೆದಿದ್ದು ಗವರ್ನರ್ ಸೆರ್ಗೆಯ್ ಮೆಲಿಕೋವ್ ಇದನ್ನು “ಭಯೋತ್ಪಾದಕ ದಾಳಿ” ಎಂದು ಹೇಳಿದ್ದಾರೆ.
ಅಧಿಕಾರಿಗಳ ಮಾಹಿತಿಯಂತೆ ಮಖಚ್ಕಲಾದಲ್ಲಿ ನಾಲ್ವರು ಮತ್ತು ಡರ್ಬೆಂಟ್‌ನಲ್ಲಿ ಇಬ್ಬರು ಬಂದೂಕುಧಾರಿಗಳನ್ನು ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ ಪೊಲೀಸ್ ಅಧಿಕಾರಿಗಳು, ನಾಗರಿಕರು ಸೇರಿದಂತೆ ಡರ್ಬೆಂಟ್‌ನಲ್ಲಿ 40 ವರ್ಷಗಳಿಗಳಿಗೂ ಹೆಚ್ಚು ಕಾಲ ಕರ್ತವ್ಯ ನಿರ್ವಹಿಸಿದ ಆರ್ಥೊಡಾಕ್ಸ್ ಪಾದ್ರಿ ಕೂಡ ಸೇರಿದ್ದಾರೆ ಎಂದು ಮೆಲಿಕೋವ್ ಹೇಳಿದರು.
ಘಾತಯೇ ಕುರಿತು ಟೆಲಿಗ್ರಾಮ್ ಮಾಹಿತಿ ಹಂಚಿಕೊಂಡ ಮೆಲಿಕೋವ್ ಭಾನುವಾರ ಸಂಜೆ ದಾಳಿಕೋರರ ತಂಡ ಡರ್ಬೆಂಟ್ ಮತ್ತು ಮಖಚ್ಕಲಾದಲ್ಲಿ ಗುಂಡಿನ ದಾಳಿ ನಡೆಸುವ ಮೂಲಕ ಇಲ್ಲಿನ ಪರಿಸ್ಥಿತಿಯನ್ನು ಅಸ್ಥಿರಗೊಳಿಸಲು ಯತ್ನಿಸಲಾಗಿದೆ, ಈ ಭಯೋತ್ಪಾದಕ ದಾಳಿಯ ಹಿಂದೆ ಯಾರಿದ್ದಾರೆ ಮತ್ತು ಅವರು ಯಾವ ಉದ್ದೇಶವನ್ನು ಇಟ್ಟುಕೊಂಡು ಈ ದಾಳಿ ನಡೆಸಿದ್ದಾರೆ ಎಂಬುದು ನಮಗೆ ಚೆನ್ನಾಗಿ ಅರಿತಿದೆ, ಇದು ಯುದ್ಧದ ಮುನ್ಸೂಚನೆಯೂ ಆಗಿರಬಹುದು ಯಾವುದಕ್ಕೂ ನಾವು ಸಿದ್ದರಿದ್ದೇವೆ ಎಂದು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದ ವಿಚಾರವನ್ನು ಮುಂದಿಟ್ಟುಕೊಂಡು ವಿಚಾರ ಪ್ರಸ್ತಾಪಿಸಿದ್ದಾರೆ.
ಡರ್ಬೆಂಟ್ ಮತ್ತು ಮಖಚ್ಕಲಾದಲ್ಲಿ ನಮ್ಮ ತಂಡ ಕಾರ್ಯಾಚರಣೆ ನಡೆಸಿ ಆರು ಭಯೋತ್ಪಾದಕರನ್ನು ಮಟ್ಟ ಹಾಕಿದೆ ಅಲ್ಲದೆ ಭಯೋತ್ಪಾದಕರ ದಮನಕ್ಕೆ ಕಾರ್ಯಾಚರಣೆ ಕೂಡ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Daily Horoscope: ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಸೂಕ್ತ ಮಾರ್ಗದರ್ಶನ ಲಭ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.